7th Pay Commission: 7ನೇ ವೇತನ ಆಯೋಗ ಜಾರಿಗೆ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ?!

7th Pay Commission: ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿ( 7th Pay Commission) ಕುರಿತು ಗುಡ್ ನ್ಯೂಸ್ ಹೊರಬಿದ್ದಿದ್ದು, 7ನೇ ವೇತನ ಆಯೋಗ ಜಾರಿಗೆ ಸಿದ್ದರಾಮಯ್ಯ(CM Siddaramaiah) ಗ್ರೀನ್ ಸಿಗ್ನಲ್ ನೀಡಲು ಒಲವು ತೋರಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Physical Assault: ವಾಟರ್ ಪ್ಯೂರಿಫೈಯರ್ ರಿಪೇರಿಗೆಂದು ಬಂದವನಿಂದ ಮಹಿಳೆಗೆ ಲೈಂಗಿಕ ಕಿರುಕುಳ

ಹೌದು, ಲೋಕಸಭಾ ಚುನಾವಣಾ(Parliament Election) ನೀತಿ ಸಂಹಿತೆ ಮುಗಿಯುತ್ತಿದ್ದಂತೆ, ಸಿಎಂ ಸಿದ್ಧರಾಮಯ್ಯ 7ನೇ ವೇತನ ಆಯೋಗ ಜಾರಿಗೆ ಒಲವು ತೋರಿದ್ದಾರೆ ಎನ್ನಲಾಗಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿಕೆಗೆ ಕ್ಷಣಗಣನೆ ಶುರುವಾಗಿದೆ.

ಇದನ್ನೂ ಓದಿ: Divorce: ಸ್ಪೈಡರ್ ಮ್ಯಾನ್ ಬಾಳಲ್ಲಿ ಬಿರುಗಾಳಿ: ವಿಚ್ಛೇದನಕ್ಕೆ ಮುಂದಾದ ದಂಪತಿ

ಒಟ್ಟಿನಲ್ಲಿ ಸತತ ಹೋರಾಟ, ಪ್ರತಿಭಟನೆ ಹಾಗೂ ವರ್ಷಗಳ ಕಾಯುವಿಕೆಯಿಂದ ರಾಜ್ಯ ಸರ್ಕಾರಿ ನೌಕರರಿಗೆ ವೇತನ ಪರಿಷ್ಕರಣೆ ಸಂಬಂಧದ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಇಷ್ಟೇ ಅಲ್ಲದೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಹಣಕಾಸು) ಎಲ್‌ಕೆ ಅತೀಕ್ ಮಾತನಾಡಿ ‘ಸರ್ಕಾರದ ಎಲ್ಲಾ ಆದೇಶಗಳನ್ನು ಸಿದ್ಧಪಡಿಸುವಂತೆ ನಾವು ತಿಳಿಸಿದ್ದೇವೆ. ಜೂನ್ 15 ರ ಮೊದಲು ಎಲ್ಲಾ ಆದೇಶಗಳನ್ನು ಹೊರಡಿಸಲು ಪ್ರಯತ್ನಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.

Leave A Reply

Your email address will not be published.