Vidhan Parishad Eelection: ಇಂದು ಪದವೀಧರ, ಶಿಕ್ಷಕರ ಕ್ಷೇತ್ರದ ಫಲಿತಾಂಶ; ಯಾರಿಗೆ ಒಲಿಯಲಿದ್ದಾಳೆ ಅದೃಷ್ಟಲಕ್ಷ್ಮಿ?

Vidhan Parishad Eelection: ಇಂದು (ಗುರುವಾರ) ವಿಧಾನಪರಿಷತ್‌ನ ಮೂರು ಶಿಕ್ಷಕರ ಮತ್ತು ಮೂರು ಪದವೀಧರ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ನಡೆಯಲಿದೆ. 78 ಅಭ್ಯರ್ಥಿಗಳಿದ್ದು, ಅವರ ಭವಿಷ್ಯದ ನಿರ್ಧಾರ ಇಂದು ಗೊತ್ತಾಗಲಿದೆ.

ಈಶಾನ್ಯ ಪದವೀಧರ, ಬೆಂಗಳೂರು ಪದವೀಧರ, ನೈಋತ್ಯ ಪದವೀಧರ ಮತ್ತು ಆಗ್ನೇಯ ಶಿಕ್ಷಕರ, ನೈಋತ್ಯ ಶಿಕ್ಷಕರ, ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಮತ ಎಣಿಕೆ ಇಂದು ನಡೆಯಲಿದ್ದು, ಮತ ಎಣಿಕೆ ಕೇಂದ್ರಗಳ ಸುತ್ತ ಬಿಗಿ ಪೊಲೀಸ್‌ ಭದ್ರತೆ ಮಾಡಲಾಗಿದೆ.

ಇದನ್ನೂ ಓದಿ: NEET 2024 ಮರು ಪರೀಕ್ಷೆಗೆ ಒತ್ತಾಯ; ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್‌ ; ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!

11 ನಾಮಪತ್ರಗಳು ಮಾನ್ಯಗೊಂಡಿದ್ದು, ಒಂದು ನಾಮಪತ್ರ ತಿರಸ್ಕರಿಸಲಾಗಿದೆ. ಕಾಂಗ್ರೆಸ್‌, ಜೆಡಿಎಸ್‌, ಬಿಜೆಪಿ ಅಭ್ಯರ್ಥಿಗಳ ನಾಮಪತ್ರಗಳು ಮಾನ್ಯವಗಿರುವುದರಿಂದ ಅವಿರೋಧ ಆಯ್ಕೆ ಖಚಿತ ಎನ್ನಲಾಗಿದೆ. ನಾಮಪತ್ರ ವಾಪಸ್‌ ಪಡೆಯಲು ಇಂದು (ಗುರುವಾರ) ಕೊನೆಯ ದಿನವಾಗಿದ್ದು, ಸಂಜೆ ಅವಿರೋಧವಾಗಿ ಆಯ್ಕೆ ಬಗ್ಗೆ ಚುನಾವಣಾಧಿಕಾರಿಗಳು ಅಧಿಕೃತ ಘೋಷಣೆ ಮಾಡಲಿದ್ದಾರೆ.

ಎನ್‌.ಎಸ್‌.ಬೋಸರಾಜು, ಐವಾನ್‌ ಡಿಸೋಜಾ, ಕೆ.ಗೋವಿಂದರಾಜ್‌, ಜಗದೇವ ಗುತ್ತೇದಾರ್‌, ಬಲ್ಕೀಸ್‌ ಬಾನು, ಡಾ.ಯತೀಂದ್ರ ಸಿದ್ದರಾಮಯ್ಯ, ಎ ವಸಂತಕುಮಾರ್‌ – ಕಾಂಗ್ರೆಸ್‌ ಅಭ್ಯರ್ಥಿಗಳಾಗಿದ್ದು ಇವರ ನಾಮಪತ್ರ ಕ್ರಮಬದ್ಧವಾಗಿದೆ.
ಸಿಟಿ ರವಿ, ಮೂಳೆ ಮಾರುತಿರಾವ್‌, ರವಿಕುಮಾರ್‌ – ಬಿಜೆಪಿ ಅಭ್ಯರ್ಥಿಗಳಾಗಿದ್ದು ನಾಮಪತ್ರ ಪುರಸ್ಕೃತವಾಗಿದೆ.
ಆಸಿಫ್‌ ಫಾಷಾ- ಪಕ್ಷೇತರ ಅಭ್ಯರ್ಥಿಯಾಗಿದ್ದು ಅವರಿಗೆ ಸೂಚಕರು ಇಲ್ಲದ ಕಾರಣ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: Pradeep Eshwar: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ ರಾಜೀನಾಮೆ ಪತ್ರ ವೈರಲ್, ಮಾತಿಗೆ ತಪ್ಪದ ಮಗ ಅಂದ್ರೆ ಪ್ರದೀಪ್ ಈಶ್ವರ್ ?!

Leave A Reply

Your email address will not be published.