SSLC: ಬೇಸಿಗೆ ರಜೆಗೆ ಕತ್ತರಿ! ಶಿಕ್ಷಣ ಇಲಾಖೆ ಮೇಲೆ ಶಿಕ್ಷಕರ ಆಕ್ರೋಶ!
SSLC: ಶಿಕ್ಷಕರು ಲೋಕಸಭೆ ಚುನಾವಣೆ ಕಾರ್ಯಗಳಲ್ಲಿ ತೊಡಗಿದ್ದು ಇದೀಗ ಕೊಂಚ ನಿರಾಳವಾಗಿದ್ದ ಸಮಯದಲ್ಲಿ, ಶಾಲೆಗೆ ಹಾಜರಾಗುವ ಅನಿವಾರ್ಯತೆ ಎದುರಾಗಿದೆ. ಕೆಲವು ದಿನ ಬೇಸಿಗೆ ರಜೆಯನ್ನು ಅನುಭವಿಸಬಹುದು ಎಂಬ ಲೆಕ್ಕಾಚಾರದಲ್ಲಿದ್ದ ಶಿಕ್ಷಕರರಿಗೆ ಹತಾಶೆಯಾಗಿದೆ.
2024ರ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡು ಪರೀಕ್ಷೆಗೆ ಗೈರು ಹಾಜರಾದ ಮತ್ತು ಪರೀಕ್ಷೆ ಪೂರ್ಣಗೊಳಿಸಲು ಆಗಿಲ್ಲದ ಹಾಗೂ ಹಿಂದಿನ ಸಾಲಿನಲ್ಲಿ ಅನುತ್ತೀರ್ಣರಾದ ಅಭ್ಯರ್ಥಿಗಳಿಗೆ ಜೂನ್‌ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ನಡೆಸಲಾಗುತ್ತದೆ. ಸದ್ಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ಕ್ಕೆ ಹೆಸರು ನೋಂದಣಿ ಮಾಡಿರುವ ವಿದ್ಯಾರ್ಥಿಗಳಿಗೆ ಮೇ 15 ರಿಂದ ಜೂನ್ 5ರ ತನಕ ಆಯಾ ಪ್ರೌಢಶಾಲೆಗಳಲ್ಲಿ ವಿಶೇಷ ತರಗತಿ ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ದೇಶನ ನೀಡಿದೆ. ಆದ್ದರಿಂದ ಮೇ 29ರ ತನಕ ಶಾಲೆಗಳಿಗೆ ರಜೆ ಇದ್ದರೂ ಸಹ ಶಿಕ್ಷಕರು ಶಾಲೆಗಳಿಗೆ ಮೇ 15ರಿಂದಲೇ ಆಗಮಿಸಬೇಕಿದೆ.
ಇದನ್ನೂ ಓದಿ: Indian Railway: ಕೊಳೆ ಆಗುತ್ತೆ ಅಂತ ಗೊತ್ತಿದ್ದರೂ ರೈಲಿನಲ್ಲಿ ಬಿಳಿ ಬೆಡ್‌ಶೀಟ್‌ಗಳನ್ನು ಮಾತ್ರ ಬಳಸೋದು ಯಾಕೆ
ಮೇ 29ರ ತನಕ ಶಾಲೆಗೆ ಬೇಸಿಗೆ ರಜೆ ಇದ್ದರೂ ಸಹ ಮೇ 15ರಿಂದ ಶಾಲೆಗೆ ಆಗಮಿಸುವಂತೆ ಸೂಚನೆ ನೀಡಿರುವುದಕ್ಕೆ ಶಿಕ್ಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ದೇಶಕರು ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಮೇ 15 ರಿಂದ ಜೂನ್ 5ರ ತನಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಯನ್ನು ನಡೆಸಬೇಕು ಎಂದು ಸೂಚನೆ ನೀಡಿದೆ.
ಆದರೆ ಶಿಕ್ಷಕರಿಗೆ ಸೇವಾ ನಿಯಮಗಳ ಅನ್ವಯ ಬೇಸಿಗೆಯ ರಜೆಯನ್ನು ನೀಡಲಾಗಿದೆ. ಮೇ 29ರ ತನಕ ರಜೆ ಇದೆ. ಆದರೆ ಶಿಕ್ಷಕರು ಶಾಲೆಗಳಿಗೆ ಮೇ 15ರಿಂದಲೇ ಆಗಮಿಸುವಂತೆ ಸೂಚನೆ ನೀಡಿರುವುದು ಎಷ್ಟು ಸರಿ? ಎಂದು ಶಿಕ್ಷಕರು ಪ್ರಶ್ನೆ ಮಾಡುತ್ತಿದ್ದಾರೆ.
[…] […]