Dakshina Kannada: ಉಳ್ಳಾಲ : ಮನೆಯ ಪಕ್ಕದ ಆವರಣಗೋಡೆ ಮನೆಯ ಮೇಲೆ ಬಿದ್ದು ಒಂದೇ ಮನೆಯ ನಾಲ್ವರು ಸಾವು

Share the Article

Dakshina Kannada: ಮಂಗಳೂರು : ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿ ನಗರ ಎಂಬಲ್ಲಿ ಬುಧವಾರ ಬೆಳಗ್ಗೆ ಮನೆಯ ಹಿಂಬದಿಯಲ್ಲಿದ್ದ ಕಂಪೌಂಡ್ ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.

ಮನೆಯೊಳಗಿದ್ದ ಯಾಸಿರ್(45),ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಮೃತ ದುರ್ದೈವಿಗಳು.

ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ರಕ್ಷಣ ಕಾರ್ಯಾಚರಣೆ ನಡೆಸಲಾಗಿದೆ. ಇಬ್ಬರ ಶವಗಳನ್ನು ಹೊರ ತೆಗೆಯಲಾಗಿದೆ.
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅವಘಡ ಸಂಭವಿಸಿದೆ. ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಮನೆಯ ಗೋಡೆ, ಕುಸಿದು ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ.

Jharkhand : ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್- 25 ರಿಂದ 50 ವರ್ಷದೊಳಗಿನ ಮಹಿಳೆಯರಿಗೆ ಪ್ರತಿ ತಿಂಗಳು ಕೈ ಸೇರುತ್ತೆ 1,000 ರೂ !!

Leave A Reply

Your email address will not be published.