Lucknow: ಪತ್ನಿಯನ್ನು ಸ್ಕಾರ್ಫ್‌ನಿಂದ ಹತ್ಯೆ ಮಾಡಿ, ಶವ ಮಡಿಲಲ್ಲಿಟ್ಟು ಸೆಲ್ಫಿ ತೆಗೆದು ಸಂಬಂಧಿಕರಿಗೆ ಕಳುಹಿಸಿ, ನೇಣಿಗೆ ಶರಣಾದ ಪತಿ

Share the Article

Lucknow: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಹತ್ಯೆಗೈದು ಆಕೆಯ ಶವದ ಜೊತೆಗೆ ಸೆಲ್ಫಿ ತೆಗೆದುಕೊಂಡು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿರುವ ಕುರಿತು ವರದಿಯಾಗಿದೆ.

 

ಪತ್ನಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸಕ್ಕೆ ಹೋಗುತ್ತಿದ್ದು, ಪತ್ನಿ ಕೆಲಸಕ್ಕೆ ಹೋಗುವ ವಿಚಾರದಲ್ಲಿ ಇಬ್ಬರ ನಡುವೆ ಹಲವು ಬಾರಿ ಜಗಳವಾಗುತ್ತಿತ್ತು. ಹಾಗಾಗಿ ಪತಿ ಮಹಾಶಯ ಸ್ಕಾರ್ಫ್‌ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ನಂತರ ಆಕೆಯ ಶವವನ್ನು ಮಡಿಲಿನಲ್ಲಿಟ್ಟುಕೊಂಡು ಸೆಲ್ಫಿ ತೆಗೆದು ತನ್ನ ಸಂಬಂಧಿಕರಿಗೆ ಕಳುಹಿಸಿದ್ದಾನೆ. ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

 

ಕೂಡಲೇ ಸಂಬಂಧಿಕರು ಪೊಲೀಸರು ಮಾಹಿತಿ ನೀಡಿದ್ದು, ಪೊಲೀಸರು ಎರಡು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

 

ಮೃತ ಪತ್ನಿಯೊಂದಿಗೆ ಸೆಲ್ಫಿ ತೆಗೆದು 5.6 ಮಂದಿ ಸಂಬಂಧಿಕರಿಗೆ ಕಳುಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Leave A Reply