Home News Hasan: ನಿಗದಿತ ಅವಧಿಗೆ ಚುನಾವಣೆ ನಡೆಸದಕ್ಕೆ ರಾಷ್ಟ್ರಪತಿ ನ್ಯಾಯಾಲಯದ ಮೆಟ್ಟಿಲೇರಿದ ಪಟ್ಟಣ ಪಂಚಾಯಿತಿ ಸದಸ್ಯರು.

Hasan: ನಿಗದಿತ ಅವಧಿಗೆ ಚುನಾವಣೆ ನಡೆಸದಕ್ಕೆ ರಾಷ್ಟ್ರಪತಿ ನ್ಯಾಯಾಲಯದ ಮೆಟ್ಟಿಲೇರಿದ ಪಟ್ಟಣ ಪಂಚಾಯಿತಿ ಸದಸ್ಯರು.

Hasan

Hindu neighbor gifts plot of land

Hindu neighbour gifts land to Muslim journalist

Hasan: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ನಿಗದಿತ ಅವಧಿಗೆ ಸರಿಯಾಗಿ ಚುನಾವಣೆ ನಡೆಸದೆ ವಿಕೇಂದ್ರೀಕೃತ ಆಡಳಿತ‌ ವ್ಯವಸ್ಥೆಗೆ ಧಕ್ಕೆ ತರವ ಮೂಲಕ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ವರ್ತಿಸಲಾಗುತ್ತಿದೆ ಎಂದು ಪಪಂ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Rahul Gandhi: ಭಾಷಣ ಮಾಡುತ್ತಲೇ ಸೆಖೆ ಎಂದು ತಲೆ ಮೇಲೆ ನೀಲು ಸುರಿದುಕೊಂಡ ರಾಹುಲ್ ಗಾಂಧಿ !!

ದೇಶದ ಸಂವಿಧಾನದಲ್ಲಿ ಸ್ಥಳೀಯ ಸಂಸ್ಥೆಗಳ ಆಡಳಿತ ಸ್ಥಳೀಯ ಸರ್ಕಾರಗಳು ಎನ್ನುವ ಅಂಶ ಅಡಕವಾಗಿದೆ. ಆದರೆ ಸರ್ಕಾರಗಳು ಇವುಗಳನ್ನು ತಮ್ಮ ಕೈಗೊಂಬೆಗಾಗಿ ಮಾಡಿಕೊಳ್ಳುವ ದುರುದ್ದೇಶದಿಂದ ರಾಜ್ಯದಲ್ಲಿ ಬಿ.ಬಿ.ಎಂ.ಪಿ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಿಗೆ ನಿಗದಿತ ಅವಧಿಗೆ ಚುನಾವಣೆ ನಡೆಸದೇ ಶಾಸಕಾಂಗ ಸಭೆಯು ಮೀನಮೇಷ ಎಣಿಸಲಾಗುತ್ತಿದೆ. ಆದರೆ ದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆಗಳಿಗೆ ಅವಧಿಗೆ ಅನುಗುಣವಾಗಿ ಚುನಾವಣೆ ನಡೆಸಲಾಗುತ್ತಿದೆ. ಸ್ಥಳೀಯ ಸಂಸ್ಥೆಗಳನ್ನು ನಿರ್ಲಕ್ಷ್ಯಿಸುತ್ತಿರುವ ದುರುದ್ದೇಶವಾದರೂ ಏನು ಎಂದು ಖಾರವಾಗಿ ಪ್ರಶ್ನಿಸಿದರು.

ಇದನ್ನೂ ಓದಿ: R Ashok: ಹೋಮ್ ಮಿನಿಸ್ಟರ್ ಯಾರು ಅನ್ನೋದೇ ಗೊತ್ತಾಗ್ತಾ ಇಲ್ಲ: ಆರ್. ಅಶೋಕ್

ಪಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿಪಡಿಸಿಲ್ಲ. ಹೀಗಾಗಿ ಚುನಾಯಿತ ಪ್ರತಿಧಿಗಳು ಇದ್ದೂ ಇಲ್ಲದಂತ ಪರಿಸ್ಥಿತಿಗೆ ದೂಡಲಾಗಿದೆ. ನಮ್ಮನ್ನು ಆಯ್ಕೆ ಮಾಡಿದ ಮತದಾರರಿಗೂ ಮೋಸ ಮಾಡಿದಂತಾಗಿದೆ. ನಮ್ಮ ಹಕ್ಕುಗಳನ್ನು ಮೊಟಕುಗೊಳಿಸಿ ಶಾಸಕರ ಅಣತಿಯಂತೆ ಆಡಳಿತ ನಡೆಸುವ‌ ದುಸ್ಥಿತಿ ಬಂದೊದಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ಸ್ಥಳೀಯ ಸಂಸ್ಥೆಗಳಿಗೆ ನಿಗದಿತ ಅವಧಿಗೆ ಚುನಾವಣೆ ನಡೆಸುವ ಸಂಬಂಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಸುಪ್ರೀಂ ಕೋರ್ಟ್ ಹಾಗೂ ರಾಷ್ಟ್ರಪತಿಗೆ ದೂರಿನ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಈ ಕುರಿತು ಆಶಾದಾಯಕ ತೀರ್ಪು ಹೊರಬರುವ ವಿಶ್ವಾಸವಿದೆ ಎಂದು ಆಶಯ ವ್ಯಕ್ತ ಪಡಿಸಿದರು.