Murder Case: ರೇಣುಕಾ ಸ್ವಾಮಿಯನ್ನು ನಿಜವಾಗಿಯೂ ಕೊಂದಿದ್ದು ಹೇಗೆ ಗೊತ್ತಾ? ಜಡ್ಜ್ ಎದುರು ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಸರ್ಕಾರಿ ವಕೀಲರು !!

Murder Case: ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ(Renuka Swamy Case) ಆರೋಪದಡಿ ಬಂಧನವಾಗಿರುವ ಆರೋಪಿ ದರ್ಶನ್ ಅಂಡ್ ಗ್ಯಾಂಗ್ ಅನ್ನು ಪೋಲೀಸರು ಕೋರ್ಟ್(Court) ಗೆ ಹಾಜರು ಪಡಿಸಲಾಗಿದ್ದು, ಮತ್ತೆ 5 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ. ಅಂದಹಾಗೆ ಕೋರ್ಟಿನಲ್ಲಿ ಸರ್ಕಾರಿ ಪರ ವಕೀಲರು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಹೌದು, ರೇಣುಕಾ ಸ್ವಾಮಿಯನ್ನು ಹೇಗೆ ಹತ್ಯೆ ಮಾಡಲಾಗಿತ್ತು ಎಂದು ಇದುವರೆಗೂ ಬೇರೆ ಬೇರೆ ರೀತಿಯಲ್ಲಿ ಕಥೆಗಳನ್ನು ಆರೋಪಿಗಳು ಪೋಲೀಸರೆದುರು ಬಿಚ್ಚಿಟ್ಟಿದ್ದರು. ಆದರೀಗ ರೇಣುಕಾಸ್ವಾಮಿಗೆ ನಟ ದರ್ಶನ್ ಮತ್ತು ಆತನ ಸಹಚರರು ಎಲೆಕ್ಟ್ರಿಕ್ ಶಾಕ್ ಕೊಟ್ಟು ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದಾರೆ ಎಂದು ಸರ್ಕಾರಿ ವಿಶೇಷ ಅಭಿಯೋಜಕ (ಎಸ್‌ಪಿಪಿ) ಪಿ. ಪ್ರಸನ್ನ ಕುಮಾರ್(Prasanna Kumar) ಅವರು ನ್ಯಾಯಾಧೀಶರ ಮುಂದೆ ಮಾಹಿತಿ ನೀಡಿದ್ದಾರೆ.

ಅಂದಹಾಗೆ ವಿಚಾರಣೆ ವೇಳೆ ನ್ಯಾಯಾಧೀಶರಿಗೆ ಪೊಲೀಸ್ ತನಿಖೆಯ ಬಗ್ಗೆ ವಿಚಾರಣಾ ವರದಿ ಒಪ್ಪಿಸಿದ ಎಸ್‌ಪಿಪಿ ಪ್ರಸನ್ನ ಕುಮಾರ್ ಅವರು ‘ರೇಣುಕಾಸ್ವಾಮಿಗೆ ಗಂಭೀರ ಹಲ್ಲೆ ಮಾಡಿದ್ದೂ ಅಲ್ಲದೇ ಮೆಗ್ಗರ್ ಎಂಬ ಡಿವೈಸ್‌ನಿಂದ ಎಲೆಕ್ಟ್ರಿಕ್ ಶಾಕ್ ಕೊಟ್ಟು ಸಾಯಿಸಲಾಗಿದೆ. ಕೊಲೆ ಆರೋಪಿಗಳಾದ ಎ3 ಆರೋಪಿ ಪವನ್ ಮತ್ತು ಎ5 ಆರೋಪಿ ನಂದೀಶ್ ಎಲೆಕ್ಟ್ರಿಕ್ ಶಾಕ್ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಎಲೆಕ್ಟ್ರಿಕ್ ಡಿವೈಸ್ ಅನ್ನು ಪೊಲೀಸರು ಸ್ಥಳ ಮಹಜರು ಮಾಡಿ ವಶಕ್ಕೆ ಪಡೆಯಬೇಕಿದೆ. ಆದ್ದರಿಂದ ಆರೋಪಿಗಳನ್ನು ಮತ್ತಷ್ಟು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕೊಡಬೇಕು ಎಂದು ನ್ಯಾಯಾಲಯದ ಮುಂದೆ ಮನವಿ ಮಾಡಿದ್ದಾರೆ.

ಡಿ ಗ್ಯಾಂಗ್ ಮತ್ತೆ 5 ದಿನ ಕಸ್ಟಡಿಗೆ:
ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಬಂಧನವಾಗಿರುವ ನಟ ದರ್ಶನ್ ಸೇರಿದಂತೆ ಒಟ್ಟು 16 ಜನರ ಪೊಲೀಸ್ ಕಸ್ಟಡಿ ಅಂತ್ಯಗೊಂಡಿದ್ದ ಹಿನ್ನೆಲೆಯಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ವಿಚಾರಣೆ ಮಾಡಿದ ಮ್ಯಾಜಿಸ್ಟ್ರೇಟ್ ವಿಶ್ವನಾಥ್ ಸಿ.ಗೌಡರ್ ಅವರು ಮತ್ತೆ 5 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ.

Leave A Reply

Your email address will not be published.