Gadag: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ಪ್ರಕರಣ; ಹಿರಿಮಗನಿಂದಲೇ ಕೊಲೆಗೆ ಸುಪಾರಿ

Share the Article

Gadag: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಪ್ರಕರಣಕ್ಕೆ ರೋಚಕ ತಿರುವು ದೊರಕಿದೆ. ಗದಗದ ದಾಸರ ಓಣಿಯಲ್ಲಿ ಮಧ್ಯರಾತ್ರಿಯಲ್ಲಿ ನಡೆದ ಈ ಭೀಕರ ಹತ್ಯೆಗೆ ಸ್ವಂತ ಮಗನೇ ಸುಪಾರಿ ನೀಡಿರುವ ಭಯಾನಕ ಸುದ್ದಿ ಇದೀಗ ಹೊರ ಬಿದ್ದಿದೆ.

ನಗರ ಸಭೆ ಉಪಾಧ್ಯಕ್ಷೆ ಕಿರಿಯ ಮಗ ಕಾರ್ತಿಕ್‌ ಬಾಕಳೆ (28), ಪರಶುರಾಮ ಹಾದಿಮನಿ (55), ಪತ್ನಿ ಲಕ್ಷ್ಮೀ ಹಾದಿಮನಿ (45), ಪುತ್ರಿ ಆಕಾಂಕ್ಷಾ ಹಾದಿಮನಿ (16) ಕೊಲೆಯಾದ ದುರ್ದೈವಿಗಳು.

ಪ್ರಕಾಶ್‌ ಬಾಕಳೆ ಅವರ ಹಿರಿಯ ಮಗ ವಿನಾಯಕ್‌ ಬಾಕಳೆ ಕೊಲೆಗೆ ಸುಪಾರಿ ನೀಡಿರುವುದಾಗಿ ತಿಳಿದು ಬಂದಿದೆ.

ಮಹಾರಾಷ್ಟ್ರ ಮೂಲದ ಫಯಾಜ್‌ ಆಂಡ್‌ ಗ್ಯಾಂಗ್‌ಗೆ ಸುಪಾರಿ ನೀಡಿದ್ದು, ಈ ಕೊಲೆ ಹಿಂದೆ ಆಸ್ತಿ ಹಂಚಿಕೆ ವಿಷಯ ಇರುವ ಕುರಿತು ಅನುಮಾನ ಮೂಡಿದೆ. ಇದೀಗ ಪೊಲೀಸರು ವಿನಾಯಕ್‌ ಬಾಕಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಕೊಲೆಯಾದ ಕಾರ್ತಿಕ್‌ ಬಾಕಳೆಯ ಮದುವೆ ಕಾರ್ಯಕ್ರಮಕ್ಕೆಂದು ಬಂದವರನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು.

ಇದನ್ನೂ ಓದಿ: Pradhan Mantri Matru Vandana Yojana: ಗರ್ಭಿಣಿಯರಿಗಾಗಿ ಸರ್ಕಾರದ ಈ ಯೋಜನೆಯ ಬಗ್ಗೆ ನಿಮಗೆ ತಿಳಿದಿದೆಯೇ? : ಯೋಜನೆಯಲ್ಲಿ ನೊಂದಾಯಿಸಿಕೊಂಡರೆ ₹5000 ಆರ್ಥಿಕ ನೆರವು

Leave A Reply