Guest Teacher Recruitment: 8954 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ! ವೇತನ ಇನ್ನಿತರ ವಿವರ ಇಂತಿವೆ!

Guest Teacher Recruitment: 2024-25ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಪ್ರಸ್ತುತ ಖಾಲಿ ಇರುವ 8954 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ಈ ಕೂಡಲೇ ನೇಮಕ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.

2024-25ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ (Guest Teacher Recruitment) ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ನೇರ ನೇಮಕಾತಿ/ ಬಡ್ತಿ/ ವರ್ಗಾವಣೆ ಮೂಲಕ ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಒಟ್ಟು 10,000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸೂಚಿಸಲಾಗಿದೆ.

2024-25ನೇ ಸಾಲಿನಲ್ಲಿ ಮೊದಲ ಹಂತದಲ್ಲಿ ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಪ್ರಸ್ತುತ ಖಾಲಿ ಇರುವ ಒಟ್ಟು 8,954 ಹುದ್ದೆಗಳಿಗೆ ಜಿಲ್ಲಾವಾರು/ ತಾಲ್ಲೂಕುವಾರು ಅಶಿಥಿ ಶಿಕ್ಷಕರ ಹುದ್ದೆಗಳನ್ನು ಹಂಚಿಕೆ ಮಾಡಿ, ಅನುಮತಿ ನೀಡಿದೆ. ಸದ್ಯ ಒಟ್ಟು 8,954 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ಕೂಡಲೇ ನೇಮಕ ಮಾಡಿಕೊಳ್ಳಲಾಗುತ್ತೆ. ಆದರೆ ಈ ಷರತ್ತುಗಳಿಗೊಳಪಟ್ಟು ಅನುಮತಿ ನೀಡಲಾಗಿದೆ.

ಇದನ್ನೂ ಓದಿ: Guest Teacher Recruitment: 8954 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ! ವೇತನ ಇನ್ನಿತರ ವಿವರ ಇಂತಿವೆ!

ಸರ್ಕಾರಿ ಪ್ರೌಢ ಶಾಲಾ ಅಶಿಥಿ ಶಿಕ್ಷಕರ ಗೌರವ ಸಂಭಾವನೆ ದರ ಮಾಹೆಯಾನ ರೂ. 10,500 ಆಗಿರುತ್ತದೆ. ಈ ಗೌರವ ಧನ ಪಾವತಿಯನ್ನು ಅತಿಥಿ ಶಿಕ್ಷಕರು ಕರ್ತವ್ಯಕ್ಕೆ ಹಾಜರಾದ ದಿನಾಂಕದಿಂದ ಪಾವತಿಸುವುದು.

ಷರತ್ತುಗಳ ಮಾಹಿತಿ
* ಸರ್ಕಾರಿ ಪ್ರೌಢ ಶಾಲೆಗಳಿಗೆ ಶಾಲಾವಾರು/ ತಾಲ್ಲೂಕುವಾರು ಬಾಕಿ ಇರುವ ಅಗತ್ಯ ಹುದ್ದೆಗಳಿಗೆ ಮಾತ್ರ ಅತಿಥಿ ಶಿಕ್ಷಕರನ್ನು ತ್ವರಿತವಾಗಿ ನೇಮಕಾತಿ ಮಾಡಲು ತಾಲ್ಲೂಕುವಾರು ಅತಿಥಿ ಶಿಕ್ಷಕರ ಹುದ್ದೆಗಳನ್ನು ಹಂಚಿಕೆ ಮಾಡಲಾಗಿರುತ್ತದೆ.

* ಅತಿಥಿ ಶಿಕ್ಷಕರ ಆಯ್ಕೆ ಜವಾಬ್ದಾರಿಯನ್ನು ಸಂಬಂಧಿಸಿದ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರುಗಳ ಮೂಲಕವೇ ನೇಮಕ ಮಾಡುವುದು.

* ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಗಳು/ ಬೆಂಗಳೂರು ಪಬ್ಲಿಕ್ ಶಾಲೆಗಳು ಹಾಗೂ ಆದರ್ಶ ವಿದ್ಯಾಲಯಗಳಲ್ಲಿ ಖಾಲಿ ಇರುವ ಸಹ ಶಿಕ್ಷಕರ ಹುದ್ದೆಗಳ ಶೇಕಡ 100 ರಷ್ಟು ಅತಿಥಿ ಶಿಕ್ಷಕರನ್ನು ಮೊದಲ ಆದ್ಯತೆ ನೀಡಿ ನೇಮಕ ಮಾಡಿಕೊಳ್ಳಲು ಕ್ರಮವಹಿಸುವುದು.

* ಸರ್ಕಾರಿ ಪ್ರೌಢ ಶಾಲಾ ಅತಿಥಿ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಕಠಿಣ ವಿಷಯಗಳಾದ ಗಣಿತ, ವಿಜ್ಞಾನ, ಆಂಗ್ಲ ವಿಷಯದ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಆದ್ಯತೆ ನೀಡಲು ತಿಳಿಸಿದೆ.

* ಸದರಿ ವಿಷಯಗಳಿಗೆ ಹೆಚ್ಚುವರಿ ಶಿಕ್ಷಕರು ಇರುವ ಶಾಲೆಗಳಿಗೆ ಅತಿಥಿ ಶಿಕ್ಷಕರ ಹುದ್ದೆಗಳನ್ನು ಮಂಜೂರು ಮಾಡುವಂತಿಲ್ಲ. ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡ ಹುದ್ದೆಗೆ ವರ್ಗಾವಣೆ/ ನೇಮಕಾತಿ ಮುಖಾಂತರ ಖಾಯಂ ಶಿಕ್ಷಕರು ಸ್ಥಳನಿಯುಕ್ತಿಗೊಂಡಲ್ಲಿ ಸದರಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅತಿಥಿ ಶಿಕ್ಷಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ತಾಲ್ಲೂಕಿನಲ್ಲಿ ವರ್ಗಾವಣೆಯಿಂದ ತೆರವಾದ ಹುದ್ದೆಗೆ ಅತಿಥಿ ಶಿಕ್ಷಕರನ್ನು ಹಂಚಿಕೆ ಮಾಡುವುದು.

* ಅತಿಥಿ ಶಿಕ್ಷಕರನ್ನು ಅತೀ ಹೆಚ್ಚು ಮಕ್ಕಳಿರುವ ಹಗೂ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರ ಹುದ್ದೆಗಳು ಖಾಲಿ ಇರುವ ಪ್ರೌಢ ಶಾಲೆಗಳಿಗೆ ಆದ್ಯತೆ ಮೇರೆಗೆ ಒದಗಿಸುವುದು. ಅತಿಥಿ ಶಿಕ್ಷಕರನ್ನು ಪ್ರಮುಖವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಅತ್ಯಾವಶ್ಯಕ ಖಾಲಿ ಹುದ್ದೆಗಳಿಗೆ ಆದ್ಯತೆ ಮೇರೆಗೆ ನೇಮಿಸುವುದು.

* ಅತಿಥಿ ಶಿಕ್ಷಕರನ್ನು ಆಯಾ ಹುದ್ದೆಗೆ ನಿಗದಿಪಡಿಸಿದ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಿ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡತಕ್ಕದ್ದು. ಅತಿಥಿ ಶಿಕ್ಷಕರ ಹಾಜರಾತಿ ವಹಿಯನ್ನು ಪ್ರತ್ಯೇಕವಾಗಿ ನಿರ್ವಹಿಸುವುದು.

ಇದನ್ನೂ ಓದಿ: Snake Repellent Plants: ಈ ಗಿಡ ನೆಟ್ಟು ನೋಡಿ! ಮನೆಯಂಗಳದಲ್ಲಿ ಒಂದೇ ಒಂದು ಹಾವು ಕೂಡ ಅತ್ತಕಡೆ ಸುಳಿಯಲ್ಲ!

Leave A Reply

Your email address will not be published.