Holiday: ಇಂದು ಶಾಲಾ ಕಾಲೇಜುಗಳಿಗೆ ರಜೆ !!

Holiday: ಹಾಲಿ ಸಂಸದ, ಮಾಜಿ ಸಜಿವ, ದಲಿತ ಅಭಿವೃದ್ಧಿ ಹರಿಕಾರ ವಿ ಶ್ರೀನಿವಾಸ್ ಪ್ರಸಾದ್ ಅವರ ನಿಧನದ ಹಿನ್ನೆಲೆಯಲ್ಲಿ ಇಂದು (ಏಪ್ರಿಲ್ 30) ಮೈಸೂರು ಮತ್ತು ಚಾಮರಾಜನಗರ(Mysore and Chamarajanagr) ಜಿಲ್ಲೆಯ ಎಲ್ಲಾ ಸರ್ಕಾರಿ ಕಛೇರಿಗಳಿಗೂ ಹಾಗೂ ಎಲ್ಲಾ ಶಾಲಾ ಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆ ಘೋಷಣೆ ಮಾಡಿದೆ.

ಇದನ್ನೂ ಓದಿ:  PM Modi: ಮೋದಿಗೆ 6 ವರ್ಷ ಚುನಾವಣೆ ನಿಷೇಧ ಕೋರಿ ಸಲ್ಲಿಸಿದ್ದ ಅರ್ಜಿ ವಜಾ !!

ಹೌದು, ಚಾಮರಾನಗರ ಬಿಜೆಪಿ ಸಂಸದ ವಿ ಶ್ರೀನಿವಾಸ್ ಪ್ರಸಾದ್( Srinivas Prasad ) ನಿಧನದ ಹಿನ್ನೆಲೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ(Mysuru And Chamarajnagar Districts) ಎಲ್ಲಾ ಸರ್ಕಾರಿ ಕಛೇರಿ, ಶಾಲಾ ಕಾಲೇಜುಗಳಿಗೆ ಸರ್ಕಾರಿ, ಅನುದಾನ ಪಡೆಯುವ ಎಲ್ಲಾ ವಿದ್ಯಾ ಸಂಸ್ಥೆಗಳಿಗೂ ದಿನಾಂಕ 30.04.2024ರಂದು ರಜೆ ಘೋಷಣೆ(government holiday) ಮಾಡಲಾಗಿದೆ.

ಸದರಿ ಆದೇಶವು ನೆಗೋಷಿಯೇಬಲ್ ಇನ್ಸ್‌ಸ್ಟ್ರುಮೆಂಟ್ ಆಕ್ಟ್ 1881ರ ಪ್ರಕಾರವು ಕೂಡ ಸಾರ್ವಜನಿಕ ರಜೆ ಎಂದು ಘೋಷಿಸಲಾಗಿದೆ. ಮೃತ ಶ್ರೀನಿವಾಸ್ ಪ್ರಸಾದ್ ಅವರ ಅಂತ್ಯಕ್ರಿಯೆಯನ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವಂತೆ ಸರ್ಕಾರ ಆದೇಶದಲ್ಲಿ ತಿಳಿಸಿದೆ.

Leave A Reply

Your email address will not be published.