Home News HSRP ನಂಬರ್ ಪ್ಲೇಟ್ ಅಳವಡಿಕೆಯ ಗಡುವು ಮತ್ತೆ ವಿಸ್ತರಣೆ, ಹೊಸ ಆದೇಶ !

HSRP ನಂಬರ್ ಪ್ಲೇಟ್ ಅಳವಡಿಕೆಯ ಗಡುವು ಮತ್ತೆ ವಿಸ್ತರಣೆ, ಹೊಸ ಆದೇಶ !

HSRP Number Plate

Hindu neighbor gifts plot of land

Hindu neighbour gifts land to Muslim journalist

HSRP: ವಾಹನ ಸವಾರರಿಗೆ ಇದೀಗ ಬಿಗ್ ರಿಲೀಫ್ ಲಭ್ಯವಾಗಿದೆ. ಇಂದು ಹೈಕೋರ್ಟ್ ಸೆಪ್ಟೆಂಬರ್ ವರೆಗೆ ಹೆಚ್ ಎಸ್ ಆರ್ ಪಿ (HSRP Number Plate) ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಿಸೋದಕ್ಕೆ ಅನುಮತಿ ನೀಡಿದೆ. ಹೀಗಾಗಿ ವಾಹನ ಸವಾರರಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದಕ್ಕೆ ಸೆಪ್ಟೆಂಬರ್ ವರೆಗೆ ಗಡುವು ವಿಸ್ತರಣೆಯಾದಂತೆ ಆಗಿದೆ.(Hsrp number plate deadline extended)

Actor Darshan Case: ಕೊಲೆ ಪ್ರಕರಣದ ಆರೋಪದ ನಂತರ ಇದೀಗ ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ

ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಯ ಗಡುವು ವಿಸ್ತರಿಸುವ ಸಂಬಂಧ ಇಂದು ಬಿಎನ್ ಡಿ ಎನರ್ಜಿ ಲಿಮಿಟೆಡ್ ಮತ್ತಿತರರು ಹೈಕೋರ್ಟ್ ಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಣೆ ಕೋರಿ ಅರ್ಜಿಯನ್ನು ಸಲ್ಲಿಸಿದ್ದರು. ಆ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ ಅರವಿಂದ ಅವರನ್ನೊಳಗೊಂಡಂತ ನ್ಯಾಯಪೀಠವು ಇದೀಗ ಆದೇಶ ನೀಡಿದೆ.

ಇಂದು ಅರ್ಜಿಯ ವಿಚಾರಣೆಯ ಬಳಿಕ ಹೈಕೋರ್ಟ್ ನ ನ್ಯಾಯಪೀಠವು, ಇಲ್ಲಿಯತನಕ ಎಚ್‌ಎಸ್‌ಆರ್‌ಪಿ ಅಳವಡಿಸದಿರುವುದಕ್ಕೆ ಅರ್ಜಿದಾರರ ವಿರುದ್ಧ ಯಾವುದೇ ದುರುದ್ದೇಶಿತ ಕ್ರಮಕೈಗೊಳ್ಳಬಾರದು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಮೇ 21ರ ತನಕ ಎಚ್ಎಸ್ಆರ್ಪಿ ನಂಬರ್ ಪೇಟೆ ಅಳವಡಿಕೆಗೆ ಗಡುವು ನೀಡಲಾಗಿತ್ತು. ಈಗ ರಾಜ್ಯ ಸರ್ಕಾರವು ಆಗಸ್ಟ್-ಸೆಪ್ಟೆಂಬರ್‌ವರೆಗೆ ಎಚ್‌ಎಸ್‌ಆರ್‌ಪಿ ಅಳವಡಿಕೆ ಗಡುವು ವಿಸ್ತರಿಸಲಾಗುವುದು ಎಂದು ತಿಳಿಸಿದೆ. ಹೀಗಾಗಿ, ಮೇ 21ರ ಆದೇಶದಲ್ಲಿ ಮಾರ್ಪಾಡು ಮಾಡಿ ಹೊಸ ಆದೇಶ ಹೊರಡಿಸಿದೆ. ಈ ಮೂಲಕ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಯ ಗಡುವು ವಿಸ್ತರಣೆಗೊಂಡಿದೆ.

ಗಡುವು ವಿಸ್ತರಿಸಿ ಆ ಸಂಬಂಧದ ಅಧಿಸೂಚನೆಯನ್ನು ಪೀಠದ ಮುಂದೆ ಇಡಲು ಸರ್ಕಾರಕ್ಕೆ ಅನುಮತಿಸಬಹುದು. ಆದರೆ, ಅರ್ಜಿದಾರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಕೋರಿದರು. ಇದಕ್ಕೆ ಸಮ್ಮತಿಸಿದ ಪೀಠವು ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ವಿಧಿಸಿದ್ದ ಗಡುವು ವಿಸ್ತರಿಸಲು ಅನುಮತಿಸಿ, ವಿಚಾರಣೆಯನ್ನು ಜುಲೈ 4ಕ್ಕೆ ಮುಂದೂಡಿತು. ಹೀಗಾಗಿ ರಾಜ್ಯದಲ್ಲಿ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನಿಗದಿ ಮಾಡಲಾಗಿದ್ದಂತ ಗಡುವು ಸೆಪ್ಟೆಂಬ‌ರ್ ವರೆಗೂ ವಿಸ್ತರಣೆಯಾದಂತೆ ಆಗಿದೆ. ವಾಹನ ಸವಾರರು ಖುಷಿಯಾಗಿದ್ದಾರೆ ಮತ್ತಷ್ಟು ಸಮಯಾವಕಾಶ ಅವರಿಗೆ ಲಭ್ಯವಾಗಿದೆ.

Kuwait Fire: ಕುವೈತ್‌ನ ಕಟ್ಟಡವೊಂದರಲ್ಲಿ ಭಾರೀ ಬೆಂಕಿ ಅವಘಡ; 50 ಜನ ಸಾವು; ಭಯಾನಕ ವೀಡಿಯೊ ವೈರಲ್‌