HSRP ಅಳವಡಿಕೆ ದಿನಾಂಕ ಮತ್ತೆ ಮುಂದೂಡಿಕೆ ?!

HSRP : ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್ ಅಳವಡಿಸಲು ಸಾರಿಗೆ ಇಲಾಖೆ ಮೂರು ತಿಂಗಳು ಕಾಲಾವಕಾಶ ನೀಡಿದೆ. ಅಂದರೆ ಮೇ 31 ಕೊನೆಯ ದಿನಾಂಕ ನಿಗದಿ ಮಾಡಿ ಆದೇಶ ಹೊರಡಿಸಿದೆ. ಇನ್ನು ಕೆಲವೇ ದಿನಗಳಲ್ಲಿ ಈ ಗುಡುವು ಕೂಡ ಮುಕ್ತಾಯವಾಗಲಿದೆ. ಆದರೀಗ ಈ ನಡುವೆ ಮತ್ತೊಂದು ಗುಡ್ ನ್ಯೂಸ್ ಎದುರಾಗಿದ್ದು, HSRP ಅಳವಡಿಕೆ ದಿನಾಂಕವನ್ನು ಮತ್ತೆ ಮುಂದೂಡಲಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

ದೇಶಾದ್ಯಂತ ಏಕೀಕೃತ ವಾಹನ ನೋಂದಣಿ ಸಂಖ್ಯೆ ಫಲಕ ಅಳವಡಿಕೆ ಹಾಗೂ ವಾಹನಗಳ ಸುರಕ್ಷತೆ ದೃಷ್ಟಿಯಿಂದಾಗಿ ಸಾರಿಗೆ ಇಲಾಖೆ 2019ರ ಏಪ್ರಿಲ್‌ಗಿಂತ ಹಿಂದೆ ನೋಂದಣಿಯಾದ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ. ರಾಜ್ಯದಲ್ಲಿ ಹೈ ಸೆಕ್ಯೂರಿಟಿ ನಂಬರ್‌ ಪ್ಲೇಟ್‌ (HSRP) ಅಳವಡಿಕೆ ಏರಿಕೆ ಕಾಣುತ್ತಿದ್ದ ಕಾರಣ ಅದನ್ನು ಮೇ 31 ರ ತನಕ ವಿಸ್ತರಿಸಿದೆ. ಗಡುವು ಮುಗಿದ ಬಳಿಕ ನಂಬರ್ ಪ್ಲೇಟ್ ಇಲ್ಲದಿದ್ದರೆ ದಂಡ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದೆ. ಆದರೂ ಸಹ ಲಕ್ಷಾಂತರ ವಾಹನಗಳಿಗೆ ಇನ್ನೂ ನಂಬರ್ ಪ್ಲೇಟ್ ಅಳವಡಿಕೆ ಮಾಡಿಲ್ಲ.

ಅಂದಹಾಗೆ ಸರ್ಕಾರ HSRP ಅಳವಡಿಕೆ ಮಾಡಲು 2 ಸಲ ಸಮಯ ವಿಸ್ತರಿಸಿತ್ತು. ಆದರೂ ಕೂಡ ಜನ ಉದಾಸೀನ ತೋರಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಮತ್ತೆ ಗಡುವು ವಿಸ್ತರಣೆ ಮಾಡಲಿದೆ ಎಂಬ ಲೆಕ್ಕಾಚಾರದಲ್ಲಿ ಇನ್ನೂ ಹಲವು ಜನರು ಕಾಯುತ್ತಿದ್ದಾರೆ. ಆದರೆ ಸಾರಿಗೆ ಇಲಾಖೆ ಇನ್ನೂ ಗಡುವು ವಿಸ್ತರಣೆ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲ.

ಇಲಾಖೆಯ ನಿಲುವೇನು?
ಆದರೆ ಮೇ.31ಕ್ಕೆ ನೀಡಿರುವ ಅಂತಿಮ ಗಡುವು ಸದ್ಯಕ್ಕೆ ವಿಸ್ತರಣೆಯಾಗುವ ಸಾಧ್ಯತೆಗಳು ಕಡಿಮೆ. ಕಾರಣ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಸರ್ಕಾರ ಈ ಕುರಿತು ಗಡುವು ವಿಸ್ತರಣೆ ಮಾಡುವ ಸಾಧ್ಯತೆಗಳಿಲ್ಲ. ಆದರೆ ಜೂನ್ 4 ರಂದು ಲೋಕಭಾ ಫಲಿತಾಂಶ ಘೋಷಣೆಯಾದ ಬಳಿಕ ನೀತಿ ಸಂಹಿತೆ ತೆರವಾಗಲಿದೆ. ಬಳಿಕ ವಾಹನಗಳ HSRP ಅಂಕಿ ಸಂಖ್ಯೆ ನೋಡಿಕೊಂಡು ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ.

HSRP ನಂಬರ್ ಪ್ಲೇಟ್ ಪಡೆಯುವುದು ಹೇಗೆ?
ಮೊದಲಿಗೆ https://transport.karnataka.gov.in ಅಥವಾ www.siam.in ಗೆ ಭೇಟಿ ನೀಡಿ ನಂತರ Book HSRP ನ್ನು ಕ್ಲಿಕ್‌ ಮಾಡಿ.
* ವಾಹನ ತಯಾರಕರನ್ನು ಆಯ್ಕೆ ಮಾಡಿ
* ವಾಹನದ ಮೂಲ ವಿವರ ಭರ್ತಿ ಮಾಡಿ
* ಡೀಲರ್‌ ಸ್ಥಳವನ್ನು ಆಯ್ಕೆ ಮಾಡಿ (HSRP ಅಳವಡಿಕೆಗೆ ನಿಮ್ಮ ಅನುಕೂಲಕ್ಕೆ ತಕ್ಕಂತೆ)
* HSRP ಶುಲ್ಕವನ್ನು ನಗದು ರೂಪದಲ್ಲಿ ಪಾವತಿ ಮಾಡಲು ಅವಕಾಶವಿಲ್ಲ, ಹಾಗಾಗಿ ಆನ್‌ಲೈನ್‌ನಲ್ಲಿ ಪಾವತಿಸಿ.
* ಆವಾಗ, ವಾಹನ ಮಾಲೀಕರ ಮೊಬೈಲ್‌ ಸಂಖ್ಯೆಗೆ ಒಟಿಪಿ ರವಾನಿಸಲಾಗುವುದು.
* ನಿಮಗೆ ಯಾವಗ ಸೂಕ್ತ ಅನಿಸುತ್ತದೆಯೋ ಅದಕ್ಕೆ ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಿ
* ನಂತರ ನಿಮ್ಮ ವಾಹನದ ಯಾವುದೇ ತಯಾರಕ/ ಡೀಲರ್‌ ಸಂಸ್ಥೆಗೆ ಭೇಟಿ ನೀಡಿ.

ಇದನ್ನೂ ಓದಿ: HD Devegowda: ಕೂಡಲೇ ಬಂದು ಪೊಲೀಸರ ಮುಂದೆ ಶರಣಾಗುವಂತೆ ಮೊಮ್ಮಗನಿಗೆ ಹೆಚ್​​ಡಿಡಿ ಸೂಚನೆ !

Leave A Reply

Your email address will not be published.