Congress Government: ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನ – ಸಚಿವ ನಾಗೇಂದ್ರ ರಾಜೀನಾಮೆಗೆ ಸಿಎಂ ಸೂಚನೆ ?!
Congress Government: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ ನಾಗೇಂದ್ರ ಅವರ ತಲೆದಂಡ ಅವರ ಹೆಸರು ಕೇಳಿ ಬರುತ್ತಿದ್ದು, ಸಚಿವರ ತಲೆದಂಡಕ್ಕೆ ಬಿಜೆಪಿ ಆಗ್ರಹಿಸಿದೆ. ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ(BJP) ಜೂನ್ 6 ರವರೆಗೆ ಗಡುವು ನೀಡಿದೆ. ಈ ನಡುವೆ ಸಚಿವ ನಾಗೇಂದ್ರ(Minister nagendra) ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ(CM Siddaramaiah) ಸೂಚನೆ ನೀಡಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.
ಇದನ್ನೂ ಓದಿ: Punith Rajkumar: ಪುನೀತ್ ರಾಜ್ ಕುಮಾರ್ ತಮ್ಮ ಮಡದಿ ಮತ್ತು ಮಕ್ಕಳಿಗೆ ಬಿಟ್ಟು ಹೋದ ಆಸ್ತಿ ಎಷ್ಟು?!
ಹೌದು, ವಾಲ್ಮೀಕಿ ನಿಗಮದ(Valmiki Nigama) ಅಧಿಕಾರಿ ಪಿ.ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನಕ್ಕೆ ಕ್ಷಣಗಣನೆ ಶುರುವಾಗಿದೆ.
ಇದನ್ನೂ ಓದಿ: RBI ನಿಂದ ಐತಿಹಾಸಿಕ ಸಾಧನೆ – ಇಂಗ್ಲೆಂಡ್ ನಿಂದ ಭಾರತಕ್ಕೆ ಮರಳಿತು 100 ಟನ್ ಚಿನ್ನ !!
ವಾಲ್ಮೀಕಿ ಅಭಿವೃದ್ಧಿ ನಿಮಗದ ಹಗರಣದ ಬಗ್ಗೆ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಭೆ ನಡೆಸಿದ್ದರು. ಸಭೆಯಲ್ಲಿ ಸಚಿವ ಬಿ. ನಾಗೇಂದ್ರ ರಾಜೀನಾಮೆ ಬಗ್ಗೆ ಚರ್ಚೆ ನಡೆಯಿತು. ಈ ವಿಚಾರದಲ್ಲಿ ಸರ್ಕಾರಕ್ಕೆ ಮುಖಭಂಗವಾಗಬಾರದೆಂದು ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರೇ ಸೂಚನೆ ನೀಡಿದ್ದಾರೆ. ತನಿಖೆ ಬಳಿಕ ಮತ್ತೆ ಸಚಿವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಹಾಗೂ ಈ ಪ್ರಕರಣವನ್ನು ಸಿಬಿಐಗೆ ನೀಡುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.
ಏನಿದು ಪ್ರಕರಣ ?
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಸುಮಾರು 80 ರಿಂದ 85 ಕೋಟಿ ಅನುದಾನ ದುರ್ಬಳಕೆಯಾಗಿದೆ. ಈ ಅವ್ಯವಹಾರದಿಂದ ಮನನೊಂದು ನಿಗಮದ ಅಧೀಕ್ಷಕ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರ್ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್ನೋಟ್ ನಲ್ಲಿ ಸಚಿವರ ಮೌಖಿಕ ಆದೇಶದಂತೆ ಅವ್ಯಹಾರ ನಡೆದಿದೆ ಎಂದು ಚಂದ್ರಶೇಖರ ಡೆತ್ ನೋಟ್ ನಲ್ಲಿ ತಿಳಿಸಿದ್ದಾರೆ.