H D Revanna: ಎಚ್ ಡಿ ರೇವಣ್ಣ ಇದೀಗ ‘ಕೈದಿ ನಂಬರ್ 4567’ !!

Share the Article

H D Revanna: ಮಹಿಳೆಯ ಕಿಡ್ನಾಪ್ ಕೇಸ್‌ನಲ್ಲಿ ಮಾಜಿ ಸಚಿವ ಎಚ್ ಡಿ ರೇವಣ್ಣ(H D Revanna) ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದು, ಇದೀಗ ರೇವಣ್ಣಗೆ ವಿಚಾರಣಾಧೀನ ಕೈದಿ ಎಂದು ನಂಬರ್- 4567 ನೀಡಲಾಗಿದೆ.

ಇದನ್ನೂ ಓದಿ: Intresting Facts: ಟೀ, ಕಾಫಿ ಕುಡಿದರೆ ನಿಜವಾಗಿಯೂ ಕಪ್ಪಾಗ್ತೀವ? ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್ ಮ್ಯಾಟರ್

ಮಗ, ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ ಎಚ್ಡಿ ರೇವಣ್ಣಗೆ(JDS MLA HD Revanna) 17ನೇ ಎಸಿಎಂಎಂ ಕೋರ್ಟ್ 7 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಈ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ವಿಚಾರಣಾಧೀನ ಖೈದಿ ಸಂಖ್ಯೆ 4567 ಕೊಡಲಾಗಿದೆ.

ಇದನ್ನೂ ಓದಿ: Flights Tickets Price: ವಿಮಾನ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್! ಇನ್ಮುಂದೆ ಉಚಿತ ಸೇವೆಯಂತೆ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಅಂದಹಾಗೆ ಎಸ್ಐಟಿ(SIT) ಕಸ್ಟಡಿ ಅವಧಿ ಇಂದು (ಮೇ 08) ಮುಕ್ತಾಯವಾಗಿದ್ದರಿಂದ ರೇವಣ್ಣ ಅವರನ್ನು ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಇದೀಗ ಕೋರ್ಟ್ ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಮತ್ತೊಂದೆಡೆ ರೇವಣ್ಣ ಅವರ ಜಾಮೀನು ಅರ್ಜಿ ಸಹ ನಾಳೆಗೆ ಮುಂದೂಡಿದೆ. ಇದರಿಂದ ರೇವಣ್ಣಗೆ ಪರಪ್ಪನ ಅಗ್ರಹಾರ ಜೈಲೇ ಗತಿ ಆಗಿದೆ.

ಜೈಲಿನಲ್ಲಿ ವಿಚಾರಣಾಧೀನ ಕೈದಿಗಳನ್ನು ಸೇರ್ಪಡೆ ಮಾಡಿಕೊಳ್ಳುವ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಜೈಲಿನೊಳಗೆ ಕಳುಹಿಸಲಾಯಿತು. ಈ ಹಿನ್ನೆಲೆಯಲ್ಲಿ ಸದ್ಯ ರೇವಣ್ಣ ಅವರಿಗೆ ವಿಚಾರಣಾಧೀನ ಖೈದಿ ಎಂದು 4567 ಸಂಖ್ಯೆಯನ್ನು ನೀಡಲಾಗಿದೆ.

Leave A Reply