7th Pay Commission: ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ! ಸರ್ಕಾರಿ ನೌಕರರ ಬೇಡಿಕೆಗೆ ಅಸ್ತು ಎಂದ ಸಿಎಂ, ಡಿಸಿಎಂ!

7th Pay Commission: ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿಯನ್ನು ಸರ್ಕಾರ ಯಾವಾಗ ಜಾರಿಗೊಳಿಸಲಾಗುತ್ತದೆ ಎಂದು ರಾಜ್ಯದ ಸರ್ಕಾರಿ ನೌಕರರು ಕಾದು ಕುಳಿತಿದ್ದು, ಇದೀಗ ನೌಕರರಿಗೆ ಸಿಹಿ ಸುದ್ದಿ ಒಂದನ್ನು ನೀಡಲಾಗಿದೆ.

ಹೌದು, ಲೋಕಸಭೆ ಚುನಾವಣೆ 2024ರ ಫಲಿತಾಂಶ ಘೋಷಣೆಯಾಗಿದ್ದು, ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡ ಹಿನ್ನಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಲೋಕಸಭೆ ಚುನಾವಣೆ ನೀತಿ ಸಂಹಿತೆಯನ್ನು ಗುರುವಾರ ವಾಪಸ್ ಪಡೆದಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್. ಷಡಾಕ್ಷರಿ ಮತ್ತು ರಾಜ್ಯ ಸಂಘದ ಪದಾಧಿಕಾರಿಗಳು ದಿನಾಂಕ 3/6/2024ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಭೇಟಿ ಮಾಡಿದ್ದು, 7ನೇ ವೇತನ ಆಯೋಗದ (7th Pay Commission) ವರದಿ ಅನುಷ್ಠಾನಗೊಳಿಸುವಂತೆ ಮನವಿ ಮಾಡಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಯನ್ನು ಆಲಿಸಿದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ನೀತಿ ಸಂಹಿತೆ ಮುಕ್ತಾಯವಾದ ನಂತರ 7ನೇ ವೇತನ ಆಯೋಗದ ಶಿಫಾರಸುಗಳನ್ನು ಅನುಷ್ಠಾನಗೊಳಿಸುವ ಭರವಸೆಯನ್ನು ನಿಯೋಗಕ್ಕೆ ನೀಡಿದ್ದಾರೆ.

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ನೀತಿ ಸಂಹಿತೆ ವಾಪಸ್ ಪಡೆಯಲಾಗಿದೆ. ಆದರೆ ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ಘೋಷಣೆಯಾಗಿತ್ತು. ಗುರುವಾರ ಈ ಚುನಾವಣೆಗೆ 11 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. ಅಭ್ಯರ್ಥಿಗಳು ಅವಿರೋಧ ಆಯ್ಕೆಯಾದ ಕಾರಣ ಜೂನ್ 13ರಂದು ನಡೆಯಬೇಕಿದ್ದ ಚುನಾವಣೆ ನಡೆಯುವುದಿಲ್ಲ. ಆದರೆ ಜೂನ್‌ 16ರ ತನಕ ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಆ ಬಳಿಕ ಸರ್ಕಾರ 7ನೇ ವೇತನ ಆಯೋಗದ ವರದಿ ಜಾರಿ ಕುರಿತು ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ. ಒಟ್ಟಿನಲ್ಲಿ ಶೀಘ್ರದಲ್ಲಿ 7ನೇ ವೇತನ ಆಯೋಗದ ಶಿಫಾರಸು ಅನುಷ್ಠಾನಗೊಳ್ಳಲಿದೆ.

Leave A Reply

Your email address will not be published.