D.K: ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ, ಮಂಗಳೂರು ಪದಾಧಿಕಾರಿಗಳಿಂದ ನೂತನ ಸಂಸದ ಕ್ಯಾ. ಬ್ರಿಜೇಶ್ ಚೌಟರಿಗೆ ಅಭಿನಂದನೆ ಸಲ್ಲಿಕೆ

D.K: ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ (ರಿ.) ಮಂಗಳೂರು ಇದರ ಅಧ್ಯಕ್ಷರು ಶ್ರೀ ಬಾಲಕೃಷ್ಣ ಡಿ.ಬಿ.ಹಾಗೂ ಪದಾಧಿಕಾರಿಗಳಿಂದ ದಕ್ಷಿಣ ಕನ್ನಡ ಜಿಲ್ಲಾ ನೂತನ ಸಂಸದರಾದಂತಹ ಕ್ಯಾ. ಬ್ರಿಜೇಶ್ ಚೌಟರನ್ನು ಅಭಿನಂದಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾನ್ಯ ಸಂಸದರು ಶ್ರೀ ಕ್ಷೇತ್ರ ಆದಿಚುಂಚನಗಿರಿ ಕಾವೂರು ಶಾಖಾ ಮಠದ ಶ್ರೀ ಶ್ರೀ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರ ಆರ್ಶೀವಾದ ಹಾಗೂ ಮಾರ್ಗದರ್ಶನವನ್ನು ಪಡೆದು ಜಿಲ್ಲೆಯ ಒಕ್ಕಲಿಗ ಸಮುದಾಯದ ಸಮಗ್ರ ಅಭಿವೃಧ್ದಿಗೆ ಸಹಕಾರವಿದೆ ಎಂದು ಭರವಸೆ ನೀಡಿದರು.

 

ಮಾಜಿ ಶಾಸಕರಾದಂತಹ ಸಂಜೀವ ಮಠಂದೂರು , ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಉಪಾಧ್ಯಕ್ಷರಾದಂತಹ ಭಾಸ್ಕರ್ ದೇವಸ್ಯ , ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ನಿರ್ದೇಶಕರಾದಂತಹ ರಕ್ಷಿತ್ ಪುತ್ತಿಲ ಮತ್ತು ಶ್ರೀಮತಿ ಸಾರಿಕಾ ಸುರೇಶ್ ಉಪಸ್ಥಿತರಿದ್ದರು.

Leave A Reply

Your email address will not be published.