7th Pay Commission: ರಾಜ್ಯ ಸರ್ಕಾರಿ ನೌಕರರ ವೇತನದಲ್ಲಿ 25.5% ಹೆಚ್ಚಳ ಬಹುತೇಕ ಫಿಕ್ಸ್!!

7th Pay Commission: ಲೋಕಸಭಾ ಚುನಾವಣಾ (Parliament Election) ಮುಗಿಯುತ್ತಿದ್ದಂತೆ, ನೀತಿ ಸಂಹಿತೆ ಸಡಿಲವಾಗುತ್ತಿದ್ದಂತೆ ರಾಜ್ಯದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಶುಭ ಸುದ್ದಿ ಎದುರಾಗಲಿದೆ. ಏಕೆಂದರೆ ಸಿಎಂ ಸಿದ್ಧರಾಮಯ್ಯ 7ನೇ ವೇತನ ಆಯೋಗ(7th Pay Commission)ಜಾರಿಗೆ ಒಲವು ತೋರಿದ್ದು, ಸದ್ಯದಲ್ಲೇ ಸರ್ಕಾರಿ ನೌಕರರ ಹಲವು ವರ್ಷಗಳ ಬೇಡಿಕೆ ಈಡೇರುವುದು ಬಹುತೇಕ ಫಿಕ್ಸ್ ಎನ್ನಲಾಗಿದೆ.

ಇದನ್ನೂ ಓದಿ: Janhvi Kapoor: ನನ್ನ ಪತಿ ಹೀಗಿರಬೇಕು : ಜಾನ್ವಿ ಕಪೂರ್ ಮನದಾಳದ ಮಾತು‌ : ಭಾವಿ ಪತಿಯ ಬಗ್ಗೆ ಜಾನ್ವಿ ಹೇಳಿದ್ದೇನು ಗೊತ್ತ?

ಲೋಕಸಭಾ ಚುನಾವಣೆ ಆರಂಭವಾಗುವ ಸಮಯದಲ್ಲಿ ಸಲ್ಲಿಕೆಯಾಗಿದ್ದ 7ನೇ ವೇತನ ಆಯೋಗದ ಶಿಫಾರಸುಗಳನ್ನು ಸ್ವೀಕರಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಅವರು, ಕೂಲಂಕಶವಾಗಿ ಅಧ್ಯಯನ ಮಾಡಿ ಸಲಹೆ ನೀಡಲು ಹಣಕಾಸು ಇಲಾಖೆಗೆ ಸೂಚಿಸಿದ್ದರು. ಆ ಬಳಿಕ ನೀತಿ ಸಂಹಿತೆ ಜಾರಿಯಾಯಿತು. ಆದರೀಗ ನೀತಿ ಸಂಹಿತೆ ಸಡಿಲವಾಗುತ್ತಿದ್ದು, ಸರ್ಕಾರಿ ನೌಕರರ ತವಕ ಹೆಚ್ಚಾಗಿದೆ.

ಇದನ್ನೂ ಓದಿ: Death: ರೆಸಾರ್ಟ್‌ ನಲ್ಲಿ ಜಿಪ್ ಲೈನ್ ಆಡಲು ಹೋದ ಯುವತಿ ಕೆಳಗೆ ಬಿದ್ದು ದಾರುಣ ಸಾವು! ಪ್ರಕರಣ ದಾಖಲು

7 ನೇ ವೇತನ ಆಯೋಗ ಜಾರಿಯಿಂದ ಎಷ್ಟು ಹೆಚ್ಚಾಗುತ್ತೆ ಸಂಬಳ ?!

7ನೇ ವೇತನ ಆಯೋಗವು ರಾಜ್ಯ ಸರ್ಕಾರಿ ನೌಕರರ ಮೂಲ ವೇತನದಲ್ಲಿ 27.5% ಹೆಚ್ಚಳ ಮಾಡುವುದರ ಜೊತೆಗೆ ಅವರ ಕನಿಷ್ಠ ವೇತನವನ್ನು ತಿಂಗಳಿಗೆ 17,000 ರೂ.ನಿಂದ 27,000 ರೂ.ಗೆ ಹೆಚ್ಚಿಸುವಂತೆ ಆಯೋಗವು ಶಿಫಾರಸು ಮಾಡಿದೆ. ಒಟ್ಟಿನಲ್ಲಿ ಪ್ರಸ್ತುತ 1:8.86 ಕನಿಷ್ಠ ಮತ್ತು ಗರಿಷ್ಠ ವೇತನಗಳ ಅನುಪಾತವನ್ನು 1:8.93ಕ್ಕೆ ಹೆಚ್ಚಿಸಲಾಗಿದೆ. ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳ ಬೋಧಕೇತರ ನೌಕರರಿಗೂ ಈ ಶಿಫಾರಸು ಅನ್ವಯವಾಗಲಿದ್ದು, 2022ರ ಜೂನ್‌ನಿಂದ ಪೂರ್ವಾನ್ವಯವಾಗುವಂತೆ ಜಾರಿ ಮಾಡುವಂತೆ ಶಿಫಾರಸು ಮಾಡಿದೆ. ಬೆನ್ನಲ್ಲೇ ಸರ್ಕಾರವು ಮೂಲ ವೇತನದಲ್ಲಿ 27.5% ಹೆಚ್ಚಳ ಘೋಷಿಸಿದೆ.

ಅಂದಹಾಗೆ ಈಗಾಗಲೇ ಮಧ್ಯಂತರವಾಗಿ ಶೇ.17ರಷ್ಟು ಮೂಲ ವೇತನ ಹೆಚ್ಚಳ ಮಾಡಿದ್ದು, ಅಂತಿಮವಾಗಿ ಇನ್ನೂ ಶೇ.8 ರಿಂದ ಶೇ.8.5 ರಷ್ಟು ವೇತನ ಹೆಚ್ಚಳ ನಿರೀಕ್ಷಿಸಲಾಗಿದೆ. ಒಟ್ಟಾರೆ ಏರಿಕೆ ಮೂಲವೇತನದ ಶೇ.25 ರಿಂದ ಶೇ.25.5 ತಲುಪುವ ಸಾಧ್ಯತೆಯಿದೆ ಎಂದು ಬಲ್ಲ ಮೂಲಗಳು ಖಚಿತಪಡಿಸಿವೆ.

ಇದರ ಜೊತೆಗೆ ಬೇಸಿಕ್ ಸ್ಯಾಲರಿ 17,000 ರೂ.ನಿಂದ 27,000 ರೂಪಾಯಿಗೆ ಏರಿಕೆಯಾಗಲಿದೆ. ಹಳೇಯ ಬೇಸಿಕ್ ಸ್ಯಾಲರಿ 20900 ಆದರೆ ಹೊಸ ವರದಿ ಪ್ರಕಾರ 33300ಕ್ಕೆ ಏರಿಕೆಯಾಗಲಿದೆ. 40,900 ಇದ್ದರೆ ಅದು 65,950ಕ್ಕೆ ಏರಿಕೆಯಾಗುತ್ತದೆ. ಬೇಸಿಕ್ 50,150 ಇದ್ದರೆ ವೇತನ ಆಯೋಗದ ವರದಿ ಪ್ರಕಾರ ಅದು 79,900 ಬೇಸಿಕ್‌ಗೆ ಬರಲಿದೆ. ಇದರ ಜೊತೆಗೆ ಡಿಎ, ಐಆರ್ ಎಲ್ಲವೂ ಸೇರಿಕೊಂಡು ಸಂಬಳ ಮತ್ತಷ್ಟು ಹೆಚ್ಚಾಗಲಿದೆ. ಹಿರಿಯ ಶ್ರೇಣಿ ನೌಕರರ ಆರಂಭಿಕ ಕನಿಷ್ಠ ವೇತನ ಈಗ 1,04,600 ರೂಪಾಯಿಯಿದ್ದು, ಅದನ್ನು 1,67,200 ರೂಪಾಯಿಗೆ ಪರಿಷ್ಕರಿಸುವಂತೆ ಶಿಫಾರಸು ಮಾಡಲಾಗಿದೆ.

ಸದ್ಯಕ್ಕೆ ದೊರೆತ ಸಿಹಿ ಸುದ್ದಿ ಏನಂದ್ರೆ ಜೂನ್ ಮೊದಲ ವಾರ ನೀತಿ ಸಂಹಿತೆ ಮುಕ್ತಾಯವಾದ ಬಳಿಕ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ಅಂತಿಮ ನಿರ್ಣಯ ಪ್ರಕಟಿಸಲಾಗುತ್ತದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.

Leave A Reply

Your email address will not be published.