UP: ಸೋಲಿನ ಹೊಣೆ ಹೊತ್ತು ಯುಪಿ ಬಿಜೆಪಿ ರಾಜ್ಯಾಧ್ಯಕ್ಷ ರಾಜಿನಾಮೆ !!

UP: ಲೋಕಸಭಾ ಚುನಾವಣೆಯಲ್ಲಿ(Lok Sabha Election) ತನ್ನ ಭದ್ರಕೋಟೆಯಲ್ಲಿ ಉತ್ತರ ಪ್ರದೇಶದಲ್ಲಿ(UP) ಬಿಜೆಪಿ ಹೀನಾಯವಾಗಿ ಸೋತಿರುವ ಕಾರಣ ಸೋಲಿನ ಹೊಣೆಯೊತ್ತು ಉತ್ತರ ಪ್ರದೇಶದ ಬಿಜೆಪಿ(BJP) ರಾಜ್ಯಾಧ್ಯಕ್ಷ ರಾಜಿನಾಮೆಗೆ(State President Resigned) ಮುಂದಾಗಿದ್ದಾರೆ.

3ನೇ ಬಾರಿಗೂ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದ್ದ ಬಿಜೆಪಿ 240 ಕ್ಷೇತ್ರಗಳನ್ನು ಮಾತ್ರ ಗೆದ್ದುಕೊಂಡಿದೆ. ಅದರಲ್ಲೂ ಪ್ರಮುಖವಾಗಿ ಉತ್ತರ ಪ್ರದೇಶದಲ್ಲಿನ ಹಿನ್ನಡೆ ಬಿಜೆಪಿಗೆ ಭಾರಿ ಹೊಡೆತ ನೀಡಿದೆ. ಹೀಗಾಗಿ ಸೋಲಿನ ಹೊಣೆ ಹೊತ್ತು ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷ ಭೂಪೇಂದ್ರ ಚೌಧರಿ(Bhoopendra Choudhary) ರಾಜೀನಾಮೆಗೆ ಮುಂದಾಗಿದ್ದಾರೆ.

ಈಗಾಗಲೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(CM Yogi Adithyanath), ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ಅಧ್ಯಕ್ಷ ಭೂಪೇಂದ್ರ ಚೌಧರಿ ಸೇರಿದಂತೆ ಕೆಲ ಪ್ರಮುಖ ನಾಯಕರು ದೆಹಲಿ ತಲುಪಿದ್ದಾರೆ. ಇದೀಗ ಯುಪಿ ಪ್ರಮುಖರ ಜೊತೆ ಬಿಜೆಪಿ ಹೈಕಮಾಂಡ್ ಚರ್ಚೆ ನಡೆಸಲಿದೆ ಎಂದು ತಿಳಿದುಬಂದಿದೆ.

ಯುಪಿಯಲ್ಲಿ ಬಿಜೆಪಿ ಗೆದ್ದ ಸ್ಥಾನವೆಷ್ಟು?
2014ರಲ್ಲಿ ಯಾರೂ ಊಹಿಸದ ರೀತಿಯಲ್ಲಿ 80ರಲ್ಲಿ 71 ಸ್ಥಾನಗಳನ್ನು ಗೆದ್ದು ಬೀಗಿತು. 2019ರಲ್ಲಿ ಅಷ್ಟು ದೊಡ್ಡ ಯಶಸ್ಸು ಸಿಗದಿದ್ದರೂ 62 ಸ್ಥಾನಗಳನ್ನು ಗೆದ್ದಿತ್ತು. ಕಳಕೊಂಡದ್ದು ಕೇವಲ 9 ಸ್ಥಾನಗಳನ್ನಾಗಿದ್ದರಿಂದ ಯಾರೂ ಅಷ್ಟಾಗಿ ತಲೆ ಕೆಡಿಸಿಕೊಂಡಿರಲಿಲ್ಲ. ಆದರೆ ಈ ಬಾರಿ ಮಾತ್ರ 33ಕ್ಕೆ ಇಳಿದಿದೆ. ಇಂಡಿಯಾ ಒಕ್ಕೂಟ ದೊಡ್ಡ ಮಟ್ಟದಲ್ಲಿ ಖೆಡ್ಡಾ ತೋಡಿದೆ.

Leave A Reply

Your email address will not be published.