Karkala : ಸೈಜು ಕಲ್ಲು ಸಾಗಟದ ಟಿಪ್ಪರ್‌ ಲಾರಿ ಪಲ್ಟಿ; ಇಬ್ಬರು ಕಾರ್ಮಿಕರು ಮೃತ

Karkala: ಸೈಜ್ ಕಲ್ಲು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಭ್ರಾಮರಿ ಕ್ರಾಸ್ ಬಳಿ ಶನಿವಾರ ಸಂಜೆ ಸಂಭವಿಸಿದೆ.

 

ಈ ದುರ್ಘಟನೆಯಲ್ಲಿ ಕೋರೆ ಕಾರ್ಮಿಕರಾದ ಕೊಪ್ಪಳ ಜಿಲ್ಲೆಯ ಯಲಬುರ್ಗಿ ದೇವಲಾಪುರ ನಿವಾಸಿಗಳಾದ ಕರಿಯಪ್ಪ(26) ಮತ್ತು ನರಿಯಪ್ಪ(27) ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಹಾರ್ದಿಕ್ ಪಾಂಡ್ಯಗೆ 30 ಲಕ್ಷ ರು. ದಂಡ; 2025ರ ಐಪಿಎಲ್ ಮೊದಲ ಪಂದ್ಯದಿಂದ ನಿಷೇಧ

ಕಾರ್ಕಳ ಪುರಸಭೆಯ ಮಾಜಿ ಸದಸ್ಯರೊಬ್ಬರ ಮಾಲೀಕತ್ವದ ನಿಟ್ಟೆಯ ಭ್ರಾಮರಿ ಕ್ರಾಸ್ ಬಳಿಯ ಕಲ್ಲು ಕೋರೆಯಲ್ಲಿ ಶಿಲೆ ಕಲ್ಲು ಲೋಡ್ ಮಾಡಿಕೊಂಡು ಮಂಗಳೂರಿನ ಕಡೆ ತೆರಳುತ್ತಿದ್ದಾಗ ಕಡಿದಾದ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಈ ದುರ್ಘಟನೆ ಭೀಕರ ಸಂಭವಿಸಿದೆ. ಅಪಘಾತದ ಸಂದರ್ಭದಲ್ಲಿ ಕಾರ್ಮಿಕರು ಹಿಂಬದಿಯಲ್ಲಿ ಕುಳಿತಿದ್ದರು ಎನ್ನಲಾಗಿದೆ, ಲಾರಿ ಪಟ್ಟಿಯಾಗುತ್ತಿದ್ದಂತೆಯೇ ಕಲ್ಲುಗಳು ಕಾರ್ಮಿಕರಾದ ಕರಿಯಪ್ಪ ಮತ್ತು ನರಿಯಪ್ಪ ಎಂಬವರ ಮೇಲೆ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: High Court: ಪೊಲೀಸ್ ಠಾಣೆಗಳು ವ್ಯಾಪಾರಿ ಕೇಂದ್ರವಲ್ಲ ಎಂದ ಹೈಕೋರ್ಟ್ ! ಹಣಕಾಸಿನ ವ್ಯಾಪಾರಕ್ಕೆ ನಿಂತರೆ ಪೊಲೀಸರಿಗೆ ಕಠಿಣವಾದ ಪಾಠ ಕಲಿಸಬೇಕಾದೀತು ಎಚ್ಚರಿಸಿದ ನ್ಯಾಯಪೀಠ

2 Comments
  1. […] ಇದನ್ನೂ ಓದಿ: Karkala : ಸೈಜು ಕಲ್ಲು ಸಾಗಟದ ಟಿಪ್ಪ… […]

  2. […] ಇದನ್ನೂ ಓದಿ: Karkala : ಸೈಜು ಕಲ್ಲು ಸಾಗಟದ ಟಿಪ್ಪ… […]

Leave A Reply

Your email address will not be published.