K.Vasanth Bangera: ಹುಟ್ಟೂರಿಗೆ ಬಂದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

K.Vasanth Bangera: ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್‌ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79) ಅವರು ಯಕೃತ್‌ ಸಮಸ್ಯೆಯಿಂದ ಮೇ.8 ರಂದು ಸಂಜೆ 4 ಗಂಟೆ ಸುಮಾರಿಗೆ ಬೆಂಗಳುರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದರು. ಇದೀಗ ಅವರ ಪಾರ್ಥಿವ ಶರೀರ ಬೆಳಗ್ಗೆ (ಇಂದು) 3.30 ಕ್ಕೆ ಹಳೆಕೋಟೆ ನಿವಾಸಕ್ಕೆ ಆಗಮಿಸಿದೆ.

ಇದನ್ನೂ ಓದಿ: EAC-PM: ಭಾರತದಲ್ಲಿ ಹಿಂದೂಗಳ ಸಂಖ್ಯೆ 8% ರಷ್ಟು ಕಡಿಮೆ, ಮುಸ್ಲಿಂ ಶೇ.43 ರಷ್ಟು ಹೆಚ್ಚಳ

ಇದನ್ನೂ ಓದಿ: Google Pay: ನೀವು ಗೂಗಲ್ ಪೇ ಬಳಸುತ್ತೀರಾ? ಹಾಗಾದ್ರೆ ನಿಮಗಾಗಿ ಇಲ್ಲಿದೆ ಸೂಪರ್ ಅವಕಾಶ!

ಕುಟುಂಬ ವರ್ಗಕ್ಕೆ ಮನೆಯಲ್ಲಿ ಅಂತಿಮ ನಮನಕ್ಕೆ ವ್ಯವಸ್ಥೆ ಮಾಡಲಾಯಿತು. ಪಾರ್ಥಿವ ಶರೀರದ ಅಂತಿಮ ವಿಧಿ ನೆರವೇರಿಸಿ ಬಳಿಕ, ನಂತರ ಅವರ ಆಪ್ತ ಅಭಿಮಾನಿ ವರ್ಗಕ್ಕೆ ಅಂತಿಮ ನಮನ ಸಲ್ಲಿಸಲು ಅವಕಾಶ ನೀಡಲಾಯಿತು.

ಶಾಸಕ ಹರೀಶ್‌ ಪೂಂಜಾ ಅವರು ಅಂತಿಮ ದರ್ಶನ ಪಡೆದು, ಗೌರವ ಸಲ್ಲಿಸಿದರು. ಬೆಳಗ್ಗೆ 9 ಗಂಟೆಗೆ ಹಳೆಕೋಟೆ ಮನೆಯಿಂದ ಬೆಳ್ತಂಗಡಿ ತಾಲೂಕು ಕ್ರೀಡಾಂಗಣಕ್ಕೆ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ಸಾರ್ವಜನಿಕ ದರ್ಶನಕ್ಕಾಗಿ ಕೊಂಡೊಯ್ಯಲಾಗಿದೆ.

ಮಧ್ಯಾಹ್ನ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ಕುವೆಟ್ಟು ಗ್ರಾಮದ ಕೇದೆ ಹೊಸಮನೆಯಲ್ಲಿ ಅಂತ್ಯಸಂಸ್ಕಾರವನ್ನು ಸಕಲ ಸರಕಾರಿ ಗೌರವದಿಂದ ಮಾಡಲಾಗುವುದು.

Leave A Reply

Your email address will not be published.