Neha Hiremath: ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣ; ವಿಶೇಷ ನ್ಯಾಯಾಲಯ ಸ್ಥಾಪನೆ

Neha Hiremath: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಎಂಬಾಕೆಯನ್ನು ಕಾಲೇಜು ಆವರಣದಲ್ಲಿಯೇ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲು ಸರಕಾರ ಕೈಗೊಂಡಿದೆ.

 

ಇದನ್ನೂ ಓದಿ:  K.S.Ishwarappa: ಬಿಜೆಪಿಯಿಂದ 6 ವರ್ಷ ಉಚ್ಛಾಟನೆ; ಇದಕ್ಕೆ ಹೆದರುವುದಿಲ್ಲ-ಗುಡುಗಿದ ಈಶ್ವರಪ್ಪ

ರಾಜ್ಯದಾದ್ಯಂತ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಕಾರಣದಿಂದ ಸರಕಾರ ಕುಮಾರಿ ನೇಹಾ ಹೀನಾಯ ಹತ್ಯೆ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ಮಾಡಿದ್ದಾರೆ.

ಇದನ್ನೂ ಓದಿ:  Anaconda Snake: ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 10 ಅನಕೊಂಡ ಹಾವು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಪತ್ತೆ

ಹಾಗೂ ಈ ಕುರಿತು ಸಿಎಂ ಅನುಮತಿ ನೀಡಿದ್ದಾರೆ. ಹಾಗಾಗಿ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರು ಕೂಡಲೇ ವಿಶೇಷ ನ್ಯಾಯಾಲಯದ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಕಾನೂನು ಸಚಿವ ಎಚ್‌.ಕೆ. ಪಾಟೀಲ್‌ ಆದೇಶಿಸಿದ್ದಾರೆ.

ನೇಹಾ ಹತ್ಯಾ ಪ್ರಕರಣವು ಜನರ ಮನಸ್ಸಿನಿಂದ ಮಾಸುವ ಮುನ್ನವೇ ಕೊಲೆ ಅಪರಾಧಿಗೆ ಸೂಕ್ತ ಶಿಕ್ಷೆಯಾಗಬೇಕೆಂದು ತೀವ್ರ ಪ್ರತಿಭಟನೆಗಳು ರಾಜ್ಯಾದ್ಯಂತ ನಡೆದಿದೆ.

Leave A Reply

Your email address will not be published.