PM Modi: ಪ್ರಜ್ವಲ್ ರೇವಣ್ಣನನ್ನು ಸುಮ್ಮನೆ ಬಿಡಲ್ಲ, ಕಠಿಣ ಕ್ರಮ ಕೈಗೊಳ್ಳುತ್ತೇವೆ – ಕೊನೆಗೂ ಮೌನ ಮುರಿದ ಪಿಎಂ ಮೋದಿ !!
PM Modi: ದೇಶಾದ್ಯಂತ ಸಂಚಲನ ಸೃಷ್ಟಿಸಿದ ಪ್ರಜ್ವಲ್ ರೇವಣ್ಣ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಕುರಿತು ಕೊನೆಗೂ ಪ್ರಧಾನಿ ನರೇಂದ್ರ ಮೋದಿ(PM Modi) ಅವರು ಮೌನ ಮುರಿದಿದ್ದಾರೆ.
ಇದನ್ನೂ ಓದಿ: Government New Scheme: ಇಷ್ಟು ಮಾಡಿದ್ರೆ ಸಾಕು, ಸರ್ಕಾರದಿಂದ ನಿಮ್ಮ ಖಾತೆಗೆ ಹಣ ಬರೋದು ಫಿಕ್ಸ್!
ಪ್ರಜ್ವಲ್ ರೇವಣ್ಣ(Prajwal Revanna) ವಿದೇಶಕ್ಕೆ ಹೋಗಲು ಕರ್ನಾಟಕದ ಕಾಂಗ್ರೆಸ್ (Kaenataka Government) ಸರ್ಕಾರವೇ ಕಾರಣ. ಈ ಸರ್ಕಾರದ ನಿರ್ಲಕ್ಷ್ಯದಿಂದಲೇ ಪ್ರಜ್ವಲ್ ವಿದೇಶಕ್ಕೆ ಹೋಗಿದ್ದಾರೆ. ಈ ಘಟನೆಗೆ ರಾಜ್ಯ ಸರ್ಕಾರವೇ ನೇರವಾದ ಹೊಣೆ. ರಾಜ್ಯ ಸರ್ಕಾರದ ಬಳಿ ಮಾಹಿತಿ ಇದ್ದಿದ್ದರೆ ಅದರ ಬಗ್ಗೆ ಒಂದು ಕಣ್ಣಿಡಬೇಕಿತ್ತು ಎಂದು ಮೋದಿ ದೂರಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರಕ್ಕೆ ಮೋದಿ ತಿರುಗೇಟು ನೀಡಿ ಆರೋಪಗಳ ಸುರಿಮಳೆಗೈದಿದ್ದಾರೆ.
ಇದನ್ನೂ ಓದಿ: Savings Scheme: ತಿಂಗಳಿಗೆ 210 ರೂಪಾಯಿ ಉಳಿಸಿದರೆ ಸಾಕು, ವರ್ಷದ ಕೊನೆಗೆ ದಂಪತಿಗಳಿಗೆ ಸಿಗುತ್ತೆ ಲಕ್ಷ ಲಕ್ಷ!
ಸಂದರ್ಶನವೊಂದರಲ್ಲಿ ಮಾತನಾಡಿದ ಅವರು ಪ್ರಜ್ವಲ್ ರೇವಣ್ಣರಂತಹ ವ್ಯಕ್ತಿಗಳ ವಿರುದ್ಧ ನಾವು ಸ್ಪಷ್ಟ ದೃಷ್ಟಿಕೋನವನ್ನು ಹೊಂದಿದ್ದೇವೆ. ಈ ರೀತಿಯ ವ್ಯಕ್ತಿಗಳ ವಿರುದ್ಧ ನಾವು ಶೂನ್ಯ ಸಹಿಷ್ಣುರಾಗಿದ್ದೇವೆ. ಸಾವಿರ ವಿಡಿಯೋಗಳು ಇದೆ ಎಂದಾದರೆ ಅವು ಜೆಡಿಎಸ್ (JDS)- ಕಾಂಗ್ರಸ್ ಮೈತ್ರಿ ಕಾಲಕ್ಕೆ ಸೇರಿದೆ ಎನ್ನುವುದು ಗೊತ್ತಾಗುತ್ತಿದೆ. ಅಪರಾಧಿಗಳನ್ನ ಬಿಡಬಾರದು. ನಮ್ಮ ದೇಶದಲ್ಲಿ ಇಂತಹ ಆಟಗಳನ್ನ ಕೊನೆಗೊಳಿಸಬೇಕು. ಮೋದಿಗೆ ಸಂಬಂಧಿಸಿದಂತೆ, ಬಿಜೆಪಿಗೆ(BJP) ಸಂಬಂಧಿಸಿದಂತೆ, ಸಂವಿಧಾನಕ್ಕೆ ಸಂಬಂಧಿಸಿದಂತೆ ನಮ ದೃಷ್ಟಿಕೋನ ಬಹಳ ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.
ಅಲ್ಲದೆ ‘ಅವರು ಅಧಿಕಾರದಲ್ಲಿದ್ದಾಗ ವಿಡಿಯೋಗಳನ್ನ ಸಂಗ್ರಹಿಸಿದ್ದರು. ಒಕ್ಕಲಿಗರು (Vokkaliga) ಮತದಾನ ಹಕ್ಕನ್ನು ಚಲಾಯಿಸಿದ ನಂತರ ಕರ್ನಾಟಕದಲ್ಲಿ ಎರಡನೇ ಹಂತದ ಚುನಾವಣೆ ಸಂದರ್ಭದಲ್ಲಿ ಈ ವಿಡಿಯೋಗಳನ್ನ ಬಿಡುಗಡೆ ಮಾಡಿದ್ದಾರೆ. ಪ್ರಜ್ವಲ್ ಅವರನ್ನು ದೇಶದಿಂದ ಹೊರಗೆ ಕಳುಹಿಸಿದ ಮೇಲೆಯೇ ವಿಡಿಯೋ ರಿಲೀಸ್ ಮಾಡಲಾಗಿದೆ. ಈ ಬೆಳವಣಿಗೆ ಬಹಳ ಅನುಮಾನಾಸ್ಪದ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.