Rain Alert: ಕರಾವಳಿಯಲ್ಲಿ ಪೂರ್ವ ಮುಂಗಾರು ಮಳೆ ಬಿರುಸು : ಮೇ.22ರವರೆಗೆ ಯೆಲ್ಲೋ ಅಲರ್ಟ್
Rain Alert : ಕರಾವಳಿ ಭಾಗದಲ್ಲಿ ಪೂರ್ವ ಮುಂಗಾರು ಮಳೆ ಬಿರುಸು ಪಡೆದುಕೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಆದಿತ್ಯವಾರವೂ ಗುಡುಗು ಸಹಿತ ಉತ್ತಮ ಪ್ರಮಾಣದಲ್ಲಿ ಮಳೆ ಸುರಿದಿದೆ.
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆಯ ಪ್ರಕಾರ ಮೇ 19ರಿಂದ 22ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ಬಿರುಸಿನ ಮಳೆ, ಗುಡುಗು, ಮಿಂಚು ಇರುವ ಸಾಧ್ಯತೆ ಇದೆ. ಕಡಲಿನಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಐಎಂಡಿ ನೀಡಿದ ಹವಾಮಾನ ಮುನ್ಸೂಚನೆಯ ಪ್ರಕಾರ ಮೇ 18 ರಿಂದ 22ರವರೆಗೆ ಬಂಗಾಲಕೊಲ್ಲಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಸಾಧ್ಯತೆ ಹೆಚ್ಚಿದೆ. ಮುಂಜಾಗ್ರತಾ ಕ್ರಮವಾಗಿ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ.
ಇದನ್ನೂ ಓದಿ: Sullia : ವಿದ್ಯುತ್ ಶಾಕ್ ಹೊಡೆದು ಮೆಸ್ಕಾಂ ಸಿಬಂದಿಗೆ ಗಾಯ