Liquid Nitrogen: ಇನ್ಮುಂದೆ ಕರ್ನಾಟಕದಲ್ಲಿ ಲಿಕ್ವಿಡ್ ನೈಟ್ರೋಜನ್ ನಿಷೇಧ! ಬಳಕೆ ಮಾಡಿದಲ್ಲಿ ಕಠಿಣ ಶಿಕ್ಷೆ ಜಾರಿ!

Liquid Nitrogen: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಹೊಸ ಆದೇಶವನ್ನು ಒಂದನ್ನು ಹೊರಡಿಸಿದೆ. ಲಿಕ್ವಿಡ್ ನೈಟ್ರೋಜನ್‌ನ ಜೀವಕ್ಕೆ ಆಪತ್ತು ತರುವ ಸಾಧ್ಯತೆ ಇದೆ. ಹೀಗಾಗಿ ಕಲರ್ ಕಾಟನ್‌ ಕ್ಯಾಂಡಿ, ಗೋಬಿ ಮಂಚೂರಿ ಬಳಿಕ ಇದೀಗ ರಾಜ್ಯದಲ್ಲಿ ಆಹಾರದಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆಯನ್ನು ಬ್ಯಾನ್ ಮಾಡಲಾಗಿದೆ. ಆದ್ದರಿಂದ ಯಾರಾದರೂ ಲಿಕ್ವಿಡ್‌ ನೈಟ್ರೋಜನ್‌ ಬಳಸಿದ್ರೆ ಜೀವಾವಧಿ ಶಿಕ್ಷೆಯೊಂದಿಗೆ 10 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

ಇದನ್ನೂ ಓದಿ: IPL-2024: SRH ವಿರುದ್ಧ ಅದ್ಭುತ ಗೆಲುವು ಸಾಧಿಸಿದ MI : ಸೂರ್ಯಕುಮಾರ್ ಯಾದವ್ ಅದ್ಭುತ ಶತಕ

ಆಹಾರ ಪದಾರ್ಥಗಳಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆ ಹೆಚ್ಚಾಗುತ್ತಿದೆ. ಜನರು ತಮಗೆ ಗೊತ್ತಿದ್ದೋ ಗೊತ್ತಿಲ್ಲದೆಯೋ ತಮ್ಮ ಆರೋಗ್ಯವನ್ನು ತಾವೇ ಹಾಳು ಮಾಡುತ್ತಿದ್ದಾರೆ. ಮುಖ್ಯವಾಗಿ ಲಿಕ್ವಿಡ್ ನೈಟ್ರೋಜನ್ ಮೂಲಕ ಸ್ಮೋಕ್‌ ಐಸ್‌ಕ್ರೀಂ, ಸ್ಮೋಕ್‌ ಬಿಸ್ಕತ್ತು, ಬಿಯರ್‌ನಲ್ಲಿ ಬಳಸಲಾಗುತ್ತಿದ್ದು,ಇದು ಜೀವಕ್ಕೆ ಅಪಾಯವನ್ನುಂಟು ಮಾಡುತ್ತಿದೆ. ಈ ಸ್ಮೋಕಿಂಗ್ ಲಿಕ್ವಿಡ್ ನೈಟ್ರೋಜನ್ ಸೇವನೆಯಿಂದ ಅಂಗಾಂಗಗಳ ಮೇಲೆ ದುಷ್ಪರಿಣಾಮ ಉಂಟು ಮಾಡುತ್ತದೆ. ಮುಖ್ಯವಾಗಿ ಲಿಕ್ವಿಡ್‌ ನೈಟ್ರೋಜನ್‌ ಸೇವನೆಯಿಂದ ಕರಳು, ಗಂಟಲುಗಳಲ್ಲಿ ಹುಣ್ಣಾಗುತ್ತಿದೆ. ಈ ಹಿನ್ನೆಲೆಯಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆ ನಿರ್ಬಂಧಿಸಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆದೇಶ ಹೊರಡಿಸಿದೆ.

ಇದನ್ನೂ ಓದಿ: Number Plate: ಇನ್ನೂ HSRP ನಂಬರ್ ಪ್ಲೇಟ್ ಅಳವಡಿಸಿಲ್ವಾ? ಡೆಡ್ ಲೈನ್ ನೀಡುತ್ತಾ ಸರ್ಕಾರ !

ಈ ಲಿಕ್ವಿಡ್‌ ನೈಟ್ರೋಜನ್‌ ಅಥವಾ ದ್ರವ ಸಾರಜನಕವನ್ನು ಔಷಧ ಮತ್ತು ರಾಸಾಯನಿಕ ಕಂಪನಿಗಳು ತಮ್ಮ ಉತ್ಪನ್ನಗಳನ್ನು 40 ಡಿಗ್ರಿ ಸೆಂಟಿಗ್ರೇಡ್‌ನಷ್ಟು ತಂಪಾಗಿಸಲು ಬಳಸುತ್ತವೆ. ಅಲ್ಲದೆ, ಫ್ರೀಜ್‌ ಮಾಡುವ ಹಲವು ವಿಧಾನಗಳಲ್ಲಿ ಬಳಸುತ್ತಾರೆ. ಈ ಲಿಕ್ವಿಡ್‌ ನೈಟ್ರೋಜನ್‌ ಸುರಿದರೆ ಥಟ್ಟನೆ ಹಿಗ್ಗಿ ಬಿಳಿಯ ಹೊಗೆಯಂತೆ ಆವಿಯಾಗಿ ಬಿಡುತ್ತದೆ. ಇದು ಆರೋಗ್ಯಕ್ಕೆ ಹಾನಿಕಾರಕ. ಇದನ್ನು ಬಳಸುವವರ ವಿರುದ್ಧ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು ಎಂದು ಆರೋಗ್ಯ ಇಲಾಖೆ ಆಯುಕ್ತರು ತಿಳಿಸಿದ್ದಾರೆ.

ಆದೇಶದ ಪ್ರಕಾರ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006, ನಿಯಮಗಳು 2011ರಡಿ ಲಿಕ್ವಿಡ್‌ ನೈಟ್ರೋಜನ್‌ ಅನ್ನು ಡೈರಿ ಆಧಾರಿತ ಸಿಹಿತಿಂಡಿಗಳು -ಐಸ್ ಕ್ರೀಮ್‌ನಲ್ಲಿ ಘನೀಕರಣ ಮತ್ತು ಕೂಲಿಂಗ್ (Contact Freezing and Cooling Agent en Dairy- based desserts -Ice Cream) ಗಳ ತಯಾರಿಕೆಯ ಸಮಯದಲ್ಲಿ ಮಾತ್ರ ಬಳಸಲು ಅನುಮತಿ ಇದೆ. ಇನ್ನು ಸ್ಮೋಕಿಂಗ್‌ ಬಿಸ್ಕತ್‌, ಡೆಸರ್ಟ್‌ ಸೇವನೆಗಾಗಿ ಒದಗಿಸುವ ಸಂದರ್ಭದಲ್ಲಿ ಉಪಯೋಗಿಸಲು ಅನುಮತಿ ಇಲ್ಲ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 30(2)(ಎ)ರಡಿ ಲಿಕ್ವಿಡ್‌ ನೈಟ್ರೋಜನ್‌ ಅನ್ನು ತಿನಿಸುಗಳಿಗೆ ಉಪಯೋಗಿಸುವುದನ್ನು ನಿರ್ಬಂಧಿಸಿ ಆದೇಶಿಸಲಾಗಿದೆ. ಉಲ್ಲಂಘನೆಯ ಪ್ರಕರಣಗಳು ಕಂಡು ಬಂದರೆ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆಯನ್ನು ಮತ್ತು ರೂ.10 ಲಕ್ಷಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಕೇಸ್‌ ದಾಖಲಿಸಲಾಗುತ್ತದೆ ಎಂದು ಆದೇಶ ಹೊರಡಿಸಿದೆ.

Leave A Reply

Your email address will not be published.