Gruhalakshmi scheme: ಮನೆ ಯಜಮಾನಿಯರಿಗೆ ಇಲ್ಲಿದೆ ಗುಡ್ ನ್ಯೂಸ್! ಈ ದಿನ ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ!
Gruhalakshmi scheme: ಈಗಾಗಲೇ ಕಾಂಗ್ರೆಸ್ ಸರ್ಕಾರದ ಐದು ಭರವಸೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ರೂ.ಹಣ ಜಮಾ ಮಾಡಲಾಗುತ್ತಿದೆ. ಸದ್ಯ ಮಹಿಳೆಯರಿಗೆ 2,000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಅಡಿಯಲ್ಲಿ 10ನೇ ಕಂತಿನ ಹಣ ಮನೆಯ ಯಜಮಾನಿಯರ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ.
Teachers Recruitment : ಅತಿಥಿ ಶಿಕ್ಷಕರು-ಅತಿಥಿ ಉಪನ್ಯಾಸಕರ ನೇಮಕ; ಈಗಲೇ ಅರ್ಜಿ ಸಲ್ಲಿಸಿ, ವೇತನ ವಿವರ ಇಲ್ಲಿದೆ
ಇದೀಗ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ (Gruhalakshmi scheme 11th Installment) ಹಣಕ್ಕಾಗಿ ಬಹಳಷ್ಟು ಜನರು ಕಾಯುತ್ತಿದ್ದಾರೆ. ಅಂತಹವರಿಗೆ ಇಲ್ಲಿದೆ ಶುಭ ಸುದ್ದಿ. ಮುಖ್ಯವಾಗಿ ಗೃಹಲಕ್ಷ್ಮೀ ಯೋಜನೆಯ 11 ನೇ ಕಂತಿನ 2,000 ರೂ. ಹಣ ಮುಂದಿನ ಎರಡು ಮೂರು ದಿನಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.
ಸದ್ಯ ತುಮಕೂರು, ಚಾಮರಾಜನಗರ, ಉಡುಪಿ ಹಾಗೂ ಚಿಕ್ಕಮಗಳೂರು, ಬೆಂಗಳೂರು ಗ್ರಾಮಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಹಾಸನ ಮತ್ತು ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಚಾಮರಾಜನಗರ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಮೊದಲು ಗೃಹಲಕ್ಷ್ಮಿ ಯೋಜನೆಯ 11 ನೇ ಕಂತಿನ ಹಣವು ಬಿಡುಗಡೆಯಾಗಲಿದೆ ಎಂಬ ಮಾಹಿತಿ ಇದೆ.
ಈಗಾಗಲೇ ರಾಜ್ಯ ಸರ್ಕಾರವು ಅರ್ಹಫಲಾನುಭವಿಗಳ ಖಾತೆಗಳಿಗೆ ನೇರವಾಗಿ 10 ಕಂತುಗಳ ಹಣವನ್ನು ಯಶಸ್ವಿಯಾಗಿ ವರ್ಗಾಯಿಸಿದ್ದರೂ, KYC ಅಪ್ಲೇಟ್ ಆಗದ ಹಾಗೂ ದಾಖಲಾತಿ ಸಮಸ್ಯೆಯಿಂದ ಕೆಲವರಿಗೆ
ಇನ್ನೂ ಹಣ ಪಾವತಿ ಆಗಿಲ್ಲ. ಯಾರಿಗೆ ಇದುವರೆಗೂ ಗೃಹಲಕ್ಷ್ಮೀ ಯೋಜನೆಯ ಹಿಂದಿನ 10ನೇ ಕಂತಿನ ಹಣ ಬಂದಿರುವುದಿಲ್ಲ ಅಂತವರು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದೆಯಾ ಎಂಬುದನ್ನು ಚಕ್ ಮಾಡಿಕೊಳ್ಳಿ. ಹಾಗೂ KYC ಅಪ್ಡೇಟ್ ತಪ್ಪದೇ ಮಾಡಿಸಿಕೊಳ್ಳುವುದು ಕಡ್ಡಾಯ.
Mangaluru Fire Accident: ತರಕಾರಿ ಮಾರುಕಟ್ಟೆಯೊಂದರಲ್ಲಿ ಬೆಂಕಿ ಅನಾಹುತ ; ಆರು ಅಂಗಡಿ ಸುಟ್ಟುಕರಕಲು