PM Modi: ಪ್ರಧಾನಿ ಮೋದಿ ಹೇಳಿದ 15 ಸುಳ್ಳುಗಳ ಪಟ್ಟಿ ಬಿಡುಗಡೆ ಮಾಡಿದ ಸಿದ್ದರಾಮಯ್ಯ !!

Share the Article

PM Modi: ಕರ್ನಾಟಕದಲ್ಲಿ ಎರಡು ಹಂತದ ಲೋಕಸಭಾ ಚುನಾವಣೆ ಮುಗಿಸಿದ ಸಿದ್ದರಾಮಯ್ಯ(CM Siddaramaiah) ಅವರು ಊಟಿಗೆ ತೆರಳಿ ರಿಲಾಕ್ಸ್ ಮೂಡ್ ನಲ್ಲಿ ಇದ್ದಾರೆ. ಈ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿ(PM Modi)ಯವರ ಕಾಲೆಳೆಯುವ ಪ್ರಯತ್ನ ಮಾಡಿದ್ದಾರೆ.

https://x.com/siddaramaiah/status/1788205928568717407?t=vMgxc-6igpcwyJDLRDUX2w&s=08

ಇದನ್ನೂ ಓದಿ: Kerala: ಕಣಗಿಲೆ ಹೂವು ದೇಗುಲಗಳಲ್ಲಿ ಬಳಕೆಗೆ ನೀಷೇಧ; ಕಾರಣ ಇಲ್ಲಿದೆ

ಹೌದು, ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ ಅವರು ‘ಚುನಾವಣಾ ಪ್ರಚಾರ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದಾಗ ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣಾ(Parliament Election) ಪ್ರಚಾರ ಕಾಲದಲ್ಲಿ ಹೇಳುತ್ತಿರುವ ಸುಳ್ಳುಗಳ ನೆನಪಾಯಿತು ಎಂದು 15 ಸುಳ್ಳುಗಳ ಪಟ್ಟಿಯನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: South Actress: ಖ್ಯಾತ ನಟಿ ಪಕ್ಕದ ಮನೆಯ ಯುವಕನ ಪ್ರೀತಿಯಲ್ಲಿ ಬಿದ್ದಿದ್ದು ಹೇಗೆ ಗೊತ್ತಾ? ಇದೊಂದು ವಿಚಿತ್ರ ಲವ್ ಸ್ಟೋರಿ!

ನರೇಂದ್ರ ಮೋದಿಯವರು ಹೇಳಿದ 15 ಸುಳ್ಳುಗಳು

1.ಎಸ್‌ಸಿ/ಎಸ್‌ಟಿ, ಒಬಿಸಿ(OBC) ಮೀಸಲಾತಿ ಕಿತ್ತುಕೊಂಡು ಮುಸ್ಲಿಮರಿಗೆ ನೀಡುವುದಾಗಿ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಹೇಳಿದೆ.

2. ಸಂಪತ್ತಿನ ಸಮಾನ ಹಂಚಿಕೆಯ ನೆಪದಲ್ಲಿ ಕಾಂಗ್ರೆಸ್ ಪಕ್ಷ ಹಿಂದೂಗಳ ಆಸ್ತಿಯನ್ನು ಕಬಳಿಸಿ ಮುಸ್ಲಿಮರಿಗೆ ನೀಡಲಿದೆ.

3.ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಸೇರಿದಂತೆ ಜನರ ಚಿನ್ನ, ಆಸ್ತಿಯನ್ನು ಕಿತ್ತುಕೊಂಡು ಹೆಚ್ಚು ಮಕ್ಕಳು ಇರುವವರಿಗೆ, ನುಸುಳುಕೋರರಿಗೆ (ಮುಸ್ಲಿಮರಿಗೆ) ನೀಡಲಿದೆ.

4. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮಮಂದಿರದ ಬಗ್ಗೆ ಸುಪ್ರಿಂ ಕೋರ್ಟ್‌ ನೀಡಿದ ತೀರ್ಪನ್ನು ಬದಲಾಯಿಸುತ್ತದೆ.

5.ದೇಶದ ಸಂಪತ್ತಿನ ಮೊದಲ ಹಕ್ಕು ಮುಸ್ಲಿಮರಿಗೆ ಎಂದು ಪ್ರಧಾನಿ ಮನಮೋಹನ್‌ ಸಿಂಗ್‌ ಹೇಳಿದ್ದರು.

6.ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಜನರ ಪಿತ್ರಾರ್ಜಿತ ಆಸ್ತಿಗೆ ಶೇ.55ರಷ್ಟು ತೆರಿಗೆ ಹೇರಲಿದೆ.

7. ಛತ್ರಪತಿ ಶಿವಾಜಿ ಮಹಾರಾಜ, ಕಿತ್ತೂರು ರಾಣಿ ಚೆನ್ನಮ್ಮ, ಮೈಸೂರಿನ ದೊರೆಗಳನ್ನು ಕಾಂಗ್ರೆಸ್‌‌ನವರು ನಿಂದಿಸುತ್ತಾರೆ

8. ಲೋಕಸಭಾ ಚುನಾವಣೆಯನ್ನು ವಿದೇಶಿ ಶಕ್ತಿಗಳು ನಿಯಂತ್ರಿಸುತ್ತಿದೆ.

9.ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಉಗ್ರರಿಗೆ ಪ್ರಧಾನಮಂತ್ರಿಯವರ ನಿವಾಸದಲ್ಲಿ ಸ್ವಾಗತ ಕೋರಲಾಗಿತ್ತು.

10.2008ರಲ್ಲಿ ಮುಂಬೈ ಪ್ರವೇಶಿಸಿದ ಹತ್ತು ಉಗ್ರರ ಜೊತೆಗೆ ಕಾಂಗ್ರೆಸ್‌ ಸಂಪರ್ಕ ಹೊಂದಿತ್ತು.

11.ರಾಜ, ಮಹಾರಾಜರನ್ನು ಟೀಕಿಸುವ ಕಾಂಗ್ರೆಸ್‌ ನವಾಬರನ್ನು ಟೀಕಿಸುವುದಿಲ್ಲ.

12.ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನಿಮ್ಮೆಲ್ಲರ ಮನೆ ಮನೆಗೂ ದಾಳಿ ನಡೆಸಿ ನೀವು ಕೂಡಿಟ್ಟ ಸಂಪತ್ತನ್ನು ವಶಪಡಿಸಿ, ಅದನ್ನು ತನ್ನ ವೋಟ್ ಬ್ಯಾಂಕ್‌ಗೆ (ಮುಸ್ಲಿಮರಿಗೆ) ಮರು ಹಂಚಿಕೆ ಮಾಡುತ್ತದೆ.

13.ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮಮಂದಿರಕ್ಕೆ ಬಾಬ್ರಿ ಬೀಗ ಹಾಕುತ್ತದೆ.

14. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಾರತದ ಕ್ರಿಕೆಟ್ ತಂಡದಲ್ಲಿ ಬರೀ ಮುಸ್ಲಿಮರೇ ಇರುತ್ತಾರೆ.

15. ಕಳೆದ ಐದು ವರ್ಷಗಳಿಂದ ಅದಾನಿ-ಅಂಬಾನಿಗಳನ್ನು ಪ್ರಶ್ನೆ ಮಾಡುತ್ತಿದ್ದ ರಾಹುಲ್ ಗಾಂಧಿ ಏಕಾಏಕಿ ಪ್ರಶ್ನೆ ಮಾಡುವುದನ್ನು ನಿಲ್ಲಿಸಿದ್ದೇಕೆ? ಹಣ ತುಂಬಿದ ಟೆಂಪೋಗಳು ಕಾಂಗ್ರೆಸ್ ಮನೆಗೆ ತಲುಪಿದೆ.

ಇಷ್ಟೇ ಅಲ್ಲದೆ ಸದ್ಯಕ್ಕೆ ಇಷ್ಟು ನೆನಪಾಯಿತು. ಹೆಚ್ಚುವರಿಯಾಗಿ ನಿಮಗೆ ನೆನಪಾದರೆ ಇದಕ್ಕೆ ಸೇರಿಸಿಕೊಳ್ಳಿ. ಈ ಸುಳ್ಳುಗಳ ಸರಮಾಲೆ ಇಲ್ಲಿಗೆ ನಿಲ್ಲಲಾರದು, ಮುಂದುವರಿಯಲಿದೆ.

ಸ್ವತಂತ್ರ ಭಾರತದ ಇತಿಹಾಸದಲ್ಲಿ ಯಾವ ಪ್ರಧಾನಮಂತ್ರಿಯೂ ಇಷ್ಟೊಂದು ನಿರ್ಲಜ್ಜವಾಗಿ ಈ ರೀತಿ ಹಸಿಹಸಿ ಸುಳ್ಳುಗಳನ್ನು ಹೇಳಿರಲಾರರು. ಯಾರೂ ಕೂಡಾ ಪ್ರಧಾನಮಂತ್ರಿ ಕುರ್ಚಿಯ ಘನತೆಯನ್ನು ಈ ರೀತಿ ಮಣ್ಣು ಪಾಲು ಮಾಡಿರಲಾರರು.

ಮತದಾನದ ದಿನ ದೇಶದ ಜನರಿಗೆ ಸತ್ಯ-ಸುಳ್ಳುಗಳನ್ನು ಅರಿತುಕೊಳ್ಳುವ ಸದ್ಬುದ್ದಿಯನ್ನು ದೇವರು ಕರುಣಿಸಲಿ ಎಂದು ಬೇಡಿಕೊಳ್ಳುವೆ ಎಂದು ಹೇಳಿದ್ದಾರೆ.

Leave A Reply

Your email address will not be published.