Solar scheme: ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ: ಪರ್ಯಾಯ ವಿದ್ಯುತ್ ಬಳಕೆಗೆ ಕೇಂದ್ರದಿಂದ ಹೊಸ ಯೋಜನೆ!
Solar Scheme: ಸೋಲಾರ್ ಫಲಕಕ್ಕೆ ಮನೆಗಳ ಛಾವಣಿ ಜಾಗ ಬಳಸುವ ಕಾರಣ ಹೆಚ್ಚುವರಿ ಜಾಗದ ಅವಶ್ಯಕತೆಯಿಲ್ಲ, ಅಲ್ಲದೆ ನಿರ್ವಹಣೆ ವೆಚ್ಚ ತೀರಾ ಕಡಿಮೆ. ಅದಲ್ಲದೆ ಉಚಿತವಾಗಿ ವಿದ್ಯುತ್ ಲಭಿಸುತ್ತದೆ. ಸದ್ಯ ಮನೆಗಳ ಛಾವಣಿ ಮೇಲೆ ಸೌರ ಫಲಕ ಅಳವಡಿಸಿಕೊಳ್ಳಲು ಕೇಂದ್ರ ಸರ್ಕಾರದ ‘ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ’ಯಡಿ ಈಗಾಗಲೇ 10,000 ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ.
Modi Salary: 3ನೇ ಬಾರಿ ಪ್ರಧಾನಿಯಾದ ಮೋದಿಯ ತಿಂಗಳ ಸಂಬಳ ಎಷ್ಟು?!
ಇಂಧನ ಸಚಿವಾಲಯದ ಜಂಟಿ ಕಾರ್ಯದರ್ಶಿ ದಿನೇಶ್ ದಯಾನಂದ ಜಗದಾಳೆ ಅವರು, ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆಯೊಂದಿಗೆ (Solar Scheme) ಸೌರಶಕ್ತಿಯನ್ನು ಜನಪ್ರಿಯಗೊಳಿಸುತ್ತಿದೆ. ಈ ವರ್ಷದ ಫೆಬ್ರವರಿಯಲ್ಲಿ ಪ್ರಾರಂಭವಾದ ಯೋಜನೆಗೆ ಕರ್ನಾಟಕದಿಂದ 10,000 ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಇಂಧನ ಇಲಾಖೆಯ ಅಂಕಿಅಂಶಗಳ ಪ್ರಕಾರ, ರಾಜ್ಯದಲ್ಲಿ ವಿವಿಧ ಯೋಜನೆಗಳ ಅಡಿಯಲ್ಲಿ 22,000 ಸೌರ ಫಲಕಗಳನ್ನು ಸ್ಥಾಪಿಸಲಾಗಿದೆ, ಇದರಿಂದ ಸುಮಾರು 570 MW ವಿದ್ಯುತ್ ಉತ್ಪಾದಿಸಲಾಗುತ್ತಿದೆ. ರಾಜ್ಯದಲ್ಲಿ ಅಳವಡಿಸಲಾಗಿರುವ 22,000 ಪ್ಯಾನಲ್‌ಗಳಲ್ಲಿ 9,377 ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಮಿತಿಯಲ್ಲಿದ್ದು, 301.7 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುತ್ತಿದೆ ಎಂದು ತಿಳಿಸಿದ್ದಾರೆ.
ಇನ್ನು ಕೇಂದ್ರ ಸರ್ಕಾರವು 2025-26 ರವರೆಗೆ ರೂ 750 ಶತಕೋಟಿ ವೆಚ್ಚದಲ್ಲಿ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯು 10 ಮಿಲಿಯನ್ ಭಾರತೀಯ ಕುಟುಂಬಗಳಿಗೆ ತಿಂಗಳಿಗೆ 300 ಯುನಿಟ್‌ಗಳವರೆಗೆ ಉಚಿತ ವಿದ್ಯುತ್ ಅನ್ನು ಒದಗಿಸುವ ಗುರಿಯನ್ನು ಹೊಂದಿದೆ. ಇಲ್ಲಿಯವರೆಗೆ, ದೇಶಾದ್ಯಂತ 10 ಮಿಲಿಯನ್ ಜನರು ಈ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ, ಅದರಲ್ಲಿ 10,000 ಮಂದಿ ಕರ್ನಾಟಕದವರಾಗಿದ್ದಾರೆಂದು ಮಾಹಿತಿ ನೀಡಿದರು.
ಇನ್ನು ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರ ಪ್ರಕಾರ, ಈ ಯೋಜನೆಯನ್ನು ಕಾರ್ಯಗತಗೊಳಿಸಲು, 229 ಖಾಸಗಿ ಮಾರಾಟಗಾರರನ್ನು ನೋಂದಾಯಿಸಲಾಗಿದೆ. ಸರ್ಕಾರ ಯೋಜನೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದ್ದು, ಎಲ್ಲಾ ಮನೆಗಳಲ್ಲಿ ಸೌರಶಕ್ತಿಯ ಬಳಕೆ, ಆ ಮೂಲಕ ಸಾಂಪ್ರದಾಯಿಕ ಇಂಧನ ಮೂಲಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಗುರಿ ಹೊಂದಲಾಗಿದೆ ಎಂದರು.
ಗೌರವ್ ಗುಪ್ತಾ ಅವರು, ಪ್ರಧಾನ ಮಂತ್ರಿ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ ಅಡಿಯಲ್ಲಿ ಮನೆ ಛಾವಣಿ ಮೇಲೆ ಒಂದು ಕಿಲೋ ವಾಟ್ ಸಾಮರ್ಥ್ಯದ ವ್ಯವಸ್ಥೆಗೆ 30 ಸಾವಿರ ರೂ., ಎರಡು ಕಿ. ವಾ.ಗೆ 60 ಸಾವಿರ ರೂ. ಸಬ್ಸಿಡಿ ನಿಗದಿಪಡಿಸಲಾಗಿದೆ. ಮೂರು ಕಿ.ವಾ. ಮೇಲ್ಪಟ್ಟ ವ್ಯವಸ್ಥೆಗೆ ಗರಿಷ್ಠ 78 ಸಾವಿರ ರೂ. ಸಬ್ಸಿಡಿ ಮಿತಿಯಿದೆ. ಸೂರಿನ ಮೇಲೆ ಸೌರ ವ್ಯವಸ್ಥೆಯನ್ನು ಗ್ರಿಡ್ ಜತೆಗೆ ಸಂಪರ್ಕಿಸುವುದರಿಂದ 25 ವರ್ಷಗಳ ಕಾಲ ವಿದ್ಯುತ್ ಬಿಲ್ ಪಾವತಿಸಬೇಕಿಲ್ಲ ಎಂದಿದ್ದಾರೆ.
ಮೇಲ್ಛಾವಣಿಗೆ ಸೌಲ ಫಲಕಗಳನ್ನು ಅಳವಡಿಸಲು ಇಚ್ಛಿಸುವವರು ತಮ್ಮ ಪ್ರಾದೇಶಿಕ ವಿದ್ಯುತ್ ವಿತರಣ ಕಂಪನಿಗಳು (ಡಿಸ್ಕಾಂ) ಅಥವಾ ವಿದ್ಯುತ್ ಕಚೇರಿಗಳನ್ನು ಸಂಪರ್ಕಿಸುವ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗಾಗಿ, ಸಂಬಂಧಪಟ್ಟ ಡಿಸ್ಕಾಂಗಳನ್ನು ಸಂಪರ್ಕಿಸಿ.
8th Pay Commission: 8ನೇ ವೇತನ ಆಯೋಗಕ್ಕೆ ಸಿದ್ಧತೆ, ಸರಕಾರಿ ನೌಕರರ ವೇತನ ಎಷ್ಟು ಹೆಚ್ಚಳ?