Harish poonja: MLA ಹರೀಶ್ ಪೂಂಜ & MLC ಪ್ರತಾಪ್ ಸಿಂಹ ನಾಯಕ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ!

ಅರಣ್ಯ ಇಲಾಖೆ ಕಾನೂನು ಜಾಗದಲ್ಲಿ ಗೂಂಡಾಗಿರಿ !

Share the Article

Harish poonja: ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ, ಅರಣ್ಯ ಇಲಾಖೆಯ ಜಾಗದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವೆ ನಡೆದ ಗಲಾಟೆ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಜೂ.1ರಂದು (ದೋಷರೋಪ ಪಟ್ಟಿ)ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

ಈಗಾಗಲೇ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಲೋಲಾಕ್ಷ ಎಂಬಾತ ಮೀಸಲು ಅರಣ್ಯ ಇಲಾಖೆಯ ಜಾಗದಲ್ಲಿ ಅಕ್ರಮವಾಗಿ ಮನೆ ನಿರ್ಮಾಣ ಮಾಡಿದ್ದನ್ನು ಉಪ್ಪಿನಂಗಡಿ ಅರಣ್ಯ ಇಲಾಖೆ ಕಿತ್ತು ಹಾಕಿದ್ದರು ಇದರ ವಿರುದ್ಧ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ (Harish poonja) ಮತ್ತು ಬಿಜೆಪಿ ಕಾರ್ಯಕರ್ತರು ಮನೆ ನಿರ್ಮಾಣ ಮಾಡಿದ್ದರು ನಂತರ ಅರಣ್ಯ ಇಲಾಖೆ ಮನೆಯನ್ನು ತೆರವು ಮಾಡಲು 9-10-2023 ರಂದು ಮುಂದಾಗಿದ್ದರು.

ಅರಣ್ಯ ಇಲಾಖೆ ಮನೆಯನ್ನು ತೆರವು ಮಾಡಲು ಮುಂದಾದ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಎಮ್.ಎಲ್.ಸಿ ಪ್ರತಾಪ್ ಸಿಂಹ ನಾಯಕ್ ಮತ್ತು ಇತರರು ಅರಣ್ಯ ಇಲಾಖೆಯ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಈ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಗೆ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆಕೆ ಎಂಬವರ ದೂರು ನೀಡಿದ್ದರು.

ಸದ್ಯ ಈ ಬಗ್ಗೆ ಧರ್ಮಸ್ಥಳ ಪೊಲೀಸರು ತನಿಖೆ ನಡೆಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಎಮ್.ಎಲ್.ಸಿ ಪ್ರತಾಪ್ ಸಿಂಹ ನಾಯಕ್ ಮತ್ತು ಇತರ ಒಟ್ಟು 17 ಮಂದಿ ವಿರುದ್ಧ ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಜೂ.1 ರಂದು ದೋಷರೋಪ ಪಟ್ಟಿ ಸಲ್ಲಿಸಿದ್ದಾರೆ.

ಬೆಳ್ತಂಗಡಿ ಮೂಲದ, ಮಂಗಳೂರು ಎಕ್ಸ್‌ಪರ್ಟ್ ಕಾಲೇಜಿನ ನಿಹಾರ್ ಎಸ್. ಆರ್ ರಾಜ್ಯಕ್ಕೆ ಪ್ರಥಮ; ಹಲವು ರ್ಯಾಂಕ್ ಬಾಚಿಕೊಂಡ ಕರಾವಳಿ ಪೋರ

Leave A Reply

Your email address will not be published.