D K Shivkumar: ‘ಇಂಡಿಯಾ’ ಗೆ 300, ‘ಎನ್‌ಡಿಎ’ಗೆ 200 ಸೀಟು – ಡಿಕೆಶಿ ಕೊಟ್ರು ಬಿಗ್ ಅಪ್ಡೇಟ್ !!

D K Shivkumar: ದೇಶದೆಲ್ಲೆಡೆ ಕಾಂಗ್ರೆಸ್(Congress) ಪಕ್ಷ ಹಾಗೂ ಇಂಡಿಯಾ(INDIA) ಮೈತ್ರಿಕೂಟದ ಪರವಾಗಿ ವಿಶ್ವಾಸ ಮೂಡುತ್ತಿದೆ. ಹೀಗಾಗಿ ಚುನಾವಣಾ ಫಲಿತಾಂಶದಲ್ಲಿ ಇಂಡಿಯಾ ಮೈತ್ರಿ ಕೂಟಕ್ಕೆ 300, NDAಕೂಟಕ್ಕೆ ಬರೀ 200 ಸೀಟ್ ಬರುತ್ತದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್(D K Shivkumar)ಅವರು ಹೇಳಿಕೆ ನೀಡಿದ್ದಾರೆ.

ಉತ್ತರ ಪ್ರದೇಶದ(Uttar Pradesh) ಲಖನೌದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಡಿಕೆ ಶಿವಕುಮಾರ್, ‘ಇಂಡಿಯಾ ಮೈತ್ರಿಕೂಟವು ಸುಮಾರು 300 ಸ್ಥಾನಗಳನ್ನು ಗೆಲ್ಲುತ್ತದೆ ಮತ್ತು ಎನ್‌ಡಿಎ 200 ರ ಆಸುಪಾಸಿನಲ್ಲಿರುತ್ತದೆ. ಅಷ್ಟೇ ಅಲ್ಲ ಬಿಜೆಪಿ ಭದ್ರ ಕೋಟೆ ಎಂದು ಭೀಗುತ್ತಿರುವ ಉತ್ತರ ಪ್ರದೇಶದಲ್ಲಿ 40ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಬಳಿಕ ಮಾತನಾಡಿದ ಅವರು ‘ಎಐಸಿಸಿ(AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ಮಾದರಿಯಲ್ಲಿ ಗ್ಯಾರಂಟಿ ಯೋಜನೆಗಳ ಜತೆಗೆ ಬಡವರಿಗೆ 10 ಕೆ ಜಿ ಉಚಿತ ಅಕ್ಕಿ ಯೋಜನೆ ಘೋಷಿಸಿದ್ದಾರೆ. ಇಂಡಿಯಾ ಒಕ್ಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ಜಾರಿ ಮಾಡಲಿದೆ. ಹೀಗಾಗಿ ಈ ಸಲ ಎಲ್ಲಾ ಉಲ್ಟಾ ಆಗಲಿದೆ. ದೇಶದ ಅಧಿಕಾರ ಇಂಡಿಯಾ ಕೂಟಕ್ಕೆ ಸಿಗಲಿದೆ ಎಂದು ತಿಳಿಸಿದರು.

Leave A Reply

Your email address will not be published.