Government Employee: ಹಳೆಯ ಪಿಂಚಣಿ ಯೋಜನೆ ಮರು ಜಾರಿ: ಬದಲಾವಣೆಗೆ ಒಮ್ಮೆ ಮಾತ್ರ ಅವಕಾಶ, ಕೂಡಲೇ ಈ ರೀತಿ ಅರ್ಜಿ ಸಲ್ಲಿಸಿ!

Government Employee: ಕರ್ನಾಟಕ ಸರ್ಕಾರ ಸರ್ಕಾರಿ ನೌಕರರನ್ನು ಸರ್ಕಾರದ ಆದೇಶ ಅನ್ವಯ ದಿನಾಂಕ 01/04/2006ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು (Government Employee) ಹಳೆಯ ಡಿಫೈನ್ಡ್‌ ಪಿಂಚಣಿ ಯೋಜನೆಗೆ ಒಳಪಡಿಸಲಾಗುತ್ತದೆ. ಹೌದು, ಸರ್ಕಾರಿ ನೌಕರರ ಬೇಡಿಕೆಯಂತೆ ಹೊಸ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ (OPS) ಮರು ಜಾರಿ ಸಂಬಂಧ ಈಗಾಗಲೇ ಆದೇಶ ಹೊರಡಿಸಿದೆ.

ಕೂದಲಿನ ಯಾವುದೇ ಸಮಸ್ಯೆಗೆ ಇದೊಂದೇ ರಾಮಬಾಣ!ದಾಸವಾಳದ ಹೂವಿನ ಪುಡಿಯನ್ನು ಹೀಗೊಮ್ಮೆ ಬಳಸಿ ನೋಡಿ!

ಸದ್ಯ ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆಯಿಂದ ಹಳೆಯ ಪಿಂಚಣಿ ಯೋಜನೆಗೆ ವಾಪಸ್ ಆಗಲು ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸಲು ದಿನಾಂಕ 30/06/2024 ಕೊನೆಯ ದಿನವಾಗಿದೆ. ಆದರೆ ಎನ್‌ಪಿಎಸ್‌ನಿಂದ ಒಪಿಎಸ್‌ಗೆ ಮರಳುವ ಇಚ್ಛಿಸುವ ನೌಕರರಿಗೆ ಷರತ್ತುಗಳನ್ನು ಹಾಕಲಾಗಿದೆ.

ಷರತ್ತುಗಳ ಪ್ರಕಾರ, ದಿನಾಂಕ 01/04/2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ನೌಕರರು ಹಿಂದಿನ ಡಿಫೆನ್ಡ್‌ ಪಿಂಚಣಿ ಯೋಜನೆಗೆ ಒಳಪಡಲು ಅರ್ಹರು. ಆದರೆ ನೌಕರರು ಮರಳಲು ಇಚ್ಚಿಸಿದಲ್ಲಿ ತಮ್ಮ ಅಭಿಮತವನ್ನು ನಿಗದಿತ ನಮೂನೆಯಲ್ಲಿ ದಿನಾಂಕ 30/06/2024ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ ನೇರವಾಗಿ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸದಿದ್ದಲ್ಲಿ ಹೊಸ ಪಿಂಚಣಿ ಯೋಜನೆಯಲ್ಲಿಯೇ ಮುಂದುವರೆಯಲಿದ್ದಾರೆ. ಸರ್ಕಾರಿ ನೌಕರರು ಈ ಆಯ್ಕೆಯನ್ನು ಒಂದು ಬಾರಿಗೆ ಮಾತ್ರ ಚಲಾಯಿಸಲು ಅವಕಾಶವಿರುತ್ತದೆ. ಒಂದು ಬಾರಿ ಮಾಡಿಕೊಂಡ ಆಯ್ಕೆಯನ್ನು ಬದಲಾಯಿಸಲು ಅವಕಾಶವಿಲ್ಲ ಎಂದು ಈಗಾಗಲೇ ಸರ್ಕಾರ ಸ್ಪಷ್ಟಪಡಿಸಿದೆ.

Indian Government: ಖಾತೆ ಹಂಚಿಕೆ ಆಗುತ್ತಿದ್ದಂತೆ ಮೋದಿ ಸರ್ಕಾರದಿಂದ ಮಹತ್ವದ ನಿರ್ಧಾರ – ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಮನೆಗಳ ನಿರ್ಮಾಣ !!

Leave A Reply

Your email address will not be published.