HD Revanna: ಲೈಂಗಿಕ ದೌರ್ಜನ್ಯ ಪ್ರಕರಣ; ರೇವಣ್ಣ ಜಾಮೀನು ಅರ್ಜಿ ಇಂದು ವಿಚಾರಣೆ

H D Revanna: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಆರೋಪದಡಿ ಬಂಧಿತರಾಗಿರುವ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರು ಈಗ ನಿಯಮಿತ (ರೆಗ್ಯುಲರ್) ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಕೋರ್ಟ್ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದೆ.

ಇದನ್ನೂ ಓದಿ: Death News: ಜನ್ಮದಿನದ ಮುನ್ನಾ ದಿನವೇ ಹಾರಿಹೋಯ್ತು ಪ್ರಾಣ; ಮಳೆ ಎಂದು ಕಾರಿನಲ್ಲಿ ಕೂತ, ಮರ ಕಾರಿನ ಮೇಲೆ ಬಿತ್ತು

ತಮ್ಮ ಮಗ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯನ್ನು ಅಪಹರಿಸಿದ ಆರೋಪದ ಮೇಲೆ ಮೈಸೂರಿನ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ರೇವಣ್ಣವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Karnataka Weather: ಕರಾವಳಿಯಲ್ಲಿ ಗುಡುಗು ಸಹಿತ ಮಳೆಯ ಸಂಭವ

ಪ್ರಕರಣ ಸಂಬಂಧ ಎಸ್‌ಐಟಿ ಅಧಿ ಕಾರಿಗಳು ಶನಿವಾರ (ಮೇ 4) ರೇವಣ್ಣ ಅವರನ್ನು ಬಂಧಿಸಿ, ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಬಂಧನ ಆಗುವುದನ್ನು ತಪ್ಪಿಸಲು ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಆದರೆ, ನ್ಯಾಯಾಲಯ ಅದನ್ನು ವಜಾಗೊಳಿಸಿತ್ತು. ಹೀಗಾಗಿ ರೇವಣ್ಣ ಪರ ವಕೀಲ ಪವನ್ ಸಾಗರ್ ಜಾಮೀನು ಕೋರಿ, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯಕ್ಕೆ (ಸಿಸಿಎಚ್-82) ಮತ್ತೊಮ್ಮೆ ಅರ್ಜಿ ಸಲ್ಲಿಸಿದರು. ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಧೀಶ ಸಂತೋಷ ಗಜಾನನ ಭಟ್, ಮಂಗಳವಾರಕ್ಕೆ ವಿಚಾರಣೆ ನಿಗದಿಪಡಿಸಿದ್ದಾರೆ.

Leave A Reply

Your email address will not be published.