Bengaluru: ಒಂದು ಸಮುದಾಯಯವನ್ನು ಮಾತ್ರ ತುಷ್ಟೀಕರಣ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ್: ಅಶ್ವಥ್ ನಾರಾಯಣ್

Bengaluru: ಕಾಂಗ್ರೆಸ್ ಮುಕ್ತ ಕರ್ನಾಟಕವೇ ಈ ಮೈತ್ರಿ ಉದ್ದೇಶ. ಎರಡೂ ಪಕ್ಷಗಳ ಉದ್ದೇಶ ಒಂದೇ, ಕಾಂಗ್ರೆಸ್ ವಿರೋಧಿ ನೀತಿ. ಹೀಗಾಗಿ ನಾವು ಒಂದಾಗಿದ್ದೇವೆ. ಒಗ್ಗಟ್ಟಾಗಿ ಚುನಾವಣೆ ಎದುರಿಸಿದ್ದೇವೆ. ದೇವೇಗೌಡರು ಮೋದಿ ಅವರು ಈ ಮೈತ್ರಿಗೆ ಕಾರಣರು ಎಂದು ಕಾಂಗ್ರೆಸ್ ಸರ್ಕಾರದ ವಿರುದ್ದ ಮಾಜಿ ಡಿ.ಸಿಎಂ ಕಿಡಿಕಾರಿದರು.

ಇದನ್ನೂ ಓದಿ: Pomegranate Benifits: ಖಾಲಿ ಹೊಟ್ಟೆಯಲ್ಲಿ ದಾಳಿಂಬೆ ತಿನ್ಬೇಕಂತೆ, ಯಾಕೆ ಗೊತ್ತಾ?

ಸಮೃದ್ಧ ಕರ್ನಾಟಕ ನಿರ್ಮಾಣ ಈ ಮೈತ್ರಿಕೂಟದಿಂದ ಸಾಧ್ಯ. ಕಾಂಗ್ರೆಸ್ ಎದುರಿಸಲು ನಾವು ಒಂದಾಗಿದ್ದೇವೆ. ಕುಮಾರಸ್ವಾಮಿ ಅವರ ಪ್ರೀತಿಗೆ ನಾವು ಪೂರ್ಣವಾಗಿ ಸೋತಿದ್ದೇವೆ. ನಮ್ಮನ್ನೆಲ್ಲ ಪ್ರೀತಿಯಿಂದ ಕರೆದು ಮಾತನಾಡಿದ್ದಾರೆ. ಜನರು ಕಾರ್ಯಕರ್ತರು ನಮ್ಮನ್ನು ಒಪ್ಪಿದ್ದಾರೆ. ಮೊದಲ ಪರೀಕ್ಷೆಯಲ್ಲಿ ನಾವು ಪಾಸಾಗುತ್ತೇವೆ.

ಇದನ್ನೂ ಓದಿ: HD Kumaraswamy: ವಿಧಾನ ಪರಿಷತ್ ಚುನಾವಣೆಯಲ್ಲೂ ಹಣ, ಗಿಫ್ಟ್ ಹಂಚುತ್ತಿದೆ ಕಾಂಗ್ರೆಸ್: ಹೆಚ್.ಡಿ.ಕುಮಾರಸ್ವಾಮಿ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವಿಫಲವಾಗಿದೆ. ಬರ ನಿರ್ವಹಣೆ, ಆರೋಗ್ಯ, ಮೂಲ ಸೌಕರ್ಯದಲ್ಲಿಯೂ ವಿಫಲವಾಗಿದೆ ಈ ಸರ್ಕಾರ. ಕೇವಲ ಒಂದು ಸಮುದಾಯವನ್ನು ತುಷ್ಟೀಕರಣ ಮಾಡುತ್ತಿದೆ. ಕೊಲೆ ಸುಲಿಗೆ, ಅತ್ಯಾಚಾರದಂತ ಘಟನೆಗಳು ನಿರಂತರವಾಗಿ ನಡೆಯುತ್ತಿದ್ದರೂ ಅದರ ಬಗ್ಗೆ ಮಾತನಾಡುತ್ತಿಲ್ಲ. ಕಾಂಗ್ರೆಸ್ ನವರು ಭಂಡತನದವರು, ಅವರಿಗೆ ಸೂಕ್ಷ್ಮತೆಯೇ ಇಲ್ಲ. ಅವರ ಐವತ್ತು ವರ್ಷದ ಅನುಭವ ಬರೀ ಭಾಷಣದ ಹಾವಭಾವಕ್ಕೆ ಸೀಮಿತವಾಗಿ, ಸಮಾಜ ಒಡೆಯುವುದಕ್ಕೆ ಮಾತ್ರ ಮೀಸಲಾಗಿದೆ ಎಂದು ದೂರಿದರು.

Leave A Reply

Your email address will not be published.