Karnataka Weather: ಇಂದು ಒಣ ಹವೆ, ಮೇ.7 ರ ನಂತರ ಕೆಲವು ಜಿಲ್ಲೆಯಲ್ಲಿ ಹಗುರ ಮಳೆ

Karnataka Weather: ರಾಜ್ಯಾದ್ಯಂತ ಒಣ ಹವೆ ಇರಲಿದ್ದು, ಮೇ 7ರ ನಂತರ ಕೆಲವು ಜಿಲ್ಲೆ ಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Madikeri: ಸಿಹಿತಿಂಡಿ ನೀಡಿಲ್ಲ ಎಂಬ ಕಾರಣಕ್ಕೆ ಮದುವೆ ರದ್ದು

ಮೇ 7ರಂದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು, ಹಾಸನ, ಚಾಮ ರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಯ ಕೆಲವೆಡೆ ಗುಡುಗು ಮಿಂಚಿನಿಂದ ಕೂಡಿದ – ಸಾಧಾರಣ ಮಳೆಯಾಗಲಿದೆ. ಉಳಿ ದಂತೆ ಬೀದರ್, ಕಲಬುರಗಿ, ವಿಜಯ ಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ವಿಜಯ ನಗರ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಬಿಸಿ ಗಾಳಿಯ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Karnataka Weather: ಇಂದು ಒಣ ಹವೆ, ಮೇ.7 ರ ನಂತರ ಕೆಲವು ಜಿಲ್ಲೆಯಲ್ಲಿ ಹಗುರ ಮಳೆ

ಮೇ 8ರಂದು ದಕ್ಷಿಣ ಕನ್ನಡ, ಉಡುಪಿ, ರಾಯಚೂರು, ಕೊಪ್ಪಳ, ಬೀದರ್, ಕಲಬುರಗಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರಿನಲ್ಲಿ ಗುಡುಗು -ಮಿಂಚಿನಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Leave A Reply

Your email address will not be published.