Job Alert: ಬೆಂಗಳೂರಿನಲ್ಲಿ ಲೈಬ್ರರಿ ಟ್ರೈನಿಯಲ್ಲಿ ಉದ್ಯೋಗವಕಾಶ! ಒಳ್ಳೇ ಸ್ಯಾಲರಿ ಕೂಡ ಕೊಡ್ತಾರೆ

Job Alert: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಲೈಬ್ರರಿ ಟ್ರೈನಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಮೇ 29, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.

ಇದನ್ನೂ ಓದಿ:  Prajwal Revanna: ಪ್ರಜ್ವಲ್‌ ರೇವಣ್ಣ ಕರೆತರಲು ಕೇಂದ್ರದ ನೆರವು ಬೇಕು-ಗೃಹ ಸಚಿವ ಪರಮೇಶ್ವರ್‌

ಶೈಕ್ಷಣಿಕ ಅರ್ಹತೆ:

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಲೈಬ್ರರಿ & ಇನ್ಫರ್ಮೇಶನ್ ಸೈನ್ಸ್ನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ:  Prajwal Revanna: ಪ್ರಜ್ವಲ್‌, ರೇವಣ್ಣರನ್ನು ಬಂಧಿಸದೇ ಇರಲು ಕಾರಣವೇನು? ಗೃಹ ಸಚಿವರು ನೀಡಿದ ಕಾರಣ ಇಲ್ಲಿದೆ

ವಯೋಮಿತಿ:

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 26 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

ಮಾಸಿಕ ₹ 30,000

ಉದ್ಯೋಗದ ಸ್ಥಳ:

ಬೆಂಗಳೂರು

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸಂದರ್ಶನ

ಅರ್ಜಿ ಹಾಕೋದು ಹೇಗೆ?

ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.

Leave A Reply

Your email address will not be published.