Lakshmi Hebbalkar: ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಕ್ಷ್ಮೀ ಹೆಬ್ಬಾಳ್ಕರ್ ಬಳಿ ಕ್ಷಮೆ ಕೇಳಿದ ವಿಡಿಯೋ ವೈರಲ್! ಅಷ್ಟಕ್ಕೂ ನಡೆದಿದ್ದೇನು!?
Lakshmi Hebbalkar: ಲೋಕಸಭಾ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಸಮಾರಂಭ ಒಂದರಲ್ಲಿ ಏಕಾಏಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಲ್ಲಿ ಕ್ಷಮೆ ಕೇಳಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಹೌದು, ಇಂದು ಸಿಎಂ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಭೇಟಿ ವೇಳೆ ಲಕ್ಷ್ಮಿ ಹೆಬ್ಬಾಳ್ಕರ್ ರನ್ನು ನೋಡುತ್ತಿದ್ದ ಹಾಗೆಯೇ ಸಾರಿ ಅಮ್ಮ ಎಂದು ಸಿದ್ದರಾಮಯ್ಯ ಹೇಳಿದರು. ಸಿಎಂ ಸಾರಿ ಎಂದಿದ್ದಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೈಮುಗಿದರು.
Koppala: ನರೇಗಾ ಕೆಲಸಕ್ಕೆ ಬಂದವಳನ್ನು ಆವರಿಸಿಕೊಂಡ ದೆವ್ವ ವಿಮಲ್, ಗುಟ್ಕಾ ಕೇಳಿತು !!
ಮುಖ್ಯವಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಬೆಳಗಾವಿ ಕಾಂಗ್ರೆಸ್ ನಾಯಕರು ಬಂದಿದ್ದರು. ಈ ತಂಡದಲ್ಲಿ ಸಚಿವ ಸತೀಶ್ ಜಾರಕಿಹೊಳಿ, ಅವರ ಪುತ್ರಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಇದ್ದರು. ಜೊತೆಗೆ ಲಕ್ಷ್ಮಿ ಹೆಬ್ಬಾಳ್ಕರ್ ಕೂಡಾ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಆಗಮಿಸ್ತಿದ್ದಂತೆ ಏನು ಬೆಳಗಾವಿಯವರೆಲ್ಲಾ ಇದ್ದೀರಾ ಎಂದರು. ಇದೇ ಸಂದರ್ಭದಲ್ಲಿ ಈಗಾಗಲೇ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಸ್ಪರ್ಧಿಸಿದ್ದರು. ಆದರೆ ಪುತ್ರನ ಸೋಲಿನ ಹಿನ್ನೆಲೆಯಲ್ಲಿ ಬೇಸರದಲ್ಲಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳಿದರು. ಸಿಎಂ ಸಾರಿ ಎಂದಿದ್ದಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ಕೈಮುಗಿದರು.
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಗೆಲುವಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಸಾಕಷ್ಟು ಪ್ರಯತ್ನ ನಡೆಸಿದ್ದರೂ ಕೂಡ ಪ್ರಯತ್ನ ಕ್ಕೆ ಫಲ ಸಿಗಲಿಲ್ಲ. ಹಾಗಾಗಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಭಾರೀ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ಒಟ್ಟಿನಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಸೋಲಿನ ವಿಚಾರವಾಗಿ ಆಂತರಿಕವಾಗಿ ಸಾಕಷ್ಟು ಚರ್ಚೆಗಳು ನಡೆಯುತ್ತಿದೆ. ಬೆಳಗಾವಿಯಲ್ಲಿ ಕಾಂಗ್ರೆಸ್ ಐದು ವಿಧಾನಸಭೆ ಕ್ಷೇತ್ರಗಳನ್ನು ಹೊಂದಿದೆ. ಆದರೂ ಸ್ಥಳೀಯ ರಾಜಕಾರಣ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಸೋಲಿಗೆ ಪ್ರಮುಖ ಕಾರಣವಾಗಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಈ ಎಲ್ಲಾ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಲಕ್ಷ್ಮೀ ಹೆಬ್ಬಾಳ್ಕರ್ ಬಳಿ ಕ್ಷಮೆ ಕೇಳಿರುವುದು ಚರ್ಚೆಗೆ ಕಾರಣ ಆಗಿದೆ.
Kootickal Jayachandran: ದೃಶ್ಯಂ ಸಿನಿಮಾ ನಟನಿಂದ 4 ವರ್ಷದ ಮಗುವಿನ ಮೇಲೆ ಲೈಂಗಿಕ ಕಿರುಕುಳ ಆರೋಪ