Puttur: ಕೆಲಸದ ಆಮಿಷ ನೀಡಿ ಅತ್ಯಾಚಾರ ಯತ್ನ ಪ್ರಕರಣ; ಪ್ರಮುಖ ಆರೋಪಿಗೆ ಜಾಮೀನು
Puttur: ಕೆಲಸದ ಆಮಿಷ ನೀಡಿ ಯುವತಿಯನ್ನು ಕರೆಯಿಸಿಕೊಂಡು ಆಕೆಯ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ನ್ಯಾಯಾಂಗ ಬಂಧನದಲ್ಲಿ ಇದ್ದ ಪ್ರಮುಖ ಆರೋಪಿ ಹರ್ಷಿತ್ ಎಂಬುವವನಿಗೆ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
ಇದನ್ನೂ ಓದಿ: Love Jihad Case: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್‌ಜಿಹಾದ್ ಕೇಸ್? ಬಾಲಕಿಯನ್ನು ಪುಸಲಾಯಿಸಿ ಕರೆತಂದ ಅನ್ಯಕೋಮಿನ ಯುವಕ
ಮಾ.13 ರಂದು ಈ ಘಟನೆ ನಡೆದಿದ್ದು, ಪೊಲೀಸರು ಕೇಸು ದಾಖಲಿಸಿ ನಾಲ್ವರನ್ನು ಬಂಧನ ಮಾಡಿದ್ದರು. ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ಬನ್ನೂರು ಬೈಲು ಎಂಬಲ್ಲಿನ ಬಾಡಿಗೆ ಮನೆಯಲ್ಲಿ ಈ ಘಟನೆ ನಡೆದಿತ್ತು.
ಇದನ್ನೂ ಓದಿ: Annapurna Suicide Case: ಭೋಜ್‌ಪುರಿ ನಟಿ ಅಮೃತಾ ಪಾಂಡೆ ಆತ್ಮಹತ್ಯೆ
ಘಟನೆಯ ಹಿನ್ನೆಲೆ:
ಮಂಗಳೂರಿನ ವಾಮಂಜೂರು ಮೂಲದ ಯುವತಿಗೆ ಪುತ್ತೂರಿನ ಯುವಕನೊಬ್ಬನ ಪರಿಚಯವು ಇನ್‌ಸ್ಟಾಗ್ರಾಮ್ ಮೂಲಕ ಆಗಿತ್ತು. ಯುವತಿ ಕೋರಿಕೆಯ ಮೇರೆಗೆ ಯುವಕ ಪುತ್ತೂರಿನಲ್ಲಿ ಆಕೆಗೆ ಉದ್ಯೋಗ ನೀಡುವುದಾಗಿ ತನ್ನ ಸ್ನೇಹಿತರಲ್ಲಿ ತಿಳಿಸಿದ್ದ. ಆದರೆ ಯುವಕನ ಸ್ನೇಹಿತರು ಇದನ್ನು ದುರುಪಯೋಗ ಪಡಿಸಿಕೊಂಡಿದ್ದರು. ಯುವತಿಯು ತನ್ನ ಸ್ನೇಹಿತೆಯ ಜೊತೆ ಮಾ.13 ರಂದು ಪುತ್ತೂರಿಗೆ ಬಂದಾಗ ಆರೋಪಿಗಳು ಪ್ರೊಪೈಲ್ ಬರೆಯಲು ಹೇಳಿ ಬನ್ನೂರು ಗ್ರಾಮದ ಬನ್ನೂರುಬೈಲು ಬಳಿಯ ನಿರ್ಜನ ಮನೆಯೊಂದಕ್ಕೆ ಕರೆದುಕೊಂಡು ಹೋಗಿದ್ದರು. ಅಲ್ಲಿ ಓರ್ವ ಯುವತಿಯನ್ನು ಹೊರಗೆ ಕುಳ್ಳಿರಿಸಿ, ಇನ್ನೋರ್ವ ಯುವತಿಯನ್ನು ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿರುವ ಕುರಿತು ಆರೋಪಿಸಲಾಗಿತ್ತು.
ಈ ಘಟನೆಯ ನಂತರ ಆರೋಪಿ ಯುವಕರು ಅಲ್ಲಿಂದ ಪರಾರಿಯಾಗಿದ್ದು, ಸಂತ್ರಸ್ತೆ ಯುವತಿ ನಂತರ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿ ಪುತ್ತೂರು ಮಹಿಳಾ ಠಾಣಾ ಪೊಲೀಸರಿಗೆ ದೂರು ನೀಡಿದ್ದರು.
ದೂರು ಸ್ವೀಕರಿಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧನ ಮಾಡಿದ್ದರು. ನಂತರ ಆರೋಪಿಗಳಿಗೆ ಬಾಡಿಗೆ ಮನೆ ನೀಡಿ ಆಶ್ರಯ ನೀಡಿದ್ದ ಇನ್ನಿಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು.
ಆರೋಪಿಗಳ ಪೈಕಿ ಮನು ಯಾನೆ ಮನ್ವಿತ್‌ಗೆ ಆರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಜಾಮೀನು ಮಂಜೂರು ಮಾಡಿತ್ತು. ಇದೀಗ ಪ್ರಮುಖ ಆರೋಪಿ ಹರ್ಷಿತ್‌ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.