Prajwal Revanna: JDS ನಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ – ಎಚ್ ಡಿ ದೇವೇಗೌಡ ಮಹತ್ವದ ಆದೇಶ !!
Prajwal Revanna: ಅಶ್ಲೀಲ ವಿಡಿಯೋ ವಿಚಾರವಾಗಿ ಸಿಲುಕಿ ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿರುವ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಅವರನ್ನ ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ(H D Devegowda) ಆದೇಶ ಹೊರಡಿಸಿದ್ದಾರೆ.
ಹೌದು, ಜೆಡಿಎಸ್(JDS) ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರೀಗ, ಸ್ವತಃ ತಮ್ಮ ಮೊಮ್ಮಗನನ್ನೇ ಪಕ್ಷದಿಂದ ಉಚ್ಛಾಟನೆ ಮಾಡಲು ಆದೇಶಿಸಿದ್ದಾರೆ. ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ್ದು, ಅಂತಾ ಆರೋಪ ಮಾಡಿದ್ದ ಸಾವಿರಾರು ಅಶ್ಲೀಲ ವಿಡಿಯೋ ವೈರಲ್ ಆಗಿದ್ದು, ಇದು ಕುಟುಂಬ, ಪಕ್ಷ ಹಾಗೂ ಮೈತ್ರಿ ಸಂಬಂಧಕ್ಕೆ ಭಾರೀ ನಷ್ಟ ಆಗುವ ಕಾರಣ, ಈ ಪ್ರಕರಣ ದೊಡ್ಡ ಮಟ್ಟದಲ್ಲಿ ಬೆಂಕಿ ಹಚ್ಚಿರುವ ಕಾರಣಕ್ಕೆ ದೊಡ್ಡ ಗೌಡರು ಮಹತ್ವದ ನಿರ್ಧಾರ ಮಾಡಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಮಗನ ಪೆನ್‌ಡ್ರೈವ್ ಪ್ರಕರಣ; ಎಚ್ ಡಿ ರೇವಣ್ಣ ಫಸ್ಟ್ ರಿಯಾಕ್ಷನ್ !!
ವಿಚಾರಕ್ಕೆ ದೊಡ್ಡ ಮಟ್ಟದಲ್ಲಿ ಸಂಚಲನ ಸೃಷ್ಟಿ ಆಗಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬಕ್ಕೂ ಮುಜುಗರ ಉಂಟಾಗಿತ್ತು. ಅಲ್ಲದೆ, ಸ್ವತಃ ಜೆಡಿಎಸ್(JDS) ಶಾಸಕರೇ ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳಬೇಕು. ಪ್ರಜ್ವಲ್ ರೇವಣ್ಣನ ಜೆಡಿಎಸ್ ಪಕ್ಷದಿಂದಲೇ ಉಚ್ಛಾಟನೆ ಮಾಡಬೇಕು ಎಂದು ಬಂಡಾಯ ಎದ್ದಿದ್ದರು. ಈ ವಿಚಾರ ಜೆಡಿಎಸ್ ಪಕ್ಷದ ವರಿಷ್ಠರಿಗೆ ಭಯ ಮೂಡಿಸಿತ್ತು. ಅಲ್ಲದೆ ಜೆಡಿಎಸ್ ಶಾಸಕರು ಪಕ್ಷವನ್ನೇ ಬಿಟ್ಟು ಹೋಗುವ ಸಾಧ್ಯತೆ ದಟ್ಟವಾಗಿದೆ. ಇದೇ ಕಾರಣಕ್ಕೆ ದಿಢೀರ್ ಪ್ರಜ್ವಲ್ ರೇವಣ್ಣ ಅವರನ್ನು ಉಚ್ಛಾಟನೆ ಮಾಡಲಾಗಿದೆ ಎಂಬ ಗುಸು ಗುಸು ಕೂಡ ಶುರುವಾಗಿದೆ.
ಇದನ್ನೂ ಓದಿ:ಎಚ್ ಡಿ ರೇವಣ್ಣ ಕುಟುಂಬ ಮತ್ತು ನಮ್ಮ ಕುಟುಂಬ ಬೇರೆ ಬೇರೆ – ಎಚ್ ಡಿ ಕುಮಾರಸ್ವಾಮಿ