Home Jobs Canara Bank Recruitment 2024: ಕೆನರಾ ಬ್ಯಾಂಕ್‌ನಲ್ಲಿ ಉದ್ಯೋಗ ಅವಕಾಶ! ಕೂಡಲೇ ಅರ್ಜಿ ಸಲ್ಲಿಸಿ!

Canara Bank Recruitment 2024: ಕೆನರಾ ಬ್ಯಾಂಕ್‌ನಲ್ಲಿ ಉದ್ಯೋಗ ಅವಕಾಶ! ಕೂಡಲೇ ಅರ್ಜಿ ಸಲ್ಲಿಸಿ!

Canara Bank Recruitment 2024

Hindu neighbor gifts plot of land

Hindu neighbour gifts land to Muslim journalist

Canara Bank Recruitment 2024: ಬ್ಯಾಂಕ್ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣ ಅವಕಾಶ ಇಲ್ಲಿದೆ. ಕೆನರಾ ಬ್ಯಾಂಕ್‌ನ ಲೆಕ್ಕಪತ್ರ ಮತ್ತು ಆಡಳಿತ ಪ್ರಕ್ರಿಯೆಯನ್ನು ನೋಡಿಕೊಳ್ಳಲು, ಕೆನರಾ ಬ್ಯಾಂಕ್‌ನಲ್ಲಿ ಖಾಲಿಯಿರುವ ಅಕೌಂಟ್ಸ್ ಮತ್ತು ಅಡ್ಮಿನಿಸ್ಟ್ರೇಷನ್ ಸೆಕ್ರೆಟರಿ ಹುದ್ದೆಗಳ ನೇಮಕಾತಿಗೆ (Canara Bank recruitment 2024) ಅರ್ಜಿ ಆಹ್ವಾನ ಮಾಡಲಾಗಿದೆ. ಸದ್ಯ ಈ ಹುದ್ದೆಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಂದೇ ಅರ್ಜಿ ಸಲ್ಲಿಸಬಹುದು.

Bollywood: ಬಾಲಿವುಡ್ ನ ಸೂಪರ್ ಹಿಟ್ ಶೋಲೆ ಚಿತ್ರದ ಗುಟ್ಟು ರಟ್ಟಾಗಿದೆ! ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ!

ವಯೋಮಿತಿ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 28 ವರ್ಷ, SC/ST ಅಭ್ಯರ್ಥಿಗಳಿಗೆ 25 ವರ್ಷ ಮತ್ತು ಇತರೆ ವರ್ಗದ ಅಭ್ಯರ್ಥಿಗಳಿಗೆ 25 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ.

ವಿದ್ಯಾರ್ಹತೆ:

ಅಭ್ಯರ್ಥಿಗಳು B.Com ಪದವಿ ಪಡೆದಿರಬೇಕು. ಕಂಪ್ಯೂಟರ್ ಮತ್ತು ಅಕೌಂಟಿಂಗ್ ಸಾಫ್ಟ್‌ವೇರ್ ಜೊತೆಗೆ ಖಾತೆಗಳು ಮತ್ತು ಸಾಮಾನ್ಯ ಆಡಳಿತ ನಿರ್ವಹಿಸುವಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.

ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 30,000 ರೂ. ವೇತ ನೀಡಲಾಗುತ್ತದೆ. ಜೊತೆಗೆ ಸವಲತ್ತುಗಳು ಮತ್ತು ಇತರ ಪ್ರಯೋಜನಗಳು ದೊರೆಯಲಿವೆ.

ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ಮುಖಾಮುಖಿ ಸಂದರ್ಶನದ ಮೂಲಕ ಅಂತಿಮ ಆಯ್ಕೆಯನ್ನು ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಜೂನ್ 30ರೊಳಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಧಾನ :

1) ಕೆನರಾ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ https://canarabank.com/pages/Recruitment ಭೇಟಿ ನೀಡಿ ಮತ್ತು ನೇಮಕಾತಿ ವಿಭಾಗದಡಿ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ

2) ಡೌನ್‌ಲೋಡ್ ಮಾಡಿರುವ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಬಳಿಕ ನಿಮ್ಮ ಫೋಟೋ ಮತ್ತು ಸಹಿ ಸೇರಿದಂತೆ ಶೈಕ್ಷಣಿಕ ಪ್ರಮಾಣಪತ್ರಗಳು ಮತ್ತು ಅನುಭವದ ಪುರಾವೆ ಸೇರಿದಂತೆ ಎಲ್ಲಾ ಅಗತ್ಯ ದಾಖಲೆಗಳನ್ನು ಲಗತ್ತಿಸಿ.

3) SC/ST ಅಭ್ಯರ್ಥಿಗಳಿಗೆ 300 ರೂ. ಮತ್ತು ಇತರೆ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕವನ್ನು ಪಾವತಿಸಿ

4) ʼCANBANK VENTURE CAPITAL FUND LIMITEDʼ ಹೆಸರಿನಲ್ಲಿ ಡಿಮ್ಯಾಂಡ್ ಡ್ರಾಫ್ಟ್ ತೆಗೆದುಕೊಳ್ಳಿರಿ

5) ನಂತರ ಭರ್ತಿ ಮಾಡಿದ ಫಾರ್ಮ್ ಮತ್ತು ದಾಖಲೆಗಳನ್ನು CANBANK VENTURE CAPITAL FUND LIMITED (CVCFL) ಬೆಂಗಳೂರು – 560004 ಈ ವಿಳಾಸಕ್ಕೆ ಕಳುಹಿಸಬೇಕು.

ಮುಖ್ಯವಾಗಿ ಸರಿಯಾದ ಸಮಯಕ್ಕೆ ಮತ್ತು ಸೂಕ್ತ ದಾಖಲೆಗಳೊಂದಿಗೆ ಕಳುಹಿಸಿದ ಅರ್ಹ ಅರ್ಜಿಗಳನ್ನು ಮಾತ್ರ ಸ್ವೀಕರಿಸಲಾಗುತ್ತದೆ.

Tomato Prices: ಟೊಮೇಟೊ ಶತಕ ಬಾರಿಸಿದ್ದು, ಮಳೆಯಿಂದಾಗಿ ಪರಿಸ್ಥಿತಿ ಬಿಗಡಾಯಿಸುವ ಸಾಧ್ಯತೆ