Rona: ರಥೋತ್ಸವ ವೇಳೆ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಭಕ್ತರ ಸಾವು ,ಓರ್ವನಿಗೆ ಗಾಯ

Rona : ರಥೋತ್ಸವ ವೇಳೆ ಚಕ್ರಕ್ಕೆ ಸಿಲುಕಿ ಇಬ್ಬರು ಭಕ್ತರ ಸಾವನ್ನಪ್ಪಿದ್ದು ಓರ್ವನಿಗೆ ಗಾಯವಾದ ಘಟನೆ ಗದಗ ಜಿಲ್ಲೆಯ ರೋಣ ಶನಿವಾರ ಪಟ್ಟಣದಲ್ಲಿ ನಡೆದಿದೆ‌.

ರೋಣದ ವೀರಭದ್ರೇಶ್ವರ ರಥೋತ್ಸವ ವೇಳೆ ನಡೆದ ದುರ್ಘಟನೆ ಇದು. ಮೃತ ಭಕ್ತರು ರೋಣ ಮೂಲದ ನಿವಾಸಿಗಳು ಎನ್ನಲಾಗಿದೆ.

55 ವರ್ಷದ ಮಲ್ಲಪ್ಪ ಲಿಂಗನಗೌಡ್ರ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಇನ್ನೋರ್ವ ಮೃತನ ಹೆಸರು ತಿಳಿದು ಬಂದಿಲ್ಲ. ಮುಖದ ಮೇಲೆ ರಥದ ಗಾಲಿ ಹರಿದಿರುವುದರಿಂದ ವ್ಯಕ್ತಿಯ ಗುರುತು ಸಿಗದಂತಾಗಿದೆ. ರಥ ಎಳೆಯುವ ಸಂದರ್ಭದಲ್ಲಿ ನೂಕು ನುಗ್ಗಲು ಉಂಟಾಗಿದೆ.

ಬಾಳೆ ಹಣ್ಣು ಹಾಗೂ ಉತ್ತತ್ತಿ ಆಯ್ದುಕೊಳ್ಳುವ ಸಂದರ್ಭದಲ್ಲಿ ನೂಕು ನುಗ್ಗಲು ಉಂಟಾಗಿ ರಥದ ಗಾಲಿಗೆ ಸಿಲುಕಿದ ಇಬ್ಬರು ಭಕ್ತರು ಸಾವನ್ನಪ್ಪಿದ್ದಾರೆ.

ಜಾತ್ರೆಗೆ ರೋಣ ಹಾಗೂ ಸುತ್ತಮುತ್ತಲಿನ ಹತ್ತಾರು ಸಾವಿರ ಭಕ್ತ ಸಮೂಹ ಸೇರಿದ್ದು, ಘಟನೆ ನಂತರ ಚದುರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಈ ಕುರಿತು ಗದಗ ಜಿಲ್ಲೆಯ ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.