Rape Accuse Attacked Police: ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಹುಬ್ಬಳ್ಳಿ ಅತ್ಯಾಚಾರ ಆರೋಪಿ : ಆರೋಪಿ ಕಾಲಿಗೆ ಗುಂಡು ಹಾರಿಸಿದ ಇನ್ಸ್ಪೆಕ್ಟರ್

Rape Accuse Attacked Police: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆಕೆ ಗರ್ಭ ಧರಿಸಿದ ಆರೋಪದ ಮೇಲೆ ನವನಗರ ಪೊಲೀಸರು ಶುಕ್ರವಾರ ರಾತ್ರಿ ಸದ್ದಾಂ ಹುಸೇನ್ (19) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯನ್ನು ನವನಗರ ಠಾಣೆಗೆ ಕರೆತರುವ ವೇಳೆ ಪೊಲೀಸರ ಕಪಿಮುಷ್ಠಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಧಾರವಾಡದ ವಿದ್ಯಾಗಿರಿ ಪೊಲೀಸ್ ಇನ್ಸ್ ಪೆಕ್ಟರ್ ಸಂಗಮೇಶ ಬಿಡಿಗಿನಾಳ್ ಹಾಗೂ ಇನ್ನೋರ್ವ ಕಾನ್ ಸ್ಟೆಬಲ್ ಗೆ ಚಾಕುವಿನಿಂದ ಇರಿದಿದ್ದಾನೆ.

ಆರೋಪಿಯು ಪೊಲೀಸರಿಗೆ ಇರಿದ ತಕ್ಷಣ, ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ, ಆದರು ಆದರೆ ಆರೋಪಿ ಮತ್ತೆ ಹಲ್ಲೆ ಮಾಡಲು ಮುಂದಾದಾಗ ಇನ್ಸ್ಪೆಕ್ಟರ್ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ರಾಜೀವ್ ಎಂ. ತಿಳಿಸಿದ್ದಾರೆ.

ಗಾಯಗೊಂಡ ಆರೋಪಿ ಸದ್ದಾಂ ಹುಸೇನ್ ನನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪೊಲೀಸರು ಚಿಕಿತ್ಸೆಗಾಗಿ ಧಾರವಾಡದ ಸಿವಿಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆರೋಪಿ ಸದ್ದಾಂ ಹುಸೇನ್ ಸ್ನೇಹ ಬೆಳೆಸಿದ ಬಳಿಕ ಬಾಲಕಿಯೊಂದಿಗೆ ಬಲವಂತವಾಗಿ ಲೈಂಗಿಕ ಸಂಪರ್ಕ ಬೆಳೆಸಿ ನಂತರ ಬೆದರಿಕೆ ಹಾಕಿದ್ದ ಎಂದು ಅತ್ಯಾಚಾರ ಸಂತ್ರಸ್ತೆಯ ತಾಯಿ ಆರೋಪಿಸಿದ್ದಾರೆ. ಶುಕ್ರವಾರ ಸಂಜೆ ನವನಗರ ಠಾಣೆಗೆ ದೂರು ನೀಡಿದ್ದಾಳೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಒಂದು ಗಂಟೆಯೊಳಗೆ ಬಂಧಿಸಿ ಪೋಕೋ ಕಾಯ್ದೆ ಮತ್ತು ಎಸ್‌ಸಿ/ಎಸ್‌ಟಿ (ಪಿಒಎ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

Leave A Reply

Your email address will not be published.