NEET Scam: ಸೂಕ್ತ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ ರಾಜಸ್ಥಾನ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ !
NEET Scam: ವೈದ್ಯಕೀಯ ಕೋರ್ಸ್‌ನ ಪ್ರವೇಶಕ್ಕೆ ನಡೆದಿದ್ದ, ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ (NTA) ನಡೆಸಿದ್ದ ನೀಟ್ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖೆ ನಡೆಸುವಂತೆ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಒತ್ತಾಯಿಸಿದ್ದಾರೆ.
पहले NEET परीक्षा और अब इसके रिजल्ट को लेकर अभ्यर्थियों ने गड़बड़ी की आशंकाएं जताई हैं। रिजल्ट में कई बच्चों के एक ही सेंटर से पूरे में से पूरे अंक मिलने, आस पास रॉल नंबर वाले अभ्यर्थियों के टॉप करने समेत ऐसे कई पहलू सामने आ रहे हैं जिससे परीक्षा में गड़बड़ी की आशंकाओं को बल…
— Ashok Gehlot (@ashokgehlot51) June 7, 2024
ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET) ಕೆಲವರಿಗೆ ಹೆಚ್ಚು ಅಂಕಗಳು ಬಂದಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ ಎಂದು ಹಲವು ನೀಟ್ ಆಕಾಂಕ್ಷಿಗಳು ಆರೋಪಿಸಿದ್ದಾರೆ. ಈ ಕಾರಣದಿಂದಲೇ ಒಂದೇ ಪರೀಕ್ಷಾ ಕೇಂದ್ರದ 6 ಅಭ್ಯರ್ಥಿಗಳು ಸೇರಿದಂತೆ 67 ಅಭ್ಯರ್ಥಿಗಳು ಪ್ರಥಮ ರ್ಯಾಂಕ್ ಪಡೆಯಲು ಸಾಧ್ಯವಾಗಿದೆ ಎಂದು ಅಶೋಕ್ ಗೆಹ್ಲೋಟ್ ದೂರಿದ್ದಾರೆ.
ಆದರೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು (NTA) ಈ ಕುರಿತ ಯಾವುದೇ ಆರೋಪಗಳನ್ನು ನಿರಾಕರಿಸಿದೆ. ಹೇಳಿಕೆ ನೀಡಿದ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಬದಲಾವಣೆಯಾಗಿರುವುದು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಸಮಯ ನಷ್ಟವಾದವರಿಗೆ ಗ್ರೇಸ್ ಅಂಕ ದೊರೆತಿರುವುದರಿಂದ ಕೆಲವು ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳನ್ನು ಪಡೆದಿದ್ದಾರೆ ಎಂದು ಹೇಳಿದೆ. ಆದರೆ ಒಂದೇ ಕೇಂದ್ರದ ವಿದ್ಯಾರ್ಥಿಗಳಿಗೆ ಹೇಗೆ 6 ಜನರಿಗೆ ಟಾಪರ್ ಸ್ಥಾನ ಸಿಕ್ಕಿದೆ ಎನ್ನುವ ಬಗ್ಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಮೌನವಹಿಸಿದೆ.
‘ವಿದ್ಯಾರ್ಥಿಗಳು ನೀಟ್ ಪರೀಕ್ಷೆಯ ಅಕ್ರಮಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಒಂದೇ ಕೇಂದ್ರದ ಹಲವು ವಿದ್ಯಾರ್ಥಿಗಳು ಪೂರ್ಣ ಅಂಕ ಪಡೆದಿರುವುದು ಮತ್ತು ಪರೀಕ್ಷಾ ಕೇಂದ್ರದಲ್ಲಿ ಹತ್ತಿರ ಕೂಟ ಎಲ್ಲ ವಿದ್ಯಾರ್ಥಿಗಳು ಅಗ್ರಸ್ಥಾನ ಪಡೆದಿರುವುದು ಸೇರಿದಂತೆ ಇಂತಹ ಹಲವು ಅಂಶಗಳನ್ನು ಗಮನಿಸಿದರೆ ಪರೀಕ್ಷೆಯಲ್ಲಿ ಅವ್ಯವಹಾರ ನಡೆದಿರುವ ಶಂಕೆ ಬಲವಾಗಿದೆ. ಇದು ಲಕ್ಷಾಂತರ ಮಕ್ಕಳ ಭವಿಷ್ಯ ಮತ್ತು ವೈದ್ಯಕೀಯ ವೃತ್ತಿಯ ವಿಶ್ವಾಸಾರ್ಹತೆಯ ಪ್ರಶ್ನೆಯಾಗಿದೆ. ಆದ್ದರಿಂದ ಕೇಂದ್ರ ಸರ್ಕಾರ ಮತ್ತು NTA ತಕ್ಷಣ ತನಿಖೆ ನಡೆಸಿ ಅರ್ಹ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಅಶೋಕ್ ಗೆಹ್ಲೋಟ್ ಅವರಿಗೆ ಆಗ್ರಹಿಸಿದ್ದಾರೆ.
ಮಂಗಳೂರು: ಕಾರಿನ ಬಿಡಿಭಾಗಗಳ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ