Home Karnataka State Politics Updates Loksabha Election: ನಾಳೆ ಲೋಕಸಭೆ ಚುನಾವಣೆ ಫಲಿತಾಂಶ; ರಾಜ್ಯಾದ್ಯಂತ ಸೆ.144 ಜಾರಿ

Loksabha Election: ನಾಳೆ ಲೋಕಸಭೆ ಚುನಾವಣೆ ಫಲಿತಾಂಶ; ರಾಜ್ಯಾದ್ಯಂತ ಸೆ.144 ಜಾರಿ

Hindu neighbor gifts plot of land

Hindu neighbour gifts land to Muslim journalist

Loksabha Election 2024: ಲೋಕಸಭೆ ಸಾರ್ವತ್ರಿಕ ಚುನಾವಣೆ-2024 ರ ಮತ ಎಣಿಕೆ ನಾಳೆ ನಡೆಯಲಿರುವ ಕಾರಣ, ಕಾನೂನು ಸುವ್ಯವಸ್ಥೆ ಕಾಪಾಡಲು ಜೂ.04 ರ ಬೆಳಿಗ್ಗೆ 06 ಗಂಟೆಯಿಂದ ಜೂ.5 ರ ಬೆಳಿಗ್ಗೆ 06 ಗಂಟೆಯವರೆಗೆ ಸೆ.144 ರಡಿ ರಾಜ್ಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಲಾಗಿರುತ್ತದೆ ಹಾಗೂ ಮತ ಎಣಿಕೆ ಕೇಂದ್ರದ ಸುತ್ತಮುತ್ತ 200 ಮೀಟರ್‌ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಚುನಾವಣಾ ಆಯೋಗ ಆದೇಶ ಮಾಡಿದೆ.

ಮತ ಎಣಿಕೆಯಾದ ನಂತರ ಜಯಗಳಿಸಿದ ಅಭ್ಯರ್ಥಿಗಳ ಬೆಂಬಲಿಗರು ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ, ಸಭೆ ಮತ್ತು ಇತರ ಕಾರ್ಯಕ್ರಮಗಳನ್ನು ನಡೆಸಿದ್ದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗವಾಗುವ ಸಾಧ್ಯತೆಗಳಿರುವುದರಿಂದ ಈ ಆದೇಶ ಹೊರಡಿಸಲಾಗಿದೆ.

ಷರತ್ತುಗಳೇನು?

ಐದಕ್ಕಿಂಗ ಹೆಚ್ಚು ಜನ ಸೇರುವುದು, ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ, ರಾಜಕೀಯ ಸಭೆ ಸಮಾರಂಭ, ವಾಹನ ಜಾಥಾ, ರ್ಯಾಲಿ ಮುಂತಾದ ಯಾವುದೇ ಚಟುವಟಿಕೆ ನಡೆಸುವುದು, ಸ್ಫೋಟಕ, ದಹನ ವಸ್ತು, ಮಾರಕ ಆಯುಧ ಹೊಂದಿರುವುದು ಅಥವಾ ಹಿಡಿದು ಓಡಾಡುವುದು ಮುಂತಾದವುಗಳನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: ಹಾರ್ಟ್​ ಅಟ್ಯಾಕ್​ ಭಯ ನಿಮ್ಮನ್ನ ಕಾಡ್ತಿದೆಯೇ! ತಜ್ಞರು ಹೇಳ್ತಿರೋ ಈ ಮಾಹಿತಿ ತಿಳಿಯಿರಿ!

ಜೊತೆಗೆ ಚುನಾವಣಾ ಅಭ್ಯರ್ಥಿ, ಬೆಂಬಲಿಗರು ಸೇರಿ ಐದು ಜನರಿಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ. ಮತ ಎಣಿಕೆ ಕೇಂದ್ರದ ಸುತ್ತ 200 ಮೀಟರ್‌ ವ್ಯಾಪ್ತಿಯ ಪ್ರದೇಶ ಸಂಪೂರ್ಣ ನಿರ್ಬಂಧಿತ ಪ್ರದೇಶವಾಗಿದ್ದು, ಇಲ್ಲಿ ವಾಹನ ನಿಲುಗಡೆ, ಧ್ವನಿವರ್ಧಕ ಬಳಕೆ ಮುಂತಾದವುಗಳನ್ನು ನಿಷೇಧ ಮಾಡಿದೆ.

ವಾದ್ಯ ಬಾರಿಸುವುದು, ಘೋಷಣೆ ಪದ ಹಾಡುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧ ಮಾಡಿದೆ.

ಇದನ್ನೂ ಓದಿ: Monsoon Arrival: ಮುಂಗಾರು ಆಗಮನ, ಈ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ-IMD ಎಚ್ಚರಿಕೆ