Karnataka Rain: ಇಂದು, ನಾಳೆ ಹಲವು ಜಿಲ್ಲೆಗಳಿಗೆ ವರುಣಾಗಮನ

Karnataka Rain: ರಾಜ್ಯದ ಉತ್ತರ ಒಳನಾಡಿನ ಕೆಲವೆಡೆ ಮತ್ತು ಕರಾವಳಿ- ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದ್ದು, ಇನ್ನೂ ಎರಡು ದಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Teachers Transfer: ಶಿಕ್ಷಕರ ವರ್ಗಾವಣೆ; ಸಕಲ ಸಿದ್ಧತೆ ಮಾಡಿಕೊಂಡ ಶಿಕ್ಷಣ ಇಲಾಖೆ

ಏ.20ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ

ಇದನ್ನೂ ಓದಿ: WhatsApp Ban: ಐಫೋನ್ ಬಳಕೆದಾರರಿಗೆ ಆಘಾತ- ವಾಟ್ಸಪ್ ನಿಷೇಧಿಸಲು ಸರ್ಕಾರ ಆದೇಶ !!

ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ , ಒಂದೆರಡು ಕಡೆಗಳಲ್ಲಿ ಮಳೆಯಾಗುವ ರ್ಗಿ, ಸಾಧ್ಯತೆಯಿದೆ.

ಏ.21ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏ.18ರ ಬೆಳಗ್ಗೆಯಿಂದ ಏ.19ರ ಬೆಳಗ್ಗೆವರೆಗೆ ರಾಜ್ಯದ ಹಲವು ಹಲವೆಡೆ ಮಳೆಯಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಶುಕ್ರವಾರವೂ ಗುಡುಗು, ಸಿಡಿಲು, ಮಿಂಚಿನ ಆರ್ಭಟದ ಜತೆ ಮಳೆ ಮುಂದುವರಿದಿದ್ದು ಹಲವೆಡೆ ಬಿರು ಮಳೆ ಸುರಿದಿದೆ.

ಶಿವಮೊಗ್ಗ ಜಿಲ್ಲೆಯ ವಿವಿಧೆಡೆಯೂ ಶುಕ್ರವಾರ ಸಂಜೆ ಗುಡುಗು, ಸಿಡಿಲು ಆರ್ಭಟದೊಂದಿಗೆ ಸಾಧಾರಣದಿಂದ ಜೋರು ಮಳೆ ಸುರಿಯಿತು. ಶಿವಮೊಗ್ಗ, ಶಿಕಾರಿಪುರ, ಸಾಗರ, ಭದ್ರಾವತಿ ತಾಲೂಕಿ ನಲ್ಲಿ ಚದುರಿದಂತೆ ಮಳೆ ಸುರಿಯಿತು. ಕೆಲವೆಡೆ ಮಳೆಗಿಂತ ಬಿರುಗಾಳಿ, ಸಿಡಿಲಿನಿಂದ ಹಾನಿಯೇ ಅಧಿಕವಾಗುತ್ತಿದೆ.

Leave A Reply

Your email address will not be published.