H D Revanna : ಎಚ್ ಡಿ ರೇವಣ್ಣ ಕೊನೆಗೂ SIT ವಶಕ್ಕೆ !!

H D Revanna: ಅಶ್ಲೀಲ ವಿಡಿಯೋ ಹಾಗೂ ಮಹಿಳೆಯರ ಕಿಡ್ನಾಪ್ ವಿಚಾರದಲ್ಲಿ ಸರ್ಕಾರವನ್ನು ಆಟವಾಡಿಸುತ್ತ, SIT ಕೈಗೆ ಸಿಗದೆ ತಪ್ಪಿಸಿಕೊಳ್ಳುತ್ಥಿದ್ದ ಎಚ್ ಡಿ ರೇವಣ್ಣನನ್ನು ಕೊನೆಗೂ ಅರೆಸ್ಟ್ ಮಾಡಲಾಗಿದ್ದು, SIT ವಶಕ್ಕೆ ಪಡೆದಿದೆ.
ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ (Former PM HD Devegowda) ನಿವಾಸಕ್ಕೆ ತೆರಳಿದ ಎಸ್ಐಟಿ ಅಧಿಕಾರಿಗಳು ಅಲ್ಲೇ ಇದ್ಧ ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ.
ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಮಾಜಿ ಸಚಿವ ಹೆಚ್ಡಿ ರೇವಣ್ಣವರನ್ನು (Former Minister HD Revanna) ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.