Bengaluru Police Commissioner B.Dayananda: ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ್ ದರ್ಶನ್ ಅರೆಸ್ಟ್ ಬಗ್ಗೆ ಹೇಳಿದ್ದೇನು?

Bengaluru Police Commissioner B.Dayananda: ಕೊಲೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನಕ್ಕೆ ಕುರಿತಂತೆ ಇದೀಗ ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ಅವರು ಪತ್ರಿಕಾಗೋಷ್ಠಿ ನಡೆಸಿದ್ದು, ಈ ಕುರಿತು ಮಾಹಿತಿ ನೀಡಿದ್ದಾರೆ.
Darshan-Pavithra Gowda: ದರ್ಶನ್ ಗೆಳತಿ ಪವಿತ್ರಾ ಗೌಡ ಪೊಲೀಸ್ ವಶಕ್ಕೆ
ಕನ್ನಡ ಚಿತ್ರರಂಗದ ನಟರೊಬ್ಬರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣ ತನಿಖೆ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ. ತನಿಖೆಯ ಪ್ರಕ್ರಿಯೆಗಳು ನಡೆಯುತ್ತಿರುವ ಕಾರಣ ಹೆಚ್ಚಿನ ಮಾಹಿತಿ ಕೊಡಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಹೆಚ್ಚಿನ ವಿವರ ಹಾಗೂ ಪೂರಕ ಮಾಹಿತಿಗಳನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.