BS Yediyurappa: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ವಾರಂಟ್; ಬಂಧನ ಸಾಧ್ಯತೆ
BS Yediyurappa: ಫೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಂಧನ ಭೀತಿ ಎದುರಾಗಿದ್ದು, ಬೆಂಗಳೂರಿನ 1 ನೇ ತ್ವರಿತಗತಿ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ ಆದೇಶ ನೀಡಿದೆ.
ಬಿಎಸ್ ಯಡಿಯೂರಪ್ಪ ಅವರು ವಿಚಾರಣೆಗೆ ಹಾಜರಾಗದ ಕಾರಣ ವಾರಂಟ್ ಹೊರಡಿಸಲು ಪೊಲೀಸರು ನಿನ್ನೆ ತ್ವರಿತ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯ ವಾರಂಟ್ ಜಾರಿ ಮಾಡಿದೆ.
ಬಿ ಎಸ್ ಯಡಿಯೂರಪ್ಪ ಅವರು ವಿಚಾರಣೆಗೆ ಬರದೇ ಕಾಲಾವಕಾಶ ಕೋರಿದ್ದು ಜೊತೆಗೆ ನಿರೀಕ್ಷಣಾ ಜಾಮೀನು ಪಡೆಯಲು ಅರ್ಜಿ ಸಲ್ಲಿಕೆ ಮಾಡಿದ್ದರು. ಇದನ್ನು ತಿರಸ್ಕರಿಸಿದ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
ಪುತ್ತೂರು; ಖ್ಯಾತ ನಟಿ ಅನುಷ್ಕಾ ಶೆಟ್ಟಿ ಮಾವನಿಂದ ಚೂರಿ ಇರಿತ
ಅತ್ಯಾಚಾರ ಸಂಸತ್ರಸ್ತ ಅಪ್ರಾಪ್ತ ಬಾಲಕಿ ಮತ್ತು ಆಕೆಯ ಸಂಬಂಧಿಕರು ಕಾನೂನಾತ್ಮಕ ನೆರವು ಕೇಳಲು ಬಿ ಎಸ್ ಯಡಿಯೂರಪ್ಪ ಅವರ ಮನೆಗೆ ಹೋಗಿದ್ದ, ಸಂದರ್ಭದಲ್ಲಿ ಬಾಲಕಿಯನ್ನು ಮಾತ್ರ ಕೋಣೆಯೊಳಗೆ ಕರೆದುಕೊಂಡು ಹೋಗಿ ಮಾಹಿತಿ ಪಡೆಯುವುದಾಗಿ ಹೇಳಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿತ್ತು.
ಈ ಘಟನೆಗೆ ಸಂಬಂಧಪಟ್ಟಂತೆ ಯಡಿಯೂರಪ್ಪ ಅವರ ಮೇಲೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ವೊಂದು ಮಾರ್ಚ್ ತಿಂಗಳಲ್ಲಿ ದಾಖಲಾಗಿತ್ತು. ನಂತರ ರಾಜ್ಯ ಸರಕಾರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿತ್ತು. ಸಿಐಡಿ ಪೊಲೀಸರು ನೋಟಿಸನ್ನು ಎರಡು ಬಾರಿ ನೀಡಿದರೂ ಹಾಜರಾಗದ ಕಾರಣ ಯಡಿಯೂರಪ್ಪ ಬಂಧನ ಮಾಡಲೆಂದು ಕೋರ್ಟ್ ಮೊರೆ ಹೋಗಿದ್ದರು.
ಆದರೆ ಯಡಿಯೂರಪ್ಪ ಅವರು ಚುನಾವಣೆಯ ಕಾರಣ ಹೇಳಿ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಹೇಳಿ, ಒಂದು ವಾರಗಳ ಕಾಲಾವಕಾಶವನ್ನು ಕೇಳಿದ್ದರು. ಇದಕ್ಕೆ ಸಿಐಡಿ ಪೊಲೀಸರು ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಕಾಲಾವಕಾಶ ಕೇಳಿದ್ದ ಯಡಿಯೂರಪ್ಪ ಅವರು ನಂತರ ಬಂಧನ ಸಾಧ್ಯತೆಯಿರುವುದರಿಂದ ನಿರೀಕ್ಷಣಾ ಜಾಮೀನು ಪಡೆಯಲು ಅರ್ಜಿ ಸಲ್ಲಿಕೆ ಮಾಡಿದ್ದರು. ಇದೀಗ ಫಾಸ್ಟ್ ಟ್ರ್ಯಾಕ್ ಕೋರ್ಟ್ ಮುಂದೆ ಸಿಐಡಿ ಪರ ವಕೀಲರು ಸಮಪರ್ಕ ವಾದ ಮಾಡಿದ್ದರಿಂದ ಯಡಿಯೂರಪ್ಪ ಬಂಧನಕ್ಕೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದ್ದರು.
ಶೇ.90 ರಷ್ಟು ತನಿಖೆ ಮುಗಿದಿದ್ದು, ಯಡಿಯೂರಪ್ಪ ಅವರ ವಿಚಾರಣೆ ಮಾತ್ರ ಬಾಕಿ ಇದೆ ಎಂದು ಹೇಳಿದ್ದು, ಅವರು ನೋಟಿಸ್ ನೀಡಿದರೂ ಹಾಜರಾಗುತ್ತಿಲ್ಲ , ಹಾಗಾಗಿ ಜಾಮೀನು ರಹಿತ ವಾರೆಂಟ್ ಜಾರಿ ಮಾಡಬೇಕೆಂದು ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಈ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯಾದ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಹಾಗಾಗಿ ಯಾವುದೇ ಕ್ಷಣದಲ್ಲಿ ಬಿಎಸ್ ಯಡಿಯೂರಪ್ಪ ಅವರ ಬಂಧನ ಆಗುವ ಸಾಧ್ಯತೆ ಇದೆ.
ಆನ್ಲೈನಲ್ಲಿ ಆರ್ಡರ್ ಮಾಡಿ ತರಿಸಿದ ಐಸ್ಕ್ರೀಮ್ ನಲ್ಲಿ ಮನುಷ್ಯನ ಬೆರಳು ಪತ್ತೆ !!
Breshey Maslo