APL Card: ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ; ಜೂನ್ ನಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ

APL Card: ಕಳೆದ ಒಂದೂವರೆ ವರ್ಷದಿಂದ ಸ್ಥಗಿತವಾಗಿದ್ದ ಎಪಿಎಲ್ ಕಾರ್ಡ್ ವಿತರಣೆಗೆ ಮರುಚಾಲನೆ ನೀಡಲು ಆಹಾರ ಮತ್ತು ನಾಗರಿಕ ಸರಬರಾಜು ನಿರ್ಧರಿಸಿದೆ. ಜೂನ್ ತಿಂಗಳಲ್ಲಿ ಹೊಸ ಕಾರ್ಡ್‌ಳಿಗೆ ಅರ್ಜಿ ಆಹ್ವಾನಿಸಲು ಇಲಾಖೆ ತೀರ್ಮಾನಿಸಿದೆ.

ಇದನ್ನೂ ಓದಿ: Crime: ಯುವಕನಿಂದ ಯುವತಿ ಅಪಹರಣ ಆರೋಪ: ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಹಲ್ಲೆ

ಹೊಸ ಕಾರ್ಡ್‌ಗಾಗಿ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸುವುದು ಕಡ್ಡಾಯ. ಈ ವೆಬ್ ಪೋರ್ಟಲ್ ಅನ್ನು ಸುಮಾರು ಒಂದೂವರೆ ವರ್ಷದಿಂದಲೂ ಸ್ಥಗಿತಗೊಳಿಸಲಾಗಿತ್ತು. ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಜೂನ್ ಮೊದಲ ವಾರದಲ್ಲಿ ವೆಬ್‌ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅನುವು ಮಾಡಿಕೊಡಲಾಗುವುದು ಎಂದು ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: T20 World Cup: ಟಿ 20 ವಿಶ್ವಕಪ್: ಅಂಪೈರ್ ಗಳ ಪಟ್ಟಿ ಪ್ರಕಟ

ಕಳೆದ ವರ್ಷ ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಿಗದಿಯಾಗಿತ್ತು. ಅದಕ್ಕೂ ಮೊದಲು ಚುನಾವಣಾ ತಯಾರಿಗಳನ್ನು ನಡೆಸಲಾಗುತ್ತಿತ್ತು. ಜತೆಗೆ ಆಗ ಅಧಿಕಾರದಲ್ಲಿದ್ದ ಬಿಜೆಪಿ ಸರಕಾರದ ಅವಧಿಯೂ ಮುಗಿದಿತ್ತು. ಹೀಗಾಗಿ, ಸುಮಾರು ಒಂದೂವರೆ ವರ್ಷದಿಂದಲೂ ಎಪಿಎಲ್ ಕಾರ್ಡ್‌ಗೆ ಅರ್ಜಿಗಳನ್ನು ಸಲ್ಲಿಸಲು ಆನ್‌ಲೈನ್ ಪೋರ್ಟಲ್‌ನಲ್ಲಿ ಅವಕಾಶ ಕಲ್ಪಿಸಿರಲಿಲ್ಲ.

ಹೊಸದಾಗಿ ರಚನೆಯಾದ ಕಾಂಗ್ರೆಸ್ ಸರಕಾರವು ಗೃಹಲಕ್ಷ್ಮಿ, ಗೃಹಜ್ಯೋತಿ ಮತ್ತಿತರ ಯೋಜನೆಗಳನ್ನು ಜಾರಿಗೆ ತಂದಿತು. ಇವುಗಳ ಲಾಭ ಪಡೆಯಲು ಲಕ್ಷಾಂತರ ಜನ ಅರ್ಜಿ ಸಲ್ಲಿಸಲು ಕಾಯುತ್ತಿದ್ದರು. ಆದರೆ, ಯೋಜನೆಗೆ ಹೆಚ್ಚಿನ ಅರ್ಜಿಗಳು ಬಂದೇ ಬರುತ್ತವೆ ಎಂದು ಅರಿತ ಸರಕಾರ, ಆಗಲೂ ಆನ್ ಲೈನ್ ಪೋರ್ಟಲ್ ಅನ್ನೇ ಬಿಡಲಿಲ್ಲ. ಹೀಗಾಗಿ, ಅಂದಿನಿಂದಲೂ ಲಕ್ಷಾಂತರ ಮಂದಿ ಅರ್ಹರು ಕಾರ್ಡ್‌ಗಾಗಿ ಚಾತಕಪಕ್ಷಿಗಳಂತೆ ಕಾಯುತ್ತಿದ್ದಾರೆ.

Leave A Reply

Your email address will not be published.