Pavitra Gowda: ಸ್ವಲ್ಪವೂ ಪ್ರಾಯಶ್ಚಿತವಿಲ್ಲ, ಸ್ಥಳ ಮಹಜರು ವೇಳೆ ನಗುನಗುತ್ತಲೇ ಓಡಾಡುತ್ತಾಳೆ ಪವಿತ್ರ ಗೌಡ !!

Pavitra Gowda: ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ (Renukaswamy Murder Case) A1 ಆರೋಪಿಯಾಗಿ ಆರೇಳು ದಿನಗಳಿಂದ ಪೋಲೀಸ್ ಕಸ್ಟಡಿಯಲ್ಲಿರುವ ಮಾಯಾಂಗನೆ ಪವಿತ್ರ ಗೌಡಳಿಗೆ ತಾನು ಒಬ್ಬನ ಜೀವ ತೆಗೆದಿದ್ದೇನೆ ಎಂದು ಸ್ವಲ್ಪವೂ ಪ್ರಾಯಶ್ಚಿತ್ತ ಇದ್ದಂತೆ ಕಾಣುವುದಿಲ್ಲ. ನಗುನಗುತ್ತಲೇ ಓಡಾಡುತ್ತಿದ್ದಾಳೆ.

ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಆರೋಪಿ ಪವಿತ್ರಾ ಗೌಡ(Pavitra Gowda) ಸೇರಿ ಕೆಲ ಆರೋಪಿಗಳ ಮನೆಗಳಲ್ಲಿ ಸ್ಥಳ ಮಹಜರು ನಡೆಸಿ ಕೆಲ ಮಹತ್ವದ ಸಾಕ್ಷ್ಯ ಸಂಗ್ರಹಿಸಿದ್ದಾರೆ.
ರಾಜರಾಜೇಶ್ವರಿನಗರದಲ್ಲಿರುವ ಆರೋಪಿ ಪವಿತ್ರಾ ಗೌಡ ಅವರ ನಿವಾಸಕ್ಕೆ ಆರೋಪಿ ಪವನ್‌(Pavan) ಮತ್ತು ಪವಿತ್ರಾ ಗೌಡ ಇಬ್ಬರನ್ನು ಕರೆತಂದು ಸ್ಥಳ ಮಹಜರು ನಡೆಸಿದರು. ಈ ವೇಳೆ ಇಡೀ ಪ್ರಕರಣಕ್ಕೆ ಮೂಲ ಆಗಿರುವ ಪವಿತ್ರ ನಗುತ್ತಲೇ ಮಾಧ್ಯಮಗಳಿಗೆ ಪೋಸ್ ನೀಡಿದ್ದಾಳೆ.

ಹೌದು, ಪೊಲೀಸರು ಸ್ಥಳ ಮಹಜರಿಗೆ ಮನೆಗೆ ಕರೆತಂದ ವೇಳೆ ಪವಿತ್ರಾ ಗೌಡ ಮತ್ತು ಪವನ್‌ ನಗುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆರೋಪಿ ಪವನ್‌ ಪೊಲೀಸರ ಭದ್ರತೆಯಲ್ಲಿ ಮನೆ ಪ್ರವೇಶಿಸುವ ನಗುತ್ತಾ ಹೋಗುತ್ತಾನೆ. ಸ್ಥಳ ಮಹಜರು ಮುಗಿಸಿ ಮನೆಯಿಂದ ಹೊರಗೆ ಬರುವಾಗ ಆರೋಪಿ ಪವಿತ್ರಾ ಸಹ ನಗುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.

ಅಂದಹಾಗೆ ಸ್ಥಳ ಮಹಜರಿಗೆ ಬಂದಿದ್ದ ವಿಧಿ ವಿಜ್ಞಾನ ಪ್ರಯೋಗಾಲಯ(ಎಫ್‌ಎಸ್‌ಎಲ್‌)ದ ತಜ್ಞರ ತಂಡವು ಪವಿತ್ರಾ ಗೌಡ ಮನೆಯಲ್ಲಿ ಕೆಲವು ಮಾದರಿಗಳನ್ನು ಸಂಗ್ರಹಿಸಿದೆ. ಅಂತೆಯೆ ಪೊಲೀಸರು ಪವಿತ್ರಾ ಗೌಡ ಮನೆಯ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿಗಳನ್ನು ಸಂಗ್ರಹಿಸಿದರು. ಪವಿತ್ರಾ ಓಡಾಡುವ ಐಷಾರಾಮಿ ಸೇರಿ ಮೂರು ಕಾರುಗಳನ್ನೂ ತಪಾಸಣೆ ನಡೆಸಿದರು.

Leave A Reply

Your email address will not be published.