Small – Very Small Farmers: ರಾಜ್ಯ ಸರ್ಕಾರದಿಂದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ 3000 ರೂ; ಸಚಿವ ಕೃಷ್ಣ ಬೈರೇಗೌಡ!

Small – Very Small Farmers: ಸಂಕಷ್ಟಕ್ಕೆ ಸಿಲುಕಿರುವ ಸಣ್ಣ, ಅತಿ ಸಣ್ಣ ರೈತರಿಗೆ ಜೀವನೋಪಾಯಕ್ಕೆ ನಷ್ಟ ಪರಿಹಾರ ನೀಡಲಾಗುತ್ತಿದ್ದು, ರೈತರ ಪಟ್ಟಿ ಸಿದ್ಧಪಡಿಸಲಾಗುತ್ತಿದೆ. ಹಾಗೆಯೇ ಮಳೆಯಾಶ್ರಿತ ಹಾಗೂ ನಾಲೆಗಳ ಕೊನೆಯ ಭಾಗದಲ್ಲಿರುವ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡಲಾಗುವುದು ಎಂದು ರಾಜ್ಯ ಸರ್ಕಾರ ನಿರ್ಧರಿಸಿದೆ. ಹೌದು, ಸಣ್ಣ ಹಾಗೂ ಅತಿ ಸಣ್ಣ ರೈತರ (Small- very Small farmers) ಕುಟುಂಬಗಳ ಜೀವನೋಪಾಯಕ್ಕಾಗಿ ಸೂಕ್ತ ಪರಿಹಾರ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

ಪ್ರಸ್ತುತ ರಾಜ್ಯದಲ್ಲಿ 17.09 ಲಕ್ಷ ಸಣ್ಣ ಹಾಗೂ ಅತಿ ಸಣ್ಣ ರೈತ ಕುಟುಂಬಗಳಿಗೆ ಜೀವನೋಪಾಯಕ್ಕೆ ನಷ್ಟ ಪರಿಹಾರವಾಗಿ ತಲಾ 2800 ರೂ.ನಿಂದ 3000 ರೂ. ನೀಡಲು ರಾಜ್ಯ ಸರಕಾರ ತೀರ್ಮಾನಿಸಿದ್ದು, ಜೊತೆಗೆ ಮಳೆಯಾಶ್ರಿತ ಹಾಗೂ ನಾಲೆಗಳ ಕೊನೆಯ ಭಾಗದಲ್ಲಿರುವ ರೈತರಿಗೂ ಬೆಳೆ ನಷ್ಟ ಪರಿಹಾರ ನೀಡಲು ಮುಂದಾಗಿದೆ.

Free Bus Travel: ಶಕ್ತಿ ಯೋಜನೆ ಇನ್ನಿಲ್ಲ! ಸಾರಿಗೆ ಸಚಿವರಿಂದ ಸ್ಪಷ್ಟನೆ!

ಈ ಬಗ್ಗೆ ಮಾಹಿತಿ ನೀಡಿದ ಸಚಿವ ಕೃಷ್ಣ ಬೈರೇಗೌಡ, ”ಬರದ ಹಿನ್ನೆಲೆಯಲ್ಲಿಸಂಕಷ್ಟಕ್ಕೆ ಸಿಲುಕಿರುವ ಸಣ್ಣ, ಅತಿ ಸಣ್ಣ ರೈತರಿಗೆ ಜೀವನೋಪಾಯಕ್ಕೆ ನಷ್ಟ ಪರಿಹಾರ ನೀಡಲಾಗುತ್ತಿದ್ದು, ರೈತರ ಪಟ್ಟಿ ಸಿದ್ಧಪಡಿಸಲಾಗುತ್ತಿದೆ. ಹಾಗೆಯೇ ಮಳೆಯಾಶ್ರಿತ ಹಾಗೂ ನಾಲೆಗಳ ಕೊನೆಯ ಭಾಗದಲ್ಲಿರುವ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡಲಾಗುವುದು. ಇದರಿಂದ 7 ಲಕ್ಷ ರೈತರಿಗೆ ಪ್ರಯೋಜನವಾಗಲಿದೆ. ಜಿಲ್ಲಾಧಿಕಾರಿಗಳ ವರದಿ ಆಧರಿಸಿ ಪರಿಹಾರ ವಿತರಿಸಲಾಗುವುದು,” ಎಂದು ತಿಳಿಸಿದ್ದಾರೆ.

”ಕೇಂದ್ರ ಸರಕಾರದಿಂದ ಎನ್‌ಡಿಆರ್‌ಎಫ್‌ ಪರಿಹಾರವಾಗಿ 3,454 ಕೋಟಿ ರೂ. ರಾಜ್ಯಕ್ಕೆ ಬಂದಿತ್ತು. ಅದರಂತೆ 27.50 ಲಕ್ಷ ರೈತರಿಗೆ 2,451 ಕೋಟಿ ರೂ. ಪರಿಹಾರವನ್ನು ಮೇ ತಿಂಗಳ ಮೊದಲ ವಾರದಲ್ಲೇ ವಿತರಿಸಲಾಗಿದೆ. ಎನ್‌ಡಿಆರ್‌ಎಫ್‌ನ ಉಳಿದ ಹಣ ಮತ್ತು ರಾಜ್ಯ ಸರಕಾರದಿಂದ 272 ಕೋಟಿ ರೂ. ಸೇರಿಸಿ ಸಣ್ಣ, ಅತಿ ಸಣ್ಣ ರೈತರಿಗೆ ಜೀವನೋಪಾಯಕ್ಕೆ ನಷ್ಟ ಪರಿಹಾರ ನೀಡಲು ಉದ್ದೇಶಿಸಲಾಗಿದೆ. ಮುಖ್ಯವಾಗಿ ವಾರದೊಳಗೆ ಪರಿಹಾರ ಪಾವತಿಸಲು ಅಧಿಕಾರಿಗಳು ಎಲ್ಲಸಿದ್ಧತೆ ಮಾಡಿಕೊಂಡಿದ್ದಾರೆ.” ಎಂದು ಸ್ಪಷ್ಟನೆ ನೀಡಿದ್ದಾರೆ.

ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್‌ ದಾಖಲಿಸಲು ಮುಂದಾದ ನಟಿ ಸಪ್ತಮಿ ಗೌಡ

 

1 Comment
Leave A Reply

Your email address will not be published.