Home News Muruga Sharanaru: ಮತ್ತೆ ಜೈಲು ಪಾಲಾದ ಮುರುಘಾ ಶ್ರೀ – ಹೈಕೋರ್ಟ್ ಜಾಮೀನು ರದ್ದು ಮಾಡಿದ...

Muruga Sharanaru: ಮತ್ತೆ ಜೈಲು ಪಾಲಾದ ಮುರುಘಾ ಶ್ರೀ – ಹೈಕೋರ್ಟ್ ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್ !!

Hindu neighbor gifts plot of land

Hindu neighbour gifts land to Muslim journalist

Muruga Sharanaru: ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಮಠಾಧೀಶ ಡಾ.ಶಿವಮೂರ್ತಿ ಮುರುಘಾ ಶರಣರು(Shivamurthy Muruga Sharanaru) ಕೆಲ ತಿಂಗಳ ಹಿಂದಷ್ಟೇ ಹೈಕೋರ್ಟ್ ನೀಡಿದ ಜಾಮೀನಿನ ಮೇಲೆ ಹೊರ ಬಂದಿದ್ದರು. ಆದರೀಗ ಶರಣರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು ಹೈಕೋರ್ಟ್(High Court) ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್(Supreme Court) ರದ್ದು ಮಾಡಿದೆ. ಹೀಗಾಗಿ ಮುರುಘಾ ಶ್ರೀಗಳಿಗೆ ಮತ್ತೆ ಜೈಲೇ ಗತಿ ಆಗಿದೆ.

ಪೋಕ್ಸೋ ಪ್ರಕರಣ(POCSO Case) ದಲ್ಲಿ ಜೈಲು ಪಾಲಾಗಿದ್ದ ಚಿತ್ರದುರ್ಗ ಮುರುಘರಾಜೇಂದ್ರ ಶರಣರಿಗೆ ಹೈಕೋರ್ಟ್‌ ನೀಡಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಅಲ್ಲಿ ಪ್ರಕರಣ ವಿಚಾರಣೆ ಮಾಡಿದ ಸುಪ್ರೀಂ ಕೋರ್ಟ್‌ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿ ಪುನಃ ಜೈಲಿಗೆ ಕಳುಹಿಸುವಂತೆ ಆದೇಶ ಹೊರಡಿಸಿದೆ.

ಅಂದಹಾಗೆ ಕಳೆದ ವರ್ಷದ ಆಗಸ್ಟ್‌ 26ರಂದು ಶರಣರು ಹಾಗೂ ಐದು ಮಂದಿ ವಿರುದ್ದ ಮಠದ ವಿದ್ಯಾರ್ಥಿನಿಯರಿಬ್ಬರು ಲೈಂಗಿಕ ದೌರ್ಜನ್ಯದ ಪ್ರಕರಣವನ್ನು ಮೈಸೂರಿನ ನಜರ್‌ಬಾದ್‌ ಠಾಣೆಯಲ್ಲಿ ದಾಖಲಿಸಿದ್ದರು. ಇದನ್ನು ಚಿತ್ರದುರ್ಗಕ್ಕೆ ವರ್ಗಾಯಿಸಲಾಗಿತ್ತು. ಆನಂತರ ಶರಣರನ್ನು ಬಂಧಿಸಲಾಗಿತ್ತು. ಇದಾದ ನಂತರ 2022ರ ಅಕ್ಟೋಬರ್‌ 19ರಂದು ಮತ್ತೊಂದು ಪ್ರಕರಣ ದಾಖಲಾಗಿತ್ತು.